ನೀವು ಬೈಕ್ ಮಾಡಿಫೈ ಮಾಡ್ಸಿದ್ದೀರಾ? ಹಾಗಾದ್ರೆ ತಪ್ಪದೇ ಈ ಸುದ್ದಿ ಓದಿ...
ಬೈಕ್ ಮಾಡಿಫೈ ಮೇಲೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಇದು ಸಾರ್ವಜನಿಕ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಕಾನೂನು ಬಾಹಿರ ಬೈಕ್ ಮಾಡಿಫೈಗಳ ಮೇಲೆ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.
ಇತ್ತೀಚೆಗೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈ ಮೇಲೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಇದು ಸಾರ್ವಜನಿಕ ಜೀವನಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ. ಇದರಿಂದಾಗಿ ಕಾನೂನು ಬಾಹಿರ ಬೈಕ್ ಮಾಡಿಫೈಗಳ ಮೇಲೆ ಸಂಚಾರಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ.

ನಿಮಗೆಲ್ಲಾ ಗೊತ್ತಿರುವ ಹಾಗೆ ಈ ಹಿಂದೆ ಹಳ್ಳಿಗಳ ಕಡೆಗೆಲ್ಲಾ ರಾಯಲ್ ಎನ್‌ಫೀಲ್ಡ್ ಬೈಕ್‌ಗಳು ಬಂದ್ರೆ ಸಾಕು 1 ಕಿ.ಮಿ ದೂರವಿರುವಾಗಲೇ ಬೈಕ್ ಬರುತ್ತಿದೆ ಎಂಬುದು ಗೊತ್ತಾಗುತ್ತಿತ್ತು. ಆದ್ರೆ ಕಾಲ ಬದಲಾದಂತೆ ಬೈಕ್‌ಗಳ ಶಬ್ದ ಮಾಲಿನ್ಯಕ್ಕೆ ಬ್ರೇಕ್ ಹಾಕಲಾಗುತ್ತಿದ್ದು, ಎಕ್ಸಾಸ್ಟ್ ವೈಶಿಷ್ಟ್ಯತೆಗಳಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ.
Recommended Video


ಆದ್ರೆ ನಗರ ಪ್ರದೇಶಗಳಲ್ಲಿನ ಯುವ ಬೈಕ್ ಸವಾರರು ಬೈಕ್ ಮಾಡಿಫೈಗೆ ಹೆಚ್ಚಿನ ಆಸಕ್ತಿ ತೊರುತ್ತಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೈಕ್ ಮೂಲವನ್ನೆ ಬದಲಿಸುವುದು ಸಾಕಷ್ಟು ಟ್ರೆಂಡ್ ಆಗುತ್ತಿದೆ.

ಇದರಿಂದ ಬೈಕ್ ಸವಾರನಿಗೆ ಹೆಚ್ಚಿನ ಅನುಕೂಲಕತೆಗಳಿದ್ದರು ಅದು ಸಾರ್ವಜನಿಕ ಜೀವನದಲ್ಲಿ ಹೆಚ್ಚೆಚ್ಚು ಸಮಸ್ಯೆಗಳನ್ನು ಉದ್ಭವವಾಗುವಂತೆ ಮಾಡುತ್ತಿದೆ. ಜೊತೆಗೆ ಬೈಕ್‌ಗಳ ಎಕ್ಸಾಸ್ಟ್ ಬದಲಾವಣೆಯಿಂದಾಗಿ ಹೆಚ್ಚಿನ ಶಬ್ದ ಮಾಲಿನ್ಯಕ್ಕೆ ಎಡೆಮಾಡುಕೊಡುತ್ತಿದೆ.

ಹೀಗಾಗಿ ಸಾರ್ವಜನಿಕರು ಮಾಡಿಫೈ ಬೈಕ್ ಸವಾರರ ಜೊತೆ ಹಲವು ಸಂದರ್ಭಗಳಲ್ಲಿ ವಾಗ್ವಾದಕ್ಕೆ ಇಳಿಯುವುದು ಸಾಮಾನ್ಯವಾಗುತ್ತಿದ್ದು, ಮಾಡಿಫೈ ಬೈಕ್ ಸವಾರರ ವಿರುದ್ಧ ಪ್ರಕರಣಗಳನ್ನು ಕೂಡಾ ದಾಖಲಿಸುತ್ತಿದ್ದಾರೆ.

ಬೆಂಗಳೂರು ಮತ್ತು ಮೈಸೂರು, ಹುಬ್ಬಳ್ಳಿಯಲ್ಲೂ ಇಂತದ್ದೇ ಹಲವು ಪ್ರಕರಣಗಳು ನಡೆದಿದ್ದು, ಅದರಲ್ಲೂ ಅತಿ ಹೆಚ್ಚು ಪ್ರಕರಣಗಳು ರಾಯಲ್ ಎನ್‌ಫೀಲ್ಡ್ ಬೈಕ್‌ಗಳ ಮೇಲೆಯೇ ದಾಖಲಾಗಿವೆ.
ಸಾರ್ವಜನಿಕರು ನೀಡಿರುವ ದೂರಗಳ ಅನ್ವಯ ವಿಶೇಷ ಕಾರ್ಯಾಚರಣೆಗೆ ಇಳಿದಿರುವ ಸಂಚಾರಿ ಪೊಲೀಸರು ರಾಯಲ್ ಎನ್‌ಫೀಲ್ಡ್ ಸವಾರರಿಗೆ ಶಾಕ್ ನೀಡುತ್ತಿದ್ದಾರೆ. ಎಕ್ಸಾಸ್ಟ್ ಬದಲಿಸಿರುವ ಬೈಕ್‌ಗಳ ಸೈಲೆನ್ಸರ್‌ಗಳನ್ನು ಸ್ಪಾಟ್‌ನಲ್ಲೇ ಕಿತ್ತು ಹಾಕುತ್ತಿರುವ ಪೊಲೀಸರು ಭಾರೀ ಮೊತ್ತದ ದಂಡವನ್ನು ಕೂಡಾ ವಿಧಿಸುತ್ತಿದ್ದಾರೆ.

ಜೊತೆಗೆ ಕರ್ಕಶ ಸದ್ದು ಮಾಡುತ್ತಿದ್ದ ವಾಹನಗಳ ಸೈಲೆನ್ಸರ್ ಕಿತ್ತು ಹಾಕಿದ್ದ ಆಡುಗೋಡಿ ಪೊಲೀಸರು ಅವುಗಳ ಮೇಲೆ ರೋಡ್ ರೋಲರ್ ಹತ್ತಿಸಿ ನಾಶ ಮಾಡಿದ್ದಾರೆ.
ತಪ್ಪದೇ ಓದಿ-ವಾಹನಗಳ ನಂಬರ್‌ಪ್ಲೇಟ್ ಮೇಲೆ IND ಎಂದು ಏಕೆ ಬರೆಯುತ್ತಾರೆ ಗೊತ್ತೆ?

ಈ ಮೂಲಕ ಎಕ್ಸಾಸ್ಟ್ ಬದಲಿಸಿರುವ ರಾಯಲ್ ಎನ್‌ಫೀಲ್ಡ್ ಸವಾರರಿಂದ ಬರೋಬ್ಬರಿ ರೂ. 60 ಸಾವಿರಕ್ಕೂ ಹೆಚ್ಚು ದಂಡ ವಸೂಲಿ ಕೂಡಾ ಮಾಡಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ಪ್ಲ್ಯಾನ್ ಮಾಡುತ್ತಿದ್ದಾರೆ.

ಒಂದು ವೇಳೆ ನೀವು ಕೂಡಾ ರಾಯಲ್ ಬೈಕ್ ಅಥವಾ ಇತರೆ ಸೂಪರ್ ಬೈಕ್‌ಗಳನ್ನು ಹೊಂದಿದ್ದರೆ ಕಾನೂನು ಬಾಹಿರ ಬೈಕ್ ಮಾಡಿಫೈ ಮಾಡಿಸುವ ಮತ್ತೊಮ್ಮೆ ಯೋಚಿಸಿ. ಇಲ್ಲವಾದ್ರೆ ಭಾರೀ ಪ್ರಮಾಣದ ದಂಡ ಬೀಳುವುದಲ್ಲದೇ ಬೈಕ್ ಕೂಡಾ ಸೀಸ್ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ.
Trending On DriveSpark Kannada:
ಬರೋಬ್ಬರಿ 3 ಮರ್ಸಿಡಿಸ್ ಐಷಾರಾಮಿ ಕಾರುಗಳನ್ನು ಯಶ್ ಖರೀದಿಸಿದ್ದು ಏಕೆ ಗೊತ್ತೆ?


Click it and Unblock the Notifications








