7 ತಲೆಮಾರು ತಿನ್ನುವಷ್ಟು ಸಂಪತ್ತು ಇದ್ದರೂ ನಟಿಗೆ ಸಾಮಾನ್ಯ ಮಾರುತಿ ಕಾರ್ ಮೇಲೆ ಯಾಕಿಷ್ಟು ಪ್ರೀತಿ ಗೊತ್ತಾ?
ಕಾರುಗಳ ಬಗ್ಗೆ ಕ್ರೇಜ್ ಅನ್ನೋದು ಯಾರಿಗೆ ಇರಲ್ಲ ಹೇಳಿ, ಅದರಲ್ಲಿಯು ಸಿನಿಮಾ ಸೆಲಬ್ರಿಟಿಗಳಿಗಂತೂ ಈ ಕ್ರೇಜ್ ಸ್ವಲ್ಪ ಹೆಚ್ಚು ಇರುತ್ತದೆ. ತಾವು ಹೆಚ್ಚಾಗಿ ಐಷಾರಾಮಿ ಕಾರುಗಳಲ್ಲಿ ಓಡಾಡಲು ಇಷ್ಟ ಪಡುತ್ತಾರೆ. ಇದರಿಂದ ಮಾರುಕಟ್ಟೆಗೆ ಲಗ್ಗೆ ಇಡುವ ಹೊಸ ಐಷಾರಾಮಿ ಕಾರುಗಳನ್ನು ಖರೀದಿಸುವುದು ಸೆಲಬ್ರಿಟಿಗಳ ನಡುವೆ ಒಂದು ಟ್ರೆಂಡ್ ಆಗಿದೆ. ಬಾಲಿವುಡ್ ಖ್ಯಾತ ನಟಿ ಶ್ರದ್ಧಾ ಕಪೂರ್ (Shraddha Kapoor) ಅವರಿಗೂ ಕಾರುಗಳ ಬಗ್ಗೆ ಹೆಚ್ಚು ಕ್ರೇಜ್ ಅನ್ನು ಹೊಂದಿದ್ದಾರೆ. ಈ ಜನಪ್ರಿಯ ನಟಿ ಸೂಪರ್ ಕಾರುಗಳು ಸೇರಿದಂತೆ ಹಲವಾರು ದುಬಾರಿ ಕಾರುಗಳನ್ನು ಹೊಂದಿದ್ದಾರೆ.
ಆದರೆ ಇತ್ತೀಚೆಗೆ ಈ ಜನಪ್ರಿಯ ಬಾಲಿವುಡ್ ನಟಿ ಸಾಮಾನ್ಯ ಸ್ವಿಫ್ಟ್ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಈ ನಟಿಯು ಸುಮಾರು 125 ಕೋಟಿ ರೂಪಾಯಿ ಆಸ್ತಿ ಹೊಂದಿರುವ ನಟಿ ತುಂಬಾ ಸರಳ ಜೀವನ ನಡೆಸುತ್ತಾರೆ ಎಂದರೆ ನೀವು ನಂಬುತ್ತೀರಾ? ಇದು ನಿಜ. ಇವರು ಅತ್ಯಂತ ಜನಪ್ರಿಯ ಬಾಲಿವುಡ್ ನಟಿಯರಲ್ಲಿ ಒಬ್ಬರು. ಸದ್ಯ ಸಿನಿಮಾವೊಂದರಲ್ಲಿ ನಟಿಸಲು ಶ್ರದ್ಧಾ ಕಪೂರ್ 5-7 ಕೋಟಿ ರೂಪಾಯಿ ಸಂಭಾವನೆಯನ್ನು ಪಡೆಯುತ್ತಿದ್ದಾರೆ.

ಇದಲ್ಲದೇ ಮಾಡೆಲಿಂಗ್ ಮತ್ತು ಜಾಹೀರಾತುಗಳ ಮೂಲಕ ಶ್ರದ್ಧಾ ಕಪೂರ್ ಆದಾಯ ಗಳಿಸುತ್ತಿದ್ದಾರೆ. ಕೋಟಿಗಟ್ಟಲೆ ಸಂಪಾದನೆ ಮಾಡುತ್ತಿದ್ದರು. ಈ ಹಿಂದೆ ಶ್ರದ್ಧಾ ಕಪೂರ್ ತುಂಬಾ ಸಾಧಾರಣ ಟೊಯೊಟಾ ಫಾರ್ಚೂನರ್‌ನಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡುವುದನ್ನು ನಾವು ನೋಡಿದ್ದೇವೆ. ಆ ಎಲ್ಲಾ ವಿಡಿಯೋಗಳು ಬಿಡುಗಡೆಯಾಗಿ ಅಭಿಮಾನಿಗಳ ಮನಗೆದ್ದಿವೆ. ಈ ಸಾಲಿನಲ್ಲಿ ಇದೀಗ ಹೊಸದೊಂದು ವೀಡಿಯೋ ವೈರಲ್ ಆಗಿದೆ
ಈ ವೈರಲ್ ವೀಡಿಯೊದಲ್ಲಿ ಶ್ರದ್ಧಾ ಕಪೂರ್ ಅತ್ಯಂತ ಸಾಧಾರಣ ಮಾರುತಿ ಸುಜುಕಿ ಸ್ವಿಫ್ಟ್ ಅನ್ನು ಚಾಲನೆ ಮಾಡುವುದನ್ನು ನಾವು ನೋಡಬಹುದು. ಇದು ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್ ಆಗಿದೆ. ಮಾರುತಿ ಸುಜುಕಿ ಕಳೆದ ಮೇ ತಿಂಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ತಲೆಮಾರಿನ ಸ್ವಿಫ್ಟ್ ಅನ್ನು ಬಿಡುಗಡೆ ಮಾಡಿತ್ತು. ಭಾರತೀಯ ಮಾರುಕಟ್ಟೆಯಲ್ಲಿ ಈ ಹೊಸ ತಲೆಮಾರಿನ ಮಾರುತಿ ಸುಜುಕಿ ಸ್ವಿಫ್ಟ್‌ನ ಆರಂಭಿಕ ಬೆಲೆ 6.49 ಲಕ್ಷ ರೂ. ಆಗಿದೆ.

