ಸಾಮಾನ್ಯ ಕಾರಿನಲ್ಲಿ ಸಿಂಪಲ್ ಡ್ರೆಸ್‌ನಲ್ಲಿ ಬಂದಿಳಿದ ಖ್ಯಾತ ಬಾಲಿವುಡ್ ನಟಿ

ಭಾರತದಲ್ಲಿ ಫುಲ್ ಸೈಜ್ ಎಸ್‌ಯುವಿ ಎಂದಾಗ ನಮ್ಮ ಮನಸ್ಸಿಗೆ ಬರುವ ಮೊದಲ ಹೆಸರು ಟೊಯೊಟಾ ಫಾರ್ಚುನರ್ ಆಗಿದೆ. ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಟೊಯೊಟಾ ಫಾರ್ಚೂನರ್ ಹಲವು ವರ್ಷಗಳಿಂದ ಪ್ರಾಬಲ್ಯ ಸಾಧಿಸುತ್ತಿದೆ. ಪ್ರತಿ ತಿಂಗ ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ತನ್ನ ಪ್ರತಿಸ್ಪರ್ಧಿಗಳನ್ನು ಹಿಂದಿಕ್ಕಿ ಅಗ್ರಸ್ಥಾನದಲ್ಲಿ ಮುಂದುವರೆಯುತ್ತಿದೆ.

ದೇಶದ ರಾಜಕಾರಣಿಗಳು ಅಥವಾ ಉದ್ಯಮಿಗಳು ಬಳಕೆ ಮಾಡುವ ಪ್ರಮುಖ ಎಸ್‍ಯುವಿಗಳಲ್ಲಿ ಫಾರ್ಚೂನರ್ ಒಂದಾಗಿದೆ. ಈ ಫಾರ್ಚೂನರ್ ಎಸ್‍ಯುವಿ ಎಷ್ಟು ಜನಪ್ರಿಯವಾಗಿದೆ ಎಂದರೆ ಬಾಲಿವುಡ್‌ನ ಜನಪ್ರಿಯ ನಟ ಮತ್ತು ನಟಿಯರು ಕೂಡ ಬಳಸುತ್ತಾರೆ. ಇತ್ತೀಚೆಗೆ ಜನಪ್ರಿಯ ಬಾಲಿವುಡ್ ನಟಿ ಶ್ರದ್ಧಾ ಕಪೂರ್ (Shraddha Kapoor) ಅವರು ಟೊಯೊಟಾ ಫಾರ್ಚೂನರ್ ಎಸ್‍ಯುವಿಯಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರದ್ಧಾ ಕಪೂರ್ ತನ್ನ ಟೊಯೊಟಾ ಫಾರ್ಚುನರ್ ಜೊತೆಗಿನ ವೀಡಿಯೊವನ್ನು ಯೂಟ್ಯೂಬ್‌ನಲ್ಲಿ ಮೂವಿಫೈಡ್ ಮೂಲಕ ತಮ್ಮ ಚಾನಲ್‌ನಲ್ಲಿ ಹಂಚಿಕೊಂಡಿದ್ದಾರೆ.

Shraddha Kapoor Spotted In Her Toyota Fortuner

ವೀಡಿಯೊದಲ್ಲಿ, ಜನಪ್ರಿಯ ನಟಿ ಮುಂಬೈನ ಸಾಂತಾಕ್ರೂಜ್‌ನಲ್ಲಿರುವ ಮ್ಯಾಡಾಕ್ ಫಿಲ್ಮ್ಸ್ ಕಚೇರಿಗೆ ಆಗಮಿಸುತ್ತಿರುವುದನ್ನು ನೋಡಬಹುದು. ನಟಿ ತನ್ನ ಕಾರಿನಿಂದ ಹೊರಬರುತ್ತಿರುವುದು ಕಂಡುಬಂದಿದೆ. ಕಚೇರಿಯನ್ನು ಪ್ರವೇಶಿಸುವ ಮೊದಲು, ನಟಿ ಅಲ್ಲಿ ನಿಂತು ಪಾಪರಾಜಿ ತನ್ನ ಫೋಟೋ ಕ್ಲಿಕ್ ಮಾಡಲು ಪೋಸ್ ಕೊಟ್ಟರು. ನಟಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯು ಬ್ಲ್ಯಾಕ್ ಬಣ್ಣವನ್ನು ಹೊಂದಿದೆ. ನಟಿ ಶ್ರದ್ಧಾ ಕಪೂರ್ ಅವರ ಫಾರ್ಚೂನರ್‌ನ ನಿಖರವಾದ ರೂಪಾಂತರವು ಯಾವುದು ಎಂದು ತಿಳಿದಿಲ್ಲ.

