ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್‌ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
ಜನಪ್ರಿಯ ನಟ ಮೋಹನ್ ಲಾಲ್ ನಟನೆಯ ಸೂಪರ್ ಹಿಟ್ ಚಿತ್ರ ದೃಶ್ಯಂ ಭಾರತೀಯ ಚಿತ್ರರಂಗದಲ್ಲಿ ಭಾರಿ ಸಂಚಲನವನ್ನು ಸೃಷ್ಟಿಸಿತ್ತು. ಬಹು ಭಾಷೆಗಳಲ್ಲಿ ರಿಮೇಕ್ ಆಗುತ್ತಿರುವ ಈ ಅಪರೂಪದ ಚಿತ್ರಗಳಲ್ಲಿ ಇದು ಕೂಡ ಒಂದು. ದೃಶ್ಯಂ ಸೂಪರ್ ಹಿಟ್ ಆಗುತ್ತಿದ್ದಂತೆ ಜೀತು ಜೋಸೆಫ್ ಅವರ ದೃಶ್ಯದ ಎರಡನೇ ಭಾಗವನ್ನು ಕೂಡ ಬಿಡುಗಡೆ ಮಾಡಿದ್ದರು.
ಇದು OTT ಅಲ್ಲಿ ಬಿಡುಗಡೆಯಾಗಿ ಬಂದಿದ್ದರೂ, ಇದು ಪ್ಯಾನ್-ಇಂಡಿಯನ್ ಮಟ್ಟದಲ್ಲಿಯೂ ಗಮನ ಸೆಳೆಯಿತು. ಮೊದಲ ಚಿತ್ರದಂತೆ, ಎರಡನೇ ಭಾಗವು ಭಾರಿ ಗಮನ ಸೆಳೆಯುವಲ್ಲಿ ಯಶಸ್ವಿಯಾಯ್ತು. ಈ ಚಿತ್ರದಲ್ಲಿ ವಕೀಲೆ ಪಾತ್ರ ನಿರ್ವಹಿಸಿದ ರೇಣುಕಾಳ ಮುಖವನ್ನು ಸಿನಿ ಪ್ರಿಯರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಟಿಯ ಹೆಸರು ಶಾಂತಿ ಮಾಯಾದೇವಿ (Santhi Mayadev), ಇವರು ರಿಯಲ್ ಲೈಫ್ ನಲ್ಲೂ ವಕೀಲೆಯಾಗಿರುವುದರಿಂದ ಸಿನಿಮಾದಲ್ಲಿ ಬಹಳ ಸುಲಭವಾಗಿ ಪಾತ್ರ ನಿರ್ವಹಿಸಿದ್ದಾರೆ.

ದೃಶ್ಯಂ ಅಲ್ಲದೇ ಹಲವಾರು ಮಲಯಾಳಂ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಈ ಜನಪ್ರಿಯ ನಟಿ ಶಾಂತಿ ಮಾಯಾದೇವಿ ಅವರು ಟೊಯೊಟಾ ಹೈಕ್ರಾಸ್ ಎಂಪಿವಿಯನ್ನು ಖರೀದಿಸಿದ್ದಾರೆ. ನಟಿ ಕೊಚ್ಚಿಯ ಟೊಯೊಟಾದ ಪ್ರಮುಖ ಡೀಲರ್ ಆದ ಕೈರಲಿ ಟೊಯೊಟಾದಿಂದ ಈ ನಟಿ ಕಾರಿನ ವಿತರಣೆಯನ್ನು ಪ್ರಾರಂಭಿಸಿದ್ದಾರೆ. ಶಾಂತಿ ತನ್ನ ಪತಿ ಮತ್ತು ಮಗಳೊಂದಿಗೆ ಹೈಕ್ರಾಸ್ ಡೆಲಿವರಿ ತೆಗೆದುಕೊಂಡಿದ್ದಾರೆ. ಇದರ ವೀಡಿಯೋವನ್ನು ನಟಿ ಶಾಂತಿ ಮಾಯಾದೇವಿ ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.
