Sangeetha.V: ಮೈಸೂರಿನಲ್ಲಿ ಮದುವೆಯಾಗಿದ್ದ ಈ ಖ್ಯಾತ ನಟಿ.. ಹೊಸ ಹ್ಯುಂಡೈ ವೆರ್ನಾ ಕಾರು ಖರೀದಿ
ತಮಿಳಿನ ಖ್ಯಾತ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ (Nelson Dilipkumar) ಆಕ್ಷನ್ ಕಟ್ ಹೇಳಿದ್ದ ಡಾಕ್ಟರ್, ಜೈಲರ್ ಸಿನಿಮಾದಲ್ಲಿ ಹ್ಯಾಸ ನಟನಾಗಿ ಅಭಿನಯಿಸಿದ್ದ ರೆಡಿನ್ ಕಿಂಗ್ಸ್ಲಿ (Redin Kingsley) 46ನೇ ವಯಸ್ಸಿನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಕಿರುತೆರೆ ನಟಿ ಸಂಗೀತಾ.ವಿ (Sangeetha.V) ಅವರನ್ನು ಮದುವೆಯಾಗಿದ್ದಾರೆ.
ಮೈಸೂರಿನಲ್ಲಿ (Mysuru) ಆಪ್ತರ ಸಮ್ಮುಖದಲ್ಲಿ ಭಾನುವಾರ ಈ ಜೋಡಿ ವಿವಾಹವಾಗಿತ್ತು. ನಾಡದೇವತೆ ಚಾಮುಂಡೇಶ್ವರಿ ದೇಗುಲದ ಮುಂದೆ ರೆಡಿನ್ ಕಿಂಗ್ಸ್ಲಿ ಹಾಗೂ ಸಂಗೀತಾ ಅವರು ನಿಂತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದವು. ಮದುವೆಗೂ ಕೆಲವು ದಿನಗಳ ಮುನ್ನ, ನಟಿ ಸಂಗೀತಾ ಹೊಚ್ಚ ಹೊಸ ಹ್ಯುಂಡೈ ವೆರ್ನಾ (Hyundai Verna) ಕಾರನ್ನು ಖರೀದಿಸಿದ್ದರು. ಆ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದರು.

ನಟಿ ಸಂಗೀತಾ ಕಪ್ಪು ಬಣ್ಣದ ಹ್ಯುಂಡೈ ವೆರ್ನಾ ಕಾರನ್ನು ಕೊಂಡುಕೊಂಡಿದ್ದಾರೆ. ಆದರೆ, ಯಾವ ರೂಪಾಂತರವೆಂಬುದರ ಕುರಿತು ವಿವರಗಳಿಲ್ಲ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಸಿಗುವ ಹ್ಯುಂಡೈ ವೆರ್ನಾ ಸೆಡಾನ್ ರೂ.10.96 ಲಕ್ಷದಿಂದ ರೂ.17.38 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇಎಕ್ಸ್, ಎಸ್ ಸೇರಿದಂತೆ 4 ರೂಪಾಂತರದ ಆಯ್ಕೆಯಲ್ಲಿ ಲಭ್ಯವಿದೆ.
ಈ ಕಾರು, ಎರಡು ಪವರ್‌ಟ್ರೇನ್ ನೊಂದಿಗೆ ಸಿಗುತ್ತದೆ. ಇದರ 1.5 - ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್, 160 PS ಗರಿಷ್ಠ ಪವರ್ ಹಾಗೂ 253 Nm ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದ್ದು, 6 - ಸ್ವೀಡ್ ಮ್ಯಾನುವಲ್ ಅಥವಾ 7 - ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಮತ್ತೊಂದು, 1.5 - ಲೀಟರ್ ನ್ಯಾಚುರಲ್ ಅಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 PS ಪವರ್ ಮತ್ತು 144 Nm ಪೀಕ್ ಟಾರ್ಕ್ ಹೊರಹಾಕುತ್ತದೆ. 6 - ಸ್ವೀಡ್ ಮ್ಯಾನುವಲ್ ಅಥವಾ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಮೈಲೇಜ್ ವಿಚಾರವಾಗಿ ಹೇಳುವುದಾದರೆ, ರೂಪಾಂತರಗಳಿಗೆ ಅನುಗುಣವಾಗಿ ವೆರ್ನಾ ಸೆಡಾನ್ 18.6 - 20.6 kmpl ಇಂಧನ ದಕ್ಷತೆಯನ್ನು ಹೊಂದಿದೆ.
ಹ್ಯುಂಡೈ ವೆರ್ನಾ ಟೈಟಾನ್ ಗ್ರೇ, ಟೆಲ್ಲೂರಿಯನ್ ಬ್ರೌನ್, ಟೈಫೂನ್ ಸಿಲ್ವರ್ ಸೇರಿದಂತೆ 7 ಮೊನೊಟೋನ್, 2 ಡುಯಲ್ ಟೋನ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 8 - ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಆಂಬಿಯೆಂಟ್ ಲೈಟಿಂಗ್, ಸಿಂಗಲ್ ಪೇನ್ ಸನ್‌ರೂಫ್ ಒಳಗೊಂಡಂತೆ ಹಲವು ಫೀಚರ್ಸ್ ಇವೆ.
ಸುರಕ್ಷತೆಯ ದೃಷ್ಟಿಯಿಂದಲ್ಲೂ ಈ ಕಾರು, ಅತ್ಯುತ್ತಮವಾಗಿದೆ. 6 ಏರ್‌ಬ್ಯಾಗ್, ISOFIX ಚೈಲ್ಡ್ ಸೀಟ್ ಆಂಕಾರೇಜ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಜರ್ ಮಾನಿಟರಿಂಗ್ ಸಿಸ್ಟಮ್), ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








