ಐಷಾರಾಮಿ ರೇಂಜ್ ರೋವರ್ ಕಾರು ಖರೀದಿಸಿದ ನಟಿ ಮಾಧುರಿ ದೀಕ್ಷಿತ್: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!

ಬಾಲಿವುಡ್‌ನ ಜನಪ್ರಿಯ ನಟಿಯರಲ್ಲಿ ಮಾಧುರಿ ದೀಕ್ಷಿತ್ (Madhuri Dixit) ಕೂಡ ಒಬ್ಬರು. ಇಂದಿಗೂ ಅವರಿಗೆ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟಿಯಾಗಿದ್ದಾರೆ. ಅವರು ಇತ್ತೀಚೆಗೆ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುವುದು ತೀರ ಅಪರೂಪ, ಆದರೆ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಅವರು ದುಬಾರಿ ಬೆಲೆಯ ಹೊಚ್ಚಹೊಸ ರೇಂಜ್ ರೋವರ್ (Range Rover) ಕಾರು ಖರೀದಿಸಿ ಸುದ್ದಿಯಾಗಿದ್ದಾರೆ.

ನಟಿ ಮಾಧುರಿ ದೀಕ್ಷಿತ್ ಅವರು ತಮ್ಮ ಪತಿ ಡಾ. ಶ್ರೀರಾಮ್ ನೆನೆಯೊಂದಿಗೆ ಹೊಸ ಕಾರಿನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಹೊಸ ರೇಂಜ್ ರೋವರ್ ಕಾರಿನ ಬೆಲೆಯು ರೂ.4 ಕೋಟಿ ಆಗಿದೆ. ನಟಿ ರೇಂಜ್ ರೋವರ್ ಎಸ್‍ಯುವಿಯ ಆಟೋಬಯೋಗ್ರಫಿ LWB 3.0 ಡೀಸೆಲ್ ರೂಪಾಂತರವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದಲ್ಲದೆ, ಮಾಧುರಿ ದೀಕ್ಷಿತ್ ಅವರು ಮರ್ಸಿಡಿಸ್ ಮೇಬ್ಯಾಕ್ S560 ಮತ್ತು ಪೋರ್ಷೆ 911 ಟರ್ಬೊ ಎಸ್ ಕಾರುಗಳನ್ನು ಹೊಂದಿದ್ದಾರೆ.

Madhuri Dixit

ನಟಿ ತನ್ನ ಹೊಸ ರೇಂಜ್ ರೋವರ್‌ನಲ್ಲಿ ಜುಹೂಗೆ ಆಗಮಿಸುತ್ತಿರುವ ವೀಡಿಯೊವನ್ನು ಯೂಟ್ಯೂಬ್‌ನಿಂದ ಕಾರ್ಸ್ ಫಾರ್ ಯೂ ಚಾನೆಲ್ ಶೇರ್ ಮಾಡಿದ್ದಾರೆ. ಈ ವೀಡಿಯೊ ಟಿ ಮಾಧುರಿ ದೀಕ್ಷಿತ್ ಅವರ ಪತಿ ಡ್ರೈವರ್ ಸೀಟಿನಿಂದ ಹೊರಬರುವುದರೊಂದಿಗೆ ಪ್ರಾರಂಭವಾಗುತ್ತದೆ. ಇದರ ನಂತರ, ಅವರು ಎಸ್‍ಯುವಿಯ ಮುಂಭಾಗದ ಪ್ರಯಾಣಿಕರ ಸೀಟಿನಿಂದ ಹೊರಗೆ ಬರುತ್ತಾರೆ.

ನಟಿ ಖರೀದಿಸಿದ ಹೊಸ ರೇಂಜ್ ರೋವರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಇದು ಹೊಸ ಗ್ರಿಲ್ ಮತ್ತು ಹೆಡ್‌ಲ್ಯಾಂಪ್‌ನೊಂದಿಗೆ ಇದು ಹೆಚ್ಚು ಹೊಳಪು ತೋರುತ್ತಿದೆ. ಈ ರೇಂಜ್ ರೋವರ್ ಎಸ್‍ಯುವಿಯಲ್ಲಿ ಸಮತಟ್ಟಾದ ಮೇಲ್ಮೈಗಳು ಕೇವಲ 0.30 ಸಿಡಿಯ ಪ್ರಭಾವಶಾಲಿ ಡ್ರ್ಯಾಗ್ ಅಂಶವವನ್ನು ಒಳಗೊಂಡಿದೆ. ಈ ಮಾದರಿಯು 23-ಇಂಚಿನ ಅಲಾಯ್ ವ್ಹೀಲ್ ಗಳನ್ನು ಹೊಂದಿವೆ.

Madhuri Dixit

ಆದರೆ ಇದರ ಸಣ್ಣ ಓವರ್‌ಹ್ಯಾಂಗ್‌ಗಳು ಬೃಹತ್ ಪ್ರಮಾಣವನ್ನು ನಿಯಂತ್ರಣದಲ್ಲಿಡುವುದನ್ನು ಖಚಿತಪಡಿಸುತ್ತದೆ. ಈ ಎಸ್‍ಯುವಿಯ ಟರ್ನ್ ಇಂಡಿಕೇಟರ್‌ಗಳನ್ನು ಸಂಯೋಜಿಸುವ ಟೈಲ್‌ಗೇಟ್‌ನಲ್ಲಿನ ಬ್ಲ್ಯಾಕ್ ಅಸ್ಸೆಂಟ್ ಗಳನ್ನು ಸಂಪರ್ಕಗೊಂಡಿರುವ ಹಿಂಭಾಗದ ಸ್ಪೋರ್ಟ್ಸ್ ಬ್ಲ್ಯಾಕ್ಡ್-ಔಟ್ ಟೈಲ್‌ಲೈಟ್‌ಗಳಾಗಿವೆ. ರೇಂಜ್ ರೋವರ್ ಎಸ್‍ಯುವಿಯ ಇಂಟಿರಿಯರ್ ನಲ್ಲಿ 13.7-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಅನ್ನು ಹೊಂದಿದೆ. ಇ

ನ್ನು ಸೆಂಟರ್ ಕನ್ಸೋಲ್ ದೊಡ್ಡ 13.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹ್ಯಾಪ್ಟಿಕ್ ಪ್ರತಿಕ್ರಿಯೆಯೊಂದಿಗೆ ಹೊಂದಿದೆ. ಇನ್ನು ಹಿಂಭಾಗದಲ್ಲಿ ಪ್ರಯಾಣಿಕರು 11.4-ಇಂಚಿನ ಮನರಂಜನಾ ಡಿಸ್ ಪ್ಲೇಯನ್ನು ಪಡೆಯುತ್ತಾರೆ. ಅದನ್ನು ಮುಂಭಾಗದ ಸೀಟ್‌ಬ್ಯಾಕ್‌ಗಳಿಗೆ ಜೋಡಿಸಲಾಗಿದೆ. ಇನ್ನು ಎಕ್ಸಿಕ್ಯುಟಿವ್ ಕ್ಲಾಸ್ ಹಿಂಬದಿಯ ಸೀಟುಗಳೊಂದಿಗೆ, ಸೆಂಟರ್ ಆರ್ಮ್‌ರೆಸ್ಟ್‌ನಲ್ಲಿ 8.0-ಇಂಚಿನ ಟಚ್‌ಸ್ಕ್ರೀನ್ ಕೂಡ ಇದೆ.