ನಟಿ ಶಾಂತಿ ಮಾಯಾದೇವಿ ಅವರು ಕೊಚ್ಚಿಯಲ್ಲಿ ನೆಲೆಸಿರುವುದರಿಂದ ವಾಹನವೂ ಅಲ್ಲೇ ನೋಂದಣಿಯಾಗಿದೆ. ನಟಿ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯ ಟಾಪ್ ವೆರಿಯೆಂಟ್ ZX ಹೈಬ್ರಿಡ್ ರೂಪಾಂತರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಈ ಕಾರಿನ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.30.98 ಲಕ್ಷವಾದರೆ, ಆನ್ ರೋಡ್ ಬೆಲೆ ಸುಮಾರು 39.85 ಲಕ್ಷ ರೂ. ಆಗಿದೆ.

ಈ ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಯು ಅವಂತ್ ಗಾರ್ಡೆ ಬ್ರೌನ್ಸ್ ಮೆಟಾಲಿಕ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್ ಪರ್ಲ್ ಕ್ರಿಸ್ಟಲ್ ಶೈನ್, ಬ್ಲ್ಯಾಕ್ಲಿಶ್ ಅಗೆಹಾ ಗ್ಲಾಸ್ ಫ್ಲೇಕ್, ಸಿಲ್ವರ್ ಮೆಟಾಲಿಕ್, ಸೂಪರ್ ವೈಟ್, ಪ್ಲಾಟಿನಂ ವೈಟ್ ಪರ್ಲ್ ಮತ್ತು ಆಟಿಟ್ಯೂಡ್ ಬ್ಲ್ಯಾಕ್ ಮೈಕಾ ಎಂಬ ಬಣ್ಣಗಳ ಆಯ್ಕೆಗಳಲ್ಲಿ ಲಭ್ಯವಿದೆ. ಈ ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಎಂಪಿವಿಯು 7 ಮತ್ತು 8 ಸೀಟುಗಳ ಸಂರಚನೆಯಲ್ಲಿಯು ಲಭ್ಯವಿದೆ.
ಈ ಟೊಯೊಟಾ ಇನ್ನೋವಾ ಹೈಕ್ರಾಸ್ GX (O) ಮಾದರಿಯಲ್ಲಿ 2.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ನೀಡಲಾಗಿದೆ. ಈ ಎಂಜಿನ್ 172 bhp ಮತ್ತು 205 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು CVT ಗೇರ್‌ಬಾಕ್ಸ್‌ಗೆ ಜೋಡಿಸಲಾಗಿದೆ. ಈ ಎಂಪಿವಿಯ ಹೈಬ್ರಿಡ್ ಅಲ್ಲದ ಆವೃತ್ತಿಯು 16.13 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಹೆಚ್ಚುವರಿಯಾಗಿ, ಈ ಇನ್ನೋವಾ ಹೈಕ್ರಾಸ್ 2.0 ಲೀಟರ್ 4-ಸಿಲಿಂಡರ್ ಅಟ್ಕಿನ್ಸನ್ ಸ್ಟ್ರಾಂಗ್ ಹೈಬ್ರಿಡ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ಈ ಎಂಜಿನ್ 172 ಬಿಹೆಚ್‍ಪಿ ಪವರ್ ಮತ್ತು 205 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಸ್ಟ್ರಾಂಗ್ ಹೈಬ್ರಿಡ್ ಟಾಪ್ VX, ZX ಮತ್ತು ZX (O) ಟ್ರಿಮ್‌ಗಳೊಂದಿಗೆ ಮಾತ್ರ ಲಭ್ಯವಿದೆ.
ಈ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಸ್ಟಾರ್ಟ್ ಅಸಿಸ್ಟ್, ಬ್ರೇಕ್ ಅಸಿಸ್ಟ್, ಫ್ರಂಟ್ & ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