ಟೊಯೊಟಾ ಫಾರ್ಚುನರ್ ಹೊರತುಪಡಿಸಿ, ಶ್ರದ್ಧಾ ಕಪೂರ್ ಅವರ ಬಳಿ ಹಲವಾರು ಕಾರುಗಳಿವೆ. "ಬಾಘಿ" ಖ್ಯಾತಿಯ ನಟಿ ಮೊದಲ ತಲೆಮಾರಿನ ಮಾರುತಿ ಸುಜುಕಿ ಗ್ರಾಂಡ್ ವಿಟಾರಾ ಮತ್ತು ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಅನ್ನು ಸಹ ಹೊಂದಿದ್ದಾರೆ. ನಟಿ ತಮ್ಮ ಈ ಎರಡೂ ಕಾರುಗಳಲ್ಲಿ ಹಲವಾರು ಸಂದರ್ಭಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಅವರ ಬಳಿ ಮರ್ಸಿಡಿಸ್ ML-250 CDI ಎಸ್‍ಯುವಿ ಮತ್ತು ಮೊದಲ ತಲೆಮಾರಿನ BMW 3-ಸೀರಿಸ್ ಅನ್ನು ಹೊಂದಿದ್ದಾರೆ.

Shraddha Kapoor Spotted In Her Toyota Fortuner

ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಟೊಯೊಟಾ ತನ್ನ ಫಾರ್ಚೂನರ್ ಎಸ್‍ಯುವಿಯನ್ನು ನವೀಕರಿಸಿ ಹೊಸ ಫೇಸ್‌ಲಿಫ್ಟ್ ಮಾದರಿಯನ್ನು ಬಿಡುಗಡೆಗೊಳಿಸಿತು. ಪೂರ್ಣ ಗಾತ್ರದ ಎಸ್‌ಯುವಿ ವಿಭಾಗದ ಮಾರಾಟದಲ್ಲಿ ಟೊಯೊಟಾ ಫಾರ್ಚೂನರ್ ದೀರ್ಘಕಾಲದಿಂದ ಅಗ್ರಸ್ಥಾನದಲ್ಲಿದೆ. ಏಳು-ಸೀಟುಗಳ ಪ್ರಸ್ತುತ ಜನರೇಷನ್ ಫಾರ್ಚೂನರ್ ಅನ್ನು 2016 ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು.

ಫಾರ್ಚೂನರ್ ಜಿಆರ್ ಸ್ಪೋರ್ಟ್ ರೂಪಾಂತರವನ್ನು ಸರಣಿಗೆ ಸೇರಿಸಲಾಯಿತು. ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಲೆಜೆಂಡರ್ ಆವೃತ್ತಿಯು ಮಾರಾಟದಲ್ಲಿದೆ ಮತ್ತು ಇದು 4X4 ಆಯ್ಕೆಯೊಂದಿಗೆ ಸಹ ಲಭ್ಯವಿದೆ. ಟೊಯೊಟಾ ಲೆಜೆಂಡರ್‌ನ 4×4 ರೂಪಾಂತರವನ್ನು ಫಾರ್ಚುನರ್‌ನ ಶ್ರೇಣಿಗೆ ಸೇರಿಸಿತು ಮತ್ತು ಇದು ಕ್ಲಾಸ್-ಲೀಡಿಂಗ್ 7-ಸೀಟರ್ ಎಸ್‍ಯುವಿಯ ಬೆಲೆಯನ್ನು ಮತ್ತಷ್ಟು ಹೆಚ್ಚಿಸಿತು. ಫಾರ್ಚುನರ್‌ನ ಜಿಆರ್-ಸ್ಪೋರ್ಟ್ ರೂಪಾಂತರವನ್ನು ಕೂಡ ಬಿಡುಗಡೆಗೊಳಿಸಿತ್ತು.

