ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಹೊಸ ಮೋಟಾರು ವಾಹನ ಕಾಯ್ದೆಯನ್ನು ಸೆಪ್ಟೆಂಬರ್ 1ರಿಂದ ಜಾರಿಗೊಳಿಸಲಾಗಿದೆ. ಈ ನಿಯಮದನ್ವಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರೀ ಪ್ರಮಾಣದ ದಂಡವನ್ನು ವಿಧಿಸಲಾಗುತ್ತಿದೆ. ಈ ಭಾರೀ ಪ್ರಮಾಣದ ಅರಿವಿರದ ಸಾರ್ವಜನಿಕರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ದಂಡದ ಮೊತ್ತವು ದುಬಾರಿಯಾದ ಕಾರಣಕ್ಕೆ ವಾಹನ ಸವಾರರು, ದಂಡಕ್ಕೆ ಹೆದರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವ ಪ್ರಮಾಣವು ಕಡಿಮೆಯಾಗಲಿದೆ ಎಂಬುದು ಸರ್ಕಾರದ ಅಭಿಪ್ರಾಯ. ಆದರೆ ಹಲವು ರಾಜ್ಯಗಳು ಈ ಹೊಸ ಮೋಟಾರು ಕಾಯ್ದೆಗೆ ವಿರೋಧ ವ್ಯಕ್ತಪಡಿಸಿವೆ.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಪಶ್ಚಿಮ ಬಂಗಾಳದಂತಹ ರಾಜ್ಯಗಳು ಈ ಕಾಯ್ದೆಯನ್ನು ಅನುಷ್ಟಾನಗೊಳಿಸಿಲ್ಲ. ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳು ದಂಡದ ಮೊತ್ತವನ್ನು ಕಡಿಮೆಗೊಳಿಸಿವೆ. ಮತ್ತೊಂದೆಡೆ ಪೊಲೀಸರು, ನಿಯಮ ಉಲ್ಲಂಘಿಸುವ ವಾಹನ ಸವಾರರಿಂದ ಭಾರೀ ಪ್ರಮಾಣದ ದಂಡವನ್ನು ವಸೂಲಿ ಮಾಡುತ್ತಿದ್ದಾರೆ.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಗುರುಗ್ರಾಮದ ನಿವಾಸಿಯೊಬ್ಬರಿಗೆ ಅವರ ಸ್ಕೂಟರಿಗಿಂತ ಹೆಚ್ಚಿನ ಬೆಲೆಯ ದಂಡವನ್ನು ವಿಧಿಸಲಾಗಿತ್ತು. ದೆಹಲಿಯ ಬೈಕ್ ಸವಾರನೊಬ್ಬ ದುಬಾರಿ ದಂಡ ವಿಧಿಸಿದ್ದ ಕಾರಣಕ್ಕೆ ತನ್ನ ಬೈಕಿಗೆ ತಾನೇ ಬೆಂಕಿ ಹಚ್ಚಿದ್ದ.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಭಾರೀ ಪ್ರಮಾಣದ ದಂಡ ವಿಧಿಸುತ್ತಿರುವ ಪ್ರಕರಣಗಳು ದೇಶದೆಲ್ಲೆಡೆಯಿಂದ ವರದಿಯಾಗುತ್ತಿವೆ. ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಸ್ಕೂಟರ್ ಸವಾರಿ ಮಾಡುತ್ತಿದ್ದ ದೆಹಲಿಯ ಮಹಿಳೆಯೊಬ್ಬರಿಗೆ ಪೊಲೀಸರು ದಂಡ ವಿಧಿಸಲು ಮುಂದದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದರು.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಈಗ ಈ ಎಲ್ಲವೂಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗುಜರಾತ್‍‍ನ ಅಹಮದಾಬಾದ್‍‍ನ ಆಟೋ ರಿಕ್ಷಾ ಚಾಲಕನೊಬ್ಬ ಭಾರೀ ಪ್ರಮಾಣದ ದಂಡ ವಿಧಿಸಿದ ಕಾರಣಕ್ಕೆ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಆತನಿಗೆ ರೂ.18,000 ದಂಡ ವಿಧಿಸಲಾಗಿತ್ತು. ಆ ಆಟೋ ಚಾಲಕನನ್ನು ರಾಜು ಸೋಲಂಕಿ ಎಂದು ಗುರುತಿಸಲಾಗಿದೆ. ಬಿ.ಕಾಂ ಪದವಿಧರನಾದರೂ ಸೂಕ್ತ ಕೆಲಸ ದೊರೆಯದ ಕಾರಣಕ್ಕೆ ರಾಜು ಸೋಲಂಕಿ ಆಟೋ ಚಾಲನೆ ಮಾಡಿ ಜೀವನ ಸಾಗಿಸುತ್ತಿದ್ದರು.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಬಡತನದಲ್ಲಿಯೇ ಜೀವನ ಸಾಗಿಸುತ್ತಿದ್ದ ರಾಜು ಸೋಲಂಕಿಯ ಮೇಲೆ ಭಾರೀ ಪ್ರಮಾಣದ ದಂಡ ವಿಧಿಸಲಾಗಿದೆ. ಭಾರೀ ಪ್ರಮಾಣದ ದಂಡವನ್ನು ರಾಜು ಸೋಲಂಕಿ ಪಾವತಿಸಲು ಸಾಧ್ಯವಾಗದ ಕಾರಣ ಪೊಲೀಸರು ಆತನ ಆಟೋವನ್ನು ವಶಕ್ಕೆ ಪಡೆದಿದ್ದಾರೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ತನ್ನ ಜೀವನಕ್ಕೆ ಆಧಾರವಾಗಿದ್ದ ಆಟೋವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಸೋಲಂಕಿ ತನ್ನ ಜೀವನವನ್ನು ಕೊನೆಗಾಣಿಸಲು ಬಯಸಿದ್ದಾನೆ. ರಾಜು ಸೋಲಂಕಿ ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್

ದಂಡಕ್ಕೆ ಹೆದರಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಆತ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ಆತನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ. ತನ್ನ ಆಟೋರಿಕ್ಷಾವನ್ನು ವಶಕ್ಕೆ ಪಡೆದಿರುವ ಕಾರಣಕ್ಕೆ ತಾನು ಕೆಲಸ ಮಾಡಲು ಸಾಧ್ಯವಿಲ್ಲದಿರುವುದರಿಂದ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ತಿಳಿಸಿದ್ದಾನೆ. ಈ ಘಟನೆಯು ದೇಶಾದ್ಯಂತ ಭಾರೀ ತಲ್ಲಣವನ್ನು ಸೃಷ್ಟಿಸಿದೆ.

Article Published On: Monday, September 30, 2019, 16:42 [IST]
English summary
Gujarat Rickshaw Driver Tries Committing Suicide By Drinking Phenyl After He Was Challaned For Rs 18,000 - Read in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+