Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಹಿಳೆಯ ಜೀವ ಉಳಿಸಲು ಆಂಬ್ಯುಲೆನ್ಸ್'ಗೆ ನೆರವಾದ ಕನ್ನಡಿಗರು
ಆಂಬ್ಯುಲೆನ್ಸ್‌ಗಳು ಮಾನವ ಅಂಗಗಳನ್ನು ಹಾಗೂ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಪೊಲೀಸರು ಹಾಗೂ ಸಾರ್ವಜನಿಕರು ಸಂಚಾರವನ್ನು ನಿಯಂತ್ರಿಸಿದ ಹಲವಾರು ಘಟನೆಗಳು ಈ ಹಿಂದೆ ನಡೆದಿವೆ. ಈಗ ಇದೇ ರೀತಿಯ ಮತ್ತೊಂದು ಘಟನೆ ನಡೆದಿದೆ.

ತುರ್ತು ಶಸ್ತ್ರಚಿಕಿತ್ಸೆಗಾಗಿ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ನಮ್ಮ ಕನ್ನಡಿಗರು ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟಿದ್ದಾರೆ. ಈ ಆಂಬ್ಯುಲೆನ್ಸ್ ಕೇವಲ 4 ಗಂಟೆಗಳಲ್ಲಿ 370 ಕಿ.ಮೀ ದೂರ ಚಲಿಸಿದೆ. ಸುಹಾನಾ ಎಂಬ 22 ವರ್ಷದ ಮಹಿಳೆಗೆ ತುರ್ತು ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಅವರನ್ನು ಆಂಬ್ಯುಲೆನ್ಸ್ಮೂಲಕ ಪುತ್ತೂರಿನ ಮಹಾವೀರ್ ವೈದ್ಯಕೀಯ ಕೇಂದ್ರದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಂಬ್ಯುಲೆನ್ಸ್ ಚಾಲಕ ಹನೀಫ್ ಕೇವಲ 4 ಗಂಟೆ 5 ನಿಮಿಷಗಳಲ್ಲಿ ಇಷ್ಟು ದೂರ ಚಲಿಸಿದ್ದಾರೆ. ಈ ತುರ್ತು ಪರಿಸ್ಥಿತಿಯ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡಲಾಗಿತ್ತು. ಈ ಕಾರಣಕ್ಕೆ ಅವರು ಆಂಬ್ಯುಲೆನ್ಸ್ ವೇಗವಾಗಿ ಸಾಗಲು ಪೊಲೀಸರೊಂದಿಗೆ ಕೈಜೋಡಿಸಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಆಯಾ ಭಾಗಗಳ ಸ್ವಯಂಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರು ಸಹ ಈ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಆಂಬ್ಯುಲೆನ್ಸ್ ನಿಖರವಾಗಿ ಎಲ್ಲಿದೆ ಎಂಬುದನ್ನು ತಿಳಿದು ಸಂಚಾರವನ್ನು ನಿಯಂತ್ರಿಸಿದ್ದಾರೆ. ಇದಕ್ಕಾಗಿ ವಾಟ್ಸಾಪ್ ಬಳಸಿದ್ದಾರೆ. ಆಂಬ್ಯುಲೆನ್ಸ್ ಬರುವ ವೇಳೆ ಸಂಬಂಧಪಟ್ಟ ಪ್ರದೇಶದಲ್ಲಿನ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.

ಆಂಬ್ಯುಲೆನ್ಸ್ ಜೊತೆಗೆ ಕೆಲವು ಕಾರುಗಳು ಸಹ ಸಾಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದು. ಆ ಕಾರುಗಳು ಸಹ ವೇಗವಾಗಿ ಚಲಿಸಿವೆ. ಆ ಕಾರುಗಳು ರೋಗಿಯ ಸಂಬಂಧಿಕರಿಗೆ ಸೇರಿದ ಕಾರುಗಳೇ ಅಥವಾ ಸಾರ್ವಜನಿಕರ ಕಾರುಗಳೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಆ ಕಾರುಗಳು ಅಪಾಯಕಾರಿಯಾಗಿ ಚಲಿಸಿವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಆ ಕಾರುಗಳು ಅತಿ ವೇಗದಲ್ಲಿ ಚಲಿಸಿವೆ. ಆದರೆ ಅದೃಷ್ಟವಶಾತ್ ಯಾವುದೇ ಅಪಘಾತಗಳಾಗಿಲ್ಲ. ಈ ಬಗ್ಗೆ ಮಾತನಾಡಿರುವ ಆಂಬ್ಯುಲೆನ್ಸ್ ಚಾಲಕ ಹನೀಫ್ ಎಲ್ಲರ ಜೀವವು ಮುಖ್ಯ ಎಂದು ಹೇಳಿದ್ದಾರೆ.

ವೇಗವಾಗಿ ಆಸ್ಪತ್ರೆಗೆ ಹೋಗುವ ಮೂಲಕ ರೋಗಿಯ ಜೀವ ಉಳಿಸುವುದೇ ತಮ್ಮ ಉದ್ದೇಶವೆಂದು ಅವರು ಹೇಳಿದರು. ಇದರ ಜೊತೆಗೆ ಆಂಬ್ಯುಲೆನ್ಸ್ ತ್ವರಿತವಾಗಿ ಸಾಗಲು ಅವಕಾಶ ಮಾಡಿಕೊಟ್ಟ ಸಾರ್ವಜನಿಕರ ಕಾರ್ಯವನ್ನು ಪೊಲೀಸರು ಶ್ಲಾಘಿಸಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಭಾರತದಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಜನರು ಈ ರೀತಿ ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಟ್ಟಿದ್ದಾರೆ. ಆ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರ ಗಮನ ಸೆಳೆದಿವೆ.

ಆದರೂ ಕೆಲ ವಾಹನ ಸವಾರರು ಆಂಬ್ಯುಲೆನ್ಸ್‌ಗಳಿಗೆ ದಾರಿ ಮಾಡಿಕೊಡುವುದಿಲ್ಲ. 2019ರಲ್ಲಿ ತಿದ್ದುಪಡಿ ಮಾಡಲಾದ ಮೋಟಾರು ವಾಹನ ಕಾಯ್ದೆಯನ್ವಯ ತುರ್ತು ಸೇವೆ ನೀಡುವ ವಾಹನಗಳಾದ ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳಿಗೆ ಅಡ್ಡಿ ಪಡಿಸುವ ವಾಹನ ಸವಾರರಿಗೆ ದಂಡ ವಿಧಿಸುವುದರ ಜೊತೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ.