Anand Mahindra: ಗ್ರ್ಯಾಂಡ್‌ಮಾಸ್ಟರ್ ಪ್ರಗ್ನಾನಂದ ಪೋಷಕರಿಗೆ ಆನಂದ್ ಮಹೀಂದ್ರಾರಿಂದ ಎಲೆಕ್ಟ್ರಿಕ್ ಕಾರು ಗಿಫ್ಟ್
ದೇಶದ ಪ್ರಖ್ಯಾತ ಉದ್ಯಮಿ ಆನಂದ್ ಮಹೀಂದ್ರಾ (Anand Mahindra) ಸಿನಿಮಾ ತಾರೆಗಳಂತೆ ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳನ್ನು ತಮ್ಮ ಕಂಪನಿ ಕಾರುಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ವಿಶಿಷ್ಟವಾಗಿ ಗೌರವಿಸಿಕೊಂಡು ಬಂದಿದ್ದಾರೆ.
ಇದೀಗ, ಭಾರತೀಯ ಯುವ ಗ್ರ್ಯಾಂಡ್‌ಮಾಸ್ಟರ್ ಆರ್.ಪ್ರಗ್ನಾನಂದ ಪೋಷಕರಿಗೆ ಎಲೆಕ್ಟ್ರಿಕ್ ಕಾರನ್ನು ಗಿಫ್ಟ್ ನೀಡುವುದಾಗಿ ಟ್ವಿಟರ್ ನಲ್ಲಿ ಅವರು ಘೋಷಣೆ ಮಾಡಿದ್ದಾರೆ. ಚೆಸ್ ವಿಶ್ವಕಪ್‌ನಲ್ಲಿ ರನ್ನರ್-ಅಪ್ ಆದ ಪ್ರಗ್ನಾನಂದ ಅವರಿಗೆ ಥಾರ್ ಎಸ್‌ಯುವಿ ಉಡುಗೊರೆಯಾಗಿ ನೀಡುವಂತೆ ಹಲವು ನೆಟ್ಟಿಗರು ಆನಂದ್ ಮಹೀಂದ್ರಾ ಅವರನ್ನು ಒತ್ತಾಯಿಸಿದ್ದರು. ಅವರೆಲ್ಲರ ಮನವಿಯನ್ನು ಪುರಸ್ಕರಿಸಿದ್ದಾರೆ.

ಈ ಬಗ್ಗೆ, ಟ್ವೀಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಆನಂದ್ ಮಹೀಂದ್ರಾ ಅವರು, 'ನಿಮ್ಮಂತಹವರ ಅನೇಕರ ಭಾವನೆಯನ್ನು ಮೆಚ್ಚಿದ್ದಾನೆ. ನೀವೆಲ್ಲ ಪ್ರಗ್ನಾನಂದಗೆ ಥಾರ್ ಉಡುಗೊರೆಯಾಗಿ ನೀಡುವಂತೆ ಒತ್ತಾಯಿಸಿದ್ದೀರಿ. ಆದರೆ, ನನಗೆ ಮತ್ತೊಂದು ಆಲೋಚನೆ ಇದೆ. ಚೆಸ್ ಕ್ರೀಡೆಯತ್ತ ಮಕ್ಕಳನ್ನು ವಾಲುವಂತೆ ಮಾಡಿರುವ ಅವರ ಪೋಷಕರನ್ನು (ವೀಡಿಯೋ ಗೇಮ್ ಜನಪ್ರಿಯತೆಯ ಹೊರತಾಗಿ) ನಾನು ಬೆಂಬಲಿಸಲು ಬಯಸುತ್ತೇನೆ' ಎಂದಿದ್ದಾರೆ.
ಮುಂದುವರಿದು, ಇದು ಎಲೆಕ್ಟ್ರಿಕ್ ವಾಹನಗಳಂತೆ ನಮ್ಮ ಭೂಮಿಯ ಭವಿಷ್ಯಕ್ಕಾಗಿ ಉತ್ತಮ ಬೆಳವಣಿಗೆಯಾಗಿದೆ. ಆ ಕಾರಣಕ್ಕೆ XUV400 ಇವಿಯನ್ನು ಉಡುಗೊರೆಯಾಗಿ ನೀಡಬೇಕು ಅಂದುಕೊಂಡಿದ್ದೇನೆ. ಪ್ರಗ್ನಾನಂದ ಅವರ ತಾಯಿ ನಾಗಲಕ್ಷ್ಮಿ ಹಾಗೂ ತಂದೆ ರಮೇಶ್ ಬಾಬು ತಮ್ಮ ಮಗನ ಆಸಕ್ತಿಯನ್ನು ಪ್ರೋತ್ಸಾಹ ನೀಡಿದ್ದಕ್ಕಾಗಿ ನಿಜವಾಗಿಯೂ ಕೃತಜ್ಞತೆಗೆ ