Aditya L1: ಇಸ್ರೋ ಮತ್ತೊಂದು ಮೈಲಿಗಲ್ಲು, ಚಂದ್ರನ ನಂತರ ಸೂರ್ಯನ ಶಿಕಾರಿ ಶುರು
ಚಂದ್ರಯಾನ-3 ರ ಯಶಸ್ಸಿನ ಸಂತಸದ ಬೆನ್ನಲ್ಲೇ ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ (ISRO) ಮತ್ತೊಂದು ಹೊಸ ಸಾಧನೆ ಮಾಡಿದ್ದಾರೆ. ಸೌರ ಬಾಹ್ಯಾಕಾಶ ಮಿಷನ್ ಆದಿತ್ಯ-ಎಲ್ 1 (Aditya L1) ನೌಕೆಯನ್ನು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಸ್ಥೆಯ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ
ಚಂದ್ರಯಾನ 3 ಬಳಿಕ ಸೂರ್ಯ ಶಿಕಾರಿಗೆ ಇಸ್ರೋ ಸಜ್ಜಾಗಿದೆ. ಭಾರತದ ಮಹತ್ವಾಕಾಂಕ್ಷೆಯ ಸೂರ್ಯಯಾನ ಯೋಜನೆಯ ಅಡಿಯಲ್ಲಿ ಆದಿತ್ಯ ಎಲ್-1ಬಾಹ್ಯಾಕಾಶ ನೌಕೆಯನ್ನು ಶನಿವಾರ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ .ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ L1 ಹೊತ್ತ ಪಿಎಸ್‌ಎಲ್‌ವಿ ರಾಕೆಟ್‌ನ (PSLV-XLC57) ಉಡಾವಣೆ ಯಶಸ್ವಿಯಾಗಿದೆ ಎಂದು ಭಾರಾತೀಯ ಬಾಹ್ಯಾಕಾಶ ವಿಜ್ಞಾನ ಸಂಶೋಧನಾ ಸಂಸ್ಥೆ ಇಸ್ರೋ ತಿಳಿಸಿದೆ.

ಚಂದ್ರಯಾನ-3ರ ಯಶಸ್ಸಿನ ನಂತರ ಇಡೀ ಜಗತ್ತು ಭಾರತದ ಸೌರ ಬಾಹ್ಯಾಕಾಶ ಮಿಷನ್ ಆದಿತ್ಯ-ಎಲ್ 1ನತ್ತ ಗಮನ ನೆಟ್ಟಿತ್ತು. ಇಂದು ಬೆಳಗ್ಗೆ ಭಾರತೀಯ ಕಾಲಮಾನ 11.50ರ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾ ಬಾಹ್ಯಾಕಾಶ ನಿಲ್ದಾಣದಿಂದ ಸೌರ ಬಾಹ್ಯಾಕಾಶ ಮಿಷನ್ ಆದಿತ್ಯ-ಎಲ್ 1ನ ಉಡಾವಣೆಯನ್ನು ಶ್ರೀಹರಿಕೋಟಾದಲ್ಲಿ ಸೇರಿದ್ದ ಸಾವಿರಾರು ಮಂದಿ ಸಾಕ್ಷಿಯಾದರೆ, ಆನ್ಲೈನ್ ಮೂಲಕ ಲೈವ್ ಪ್ರಾಸರವನ್ನು ಕೋಟ್ಯಂತರ ಮಂದಿ ವೀಕ್ಷಣೆ ಮಾಡಿದ್ದಾರೆ.
ಆದಿತ್ಯ L1 ಎಕ್ಸ್‌ಎಲ್ ಆವೃತ್ತಿಯ ಪಿಎಸ್‌ಎಲ್‌ವಿ ರಾಕೆಟ್‌ನ ಸಹಾಯದಿಂದ ಗುರಿಯನ್ನು ತಲುಪಿದೆ. ಈ ಸೌರ ಮಿಷನ್ ಸೂರ್ಯನ ಹೊರ ಪದರವನ್ನು ವೀಕ್ಷಿಸಲು ಬಾಹ್ಯಾಕಾಶ ನೌಕೆಯನ್ನು ಕಳುಹಿಸಲಾಗಿದೆ. ಈ ಮಿಷನ್ ಸೂರ್ಯನ ಕುರಿತ ಅಧ್ಯಯನಕ್ಕೆ ಇಸ್ರೋ ವಿಜ್ಞಾನಿಗಳಿಗೆ ನೆರವಾಗಲಿದೆ. ಭೂಮಿಯಿಂದ ಸರಿಸುಮಾರು 15 ಲಕ್ಷ ಕಿಮೀ ದೂರದಲ್ಲಿರುವ (930,000 ಮೈಲುಗಳು) ಲ್ಯಾಗ್ರೇಂಜ್ ಪಾಯಿಂಟ್-1 ರಲ್ಲಿ ಬಾಹ್ಯಾಕಾಶ ನೌಕೆಯನ್ನು ಇರಿಸಲಾಗುತ್ತದೆ.