ಈ ಮಾರುತಿ ಸ್ವಿಫ್ಟ್ ಕಾರು LXi, VXi, VXi (O), ZXi, ಮತ್ತು ZXi+ ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ನೂತನ ಸ್ವಿಫ್ಟ್ ಭರಪೂರ ವೈಶಿಷ್ಟ್ಯಗಳೊಂದಿಗೆ ಕೈಗೆಟುಕುವ ದರದಲ್ಲಿ ಸಿಗುವುದರಿಂದ ಹಲವರ ಕುಟುಂಬದ ಆಯ್ಕೆಯ ವಾಹನವಾಗುವುದರಲ್ಲಿ ಎರಡು ಮಾತಿಲ್ಲ. ಹೊಸ ಮಾರುತಿ ಸ್ವಿಫ್ಟ್ ಕಾರಿನಲ್ಲಿ ಹೊಸ Z-ಸೀರಿಸ್ 1.2 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ.
ಈ ಎಂಜಿನ್ 80.46 bhp ಪವರ್ ಮತ್ತು 111.7 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಅಥವಾ 5-ಸ್ಪೀಡ್ AMT ಯುನಿಟ್ (AGS) ಅನ್ನು ಜೋಡಿಸಲಾಗಿದೆ. ಈ ಸ್ವಿಫ್ಟ್ ಕಾರಿನ ಮ್ಯಾನುವಲ್ ರೂಪಾಂತರವು 24.80km ನಷ್ಟು ಮೈಲೇಜ್ ನೀಡಿದರೆ, AGS ರೂಪಾಂತರವು 25.75 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಇನ್ನು ಮಾರುತಿ ಸ್ವಿಫ್ಟ್ ಸಿಎನ್‌ಜಿ 4.5 ಕೋಟಿ ಕಾರು ಖರೀದಿಸಿ ಪೂಜೆ ಮಾಡಿಸಲು ದೇವಸ್ಥಾನಕ್ಕೆ ಏಕಾಂಗಿಯಾಗಿ ಕಾರು ಓಡಿಸಿದ ಖ್ಯಾತ ನಟಿ
ಕಾರು 1.2-ಲೀಟರ್ ಪೆಟ್ರೋಲ್/ಸಿಎನ್‌ಜಿ ಎಂಜಿನ್ ಅನ್ನು ಹೊಂದಿದೆ.ಈ ಎಂಜಿನ್ 69 ಪಿಎಸ್ ಪವರ್ ಹಾಗೂ 102 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಎಂಜಿನ್ ಅನ್ನು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಸಿಎನ್‌ಜಿ ಮಾದರಿಯು 32.85 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
ಮಾರುತಿ ಸ್ವಿಫ್ಟ್ ಅನ್ನು ಸಿಜ್ಲಿಂಗ್ ರೆಡ್, ಲುಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಆರು ಮೊನೊಟೋನ್ ಪೇಂಟ್ ಸ್ಕೀಮ್‌ಗಳಲ್ಲಿ ಲಭ್ಯವಿದೆ. ಇನ್ನು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಸಿಜ್ಲಿಂಗ್ ರೆಡ್, ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಲುಸ್ಟರ್ ಬ್ಲೂ ಮತ್ತು ಮಿಡ್ನೈಟ್ ಬ್ಲ್ಯಾಕ್ ರೂಫ್ನೊಂದಿಗೆ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಮೂರು ಡ್ಯುಯಲ್-ಟೋನ್ ಬಣ್ಣ ಆಯ್ಕೆಗಳನ್ನು ಹೊಂದಿವೆ.
ಈ ಸ್ವಿಫ್ಟ್ ಹ್ಯಾಚ್‌ಬ್ಯಾಕ್‌ಗೆ ಹ್ಯುಂಡೈ ಗ್ರಾಂಡ್ ಐ10 ನಿಯೋಸ್, ಹ್ಯುಂಡೈ ಎಕ್ಸ್‌ಟರ್ ಮತ್ತು ಟಾಟಾ ಪಂಚ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಈ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಲ್ಲಿ 9 - ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.


Click it and Unblock the Notifications