Madhuri Dixit

ಇದರೊಂದಿಗೆ ರೇಂಜ್ ರೋವರ್ 1600-ವ್ಯಾಟ್, 35-ಸ್ಪೀಕರ್ ಮೆರಿಡಿಯನ್ ಸಿಗ್ನೇಚರ್ ಸೌಂಡ್ ಸಿಸ್ಟಂ ಅನ್ನು ಸಹ ಪಡೆಯುತ್ತದೆ. ಆದರೆ ಆಟೋಬಯೋಗ್ರಫಿ ಟ್ರಿಮ್ ಹೆಡ್‌ರೆಸ್ಟ್‌ನಲ್ಲಿ ಎಂಬೆಡ್ ಮಾಡಲಾದ ವಿಶ್ವದ ಮೊದಲ ಆಕ್ಟಿವ್ ಸ್ಪೀಕರ್‌ಗಳನ್ನು ಹೊಂದಿದೆ. ಈ ಹೊಸ ರೇಂಜ್ ರೋವರ್ ಕ್ಯಾಬಿನ್‌ನಲ್ಲಿ ಹೆಚ್ಚು ಸಮರ್ಥನೀಯ ಐಷಾರಾಮಿ ವಸ್ತುಗಳನ್ನು ಬಳಸುತ್ತದೆ.ಹೊಸ ರೇಂಜ್ ರೋವರ್ ಎಸ್‍ಯುವಿಯು ಹೊಸ ಐದು-ಲಿಂಕ್ ಹಿಂಬದಿಯ ಆಕ್ಸಲ್‌ನೊಂದಿಗೆ ಅಡಾಪ್ಟಿವ್ ಏರ್ ಸಸ್ಪೆಂಕ್ಷನ್ ಅನ್ನು ಹೊಂದಿದೆ.

ಇದು ನ್ಯಾವಿಗೇಷನ್ ಸಿಸ್ಟಂ ಅನ್ನು ಮುಂದಿನ ರಸ್ತೆಗೆ ಅನುಗುಣವಾಗಿ ಹೊಂದಿಸಲು ಬಳಸುತ್ತದೆ. ರೇಂಜ್ ರೋವರ್ ಎಸ್‍ಯುವಿಯಲ್ಲಿ 3 ಎಂಜಿನ್ ಆಯ್ಕೆಗಳಲ್ಲಿ ನೀಡಲಾಗಿದೆ. ಇದು 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್, 3.0-ಲೀಟರ್ ಟರ್ಬೊ-ಡೀಸೆಲ್ ಮತ್ತು 4.4-ಲೀಟರ್ ಟ್ವಿನ್-ಟರ್ಬೊ ವಿ8 ಎಂಜಿನ್ ಗಳಾಗಿವೆ. ಇದರಲ್ಲಿ 3.0-ಲೀಟರ್ ಪೆಟ್ರೋಲ್ ಮೈಲ್ಡ್-ಹೈಬ್ರಿಡ್ 394 ಬಿಹೆಚ್‍ಪಿ ಪವರ್ ಮತ್ತು 550 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಟರ್ಬೊ-ಡೀಸೆಲ್ ಎಂಜಿನ್ 346 ಬಿಹೆಚ್‍ಪಿ ಪವರ್ ಮತ್ತು 700 ಎನ್ಎಂ ಟಾರ್ಕ್ ಉತ್ಪಾದಿಸಿದರೆ, ಟ್ವಿನ್-ಟರ್ಬೊ ವಿ8 ಎಂಜಿನ್ 523 ಬಿಹೆಚ್‍ಪಿ ಪವರ್ ಮತ್ತು 750 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಸ್‍ಯುವಿಯು 5.3 ಸೆಕೆಂಡ್‌ಗಳಲ್ಲಿ 0-100 ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಎಸ್‍ಯುವಿಯು ಸುಮಾರು 80 ಕಿ.ಮೀ ರೇಂಜ್ ಹೊಂದಿರಲಿದೆ. ಎಲ್ಲಾ ಮಾದರಿಗಳು ಆಲ್-ವೀಲ್ ಡ್ರೈವ್ ಮತ್ತು ಸಕ್ರಿಯ-ಲಾಕಿಂಗ್ ರಿಯರ್ ಡಿಫರೆನ್ಷಿಯಲ್ ಜೊತೆಗೆ ಸ್ಟ್ಯಾಂಡರ್ಡ್ ಬರುತ್ತವೆ.

More from DriveSpark

Article Published On: Friday, May 10, 2024, 11:45 [IST]
English summary
Actresses madhuri dixit spotted in her new range rover suv details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+