ಲ್ಯಾಗ್ರೇಂಜ್ ಪಾಯಿಂಟ್-1 ಎಂದರೆ, ಭೂಮಿಯ ಮತ್ತು ಸೂರ್ಯನ ಗುರುತ್ವಾಕರ್ಷಣೆಯು ಪರಸ್ಪರ ಶೂನ್ಯವಾಗಿರುವ ಬಿಂದುವನ್ನು ಲ್ಯಾಗ್ರೇಂಜ್ ಪಾಯಿಂಟ್ 1 ಅಥವಾ ಎಲ್1 ಎಂದು ಕರೆಯಲಾಗುತ್ತದೆ. ಇಲ್ಲಿಂದ ಭಾರತ ನಿರಂತರವಾಗಿ ಸೂರ್ಯನ ಮೇಲೆ ಅಧ್ಯಯನ ಮಾಡಲು ಸಾಧ್ಯವಾಗಲಿದೆ. ಬಾಹ್ಯಾಕಾಶ ಸಂಸ್ಥೆಯ ವಿಶ್ವಾಸಾರ್ಹ ಪಿಎಸ್‌ಎಲ್‌ವಿ 125 ದಿನಗಳ ಪ್ರಯಾಣದಲ್ಲಿ ಆದಿತ್ಯ-ಎಲ್ 1 ಮಿಷನ್ ಅನ್ನು ಸಾಗಿಸಲಿದೆ ಎಂದು ಹೇಳಲಾಗುತ್ತಿದೆ.
ವರದಿಗಳ ಪ್ರಕಾರ, ಆದಿತ್ಯ L-1ಗಾಗಿ ಬೆಂಗಳೂರು ಮೂಲದ ಸಂಸ್ಥೆ IIA ಪೇಲೋಡ್ ತಯಾರಿಸಿದೆ. ಸೂರ್ಯ ಗ್ರಹಣವಾದಾಗ ಮಾತ್ರ ಅಧ್ಯಯನ ಸಾಧ್ಯವಾಗಲಿದೆ. ಸೂರ್ಯನ ಶಕ್ತಿಶಾಲಿ ಕಿರಣಗಳ ಅವಲೋಕನ, ಸೂರ್ಯನ ಅಧ್ಯಯನಕ್ಕೆ 7 ಪೆಲೋಡ್‌ಗಳ ಅಳವಡಿಕೆ ಮಾಡಲಾಗಿದೆ. ಪ್ರತಿನಿತ್ಯ ಸೂರ್ಯನ 1440 ಫೋಟೋವನ್ನು ಆದಿತ್ಯ ತೆಗೆಯಲಿದೆ. ಸೂರ್ಯನ ಮೇಲ್ಮೈ, ಸೂರ್ಯನ ಕಿರಣ, ತಾಪಮಾನ, ಸೌರಜ್ವಾಲೆ, ಸೂರ್ಯನ ಸುತ್ತಲಿನ ವಾತಾವರಣದ ಬಗ್ಗೆ ಆದಿತ್ಯ ಎಲ್-1 ಅಧ್ಯಯನ ನಡೆಸಲಿದೆ.
ಇನ್ನು ಆದಿತ್ಯ ಎಲ್-1 ಲ್ಯಾಗ್ರೇಂಜ್ 1 ಅನ್ನು ತಲುಪಲು ಸುಮಾರು 4 ತಿಂಗಳುಗಳನ್ನು ತೆಗೆದುಕೊಳ್ಳುತ್ತದೆ ಎಂಡು ಹೇಳಲಾಗುತ್ತಿದೆ. ಭೂಮಿ ಮತ್ತು ಸೂರ್ಯನ ನಡುವಿನ ಅಂತರವು ತುಂಬಾ ದೊಡ್ಡದಾಗಿರುವ ಕಾರಣ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ಭೂಮಿ ಮತ್ತು ಸೂರ್ಯರ ನಡುವೆ 15 ಕೋಟಿ ಕಿಲೋಮೀಟರ್ ಅಂತರವಿದೆ ಎನ್ನಲಾಗಿದೆ. ಭೂಮಿಯಿಂದ 15 ಲಕ್ಷ ಕಿಲೋಮೀಟರ್ ದೂರದಲ್ಲಿ ಎಲ್1 ಲ್ಯಾಗ್ರೇಂಜ್ ಪಾಯಿಂಟ್ ಇದೆ.
ಇಸ್ರೋ ಪ್ರಕಾರ, ಸೂರ್ಯನು ಹತ್ತಿರದ ನಕ್ಷತ್ರವಾಗಿರುವುದರಿಂದ, ಇತರ ನಕ್ಷತ್ರಗಳಿಗಿಂತ ಅಧ್ಯಯನ ಮಾಡುವುದು ಸುಲಭ ಎಂದು ಹೇಳಲಾಗುತ್ತಿದೆ. ಅಲ್ಲದೆ, ಸೂರ್ಯನನ್ನು ಅಧ್ಯಯನ ಮಾಡುವ ಮೂಲಕ, ಇತರ ಗ್ರಹಗಳ ಬಗ್ಗೆ ಅರ್ಥಮಾಡಿಕೊಳ್ಳಬಹುದು. ಇದು ಇತರ ಭವಿಷ್ಯದ ಅಧ್ಯಯನಗಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ಹೇಳಲಾಗುತ್ತಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಶಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡಲು ಮರೆಯದಿರಿ.


Click it and Unblock the Notifications