Shraddha Kapoor Spotted In Her Toyota Fortuner

ಈ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಬೆಲೆಗಳಲ್ಲಿನ ಹೆಚ್ಚಳವನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಫಾರ್ಚೂನರ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಫಾರ್ಚೂನರ್ ಫೇಸ್‌ಲಿಫ್ಟ್ ಎಸ್‍ಯುವಿಯು ಸಂಯೋಜಿತ ಎಲ್‌ಇಡಿ ಡಿಆರ್‌ಎಲ್‌ಗಳೊಂದಿಗೆ ನವೀಕರಿಸಿದ ಎಲ್‌ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿವೆ. ಈ ಫಾರ್ಚುನರ್ ಎಸ್‍ಯುವಿ ಕ್ರೋಮ್ ಸರೌಂಡ್‌ನೊಂದಿಗೆ ದೊಡ್ಡ ಫ್ರಂಟ್ ಗ್ರಿಲ್, ಫಾಗ್ ಲ್ಯಾಂಪ್‌ಗಳಿಗಾಗಿ ಹೊಸ ಹೌಸಿಂಗ್‌ಗಳೊಂದಿಗೆ ನವೀಕರಿಸಿದ ಫ್ರಂಟ್ ಬಂಪರ್ ಹೊಂದಿದೆ.

ಇದರಲ್ಲಿ ಹೊಸ 18 ಇಂಚಿನ ಅಲಾಯ್ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ಎಲ್ಇಡಿ ಟೈಲ್ ಲ್ಯಾಂಪ್ ಗಳನ್ನು ಹೊಂದಿವೆ. ಟೊಯೊಟಾ ಫಾರ್ಚುನರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಒಳಭಾಗದಲ್ಲಿ ಈಗ ಹೆಚ್ಚು ಪ್ರೀಮಿಯಂ ಆಗಿ ನವೀಕರಿಸಿದ್ದು, ಕೆಲವು ಹೊಸ ಫೀಚರ್ಸ್ ಅನ್ನು ಹೊಂದಿದೆ. ಆಪಲ್ ಕಾರ್ ಪ್ಲೇ ಮತ್ತು ಆಂಡ್ರಾಯ್ಡ್ ಆಟೋಗಳೊಂದಿಗಿನ ಹೊಸ 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಕನೆಕ್ಟಿವಿಟಿ ಕಾರು ತಂತ್ರಜ್ಞಾನವನ್ನು ಕೂಡ ಹೊಂದಿದೆ.

ಈ ಎಸ್‍ಯುವಿಯ ವೆಂಟಿಲೇಟಡ್ ಮುಂಭಾಗದ ಸೀಟುಗಳು, ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 11-ಸ್ಪೀಕರ್ ಜೆಬಿಎಲ್ ಆಡಿಯೊ ಸಿಸ್ಟಂ, ಆಂಬಿಯೆಂಟ್ ಲೈಟಿಂಗ್ ಮತ್ತು ಇತರ ಫೀಚರ್ ಗಳನ್ನು ಹೊಂದಿವೆ. ಇನ್ನು ಟೊಯೊಟಾ ತನ್ನ ಫಾರ್ಚುನರ್ ಲೆಜೆಂಡರ್ 4X4 ವೆರಿಯೆಂಟ್ ಭಾರತೀಯ ಮಾರುಕಟ್ಟೆಯಲ್ಲಿ ಕೆಲವು ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತ್ತು. ಈ ಜನಪ್ರಿಯ ಟೊಯೊಟಾ ಫಾರ್ಚುನರ್ ಎಸ್‍ಯುವಿಯ ಟಾಪ್ ವೆರಿಯೆಂಟ್ ಲೆಜೆಂಡರ್ ಆಗಿದೆ.

Article Published On: Thursday, October 12, 2023, 17:49 [IST]
English summary
Actress shraddha kapoor spotted in her toyota fortuner viral video details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+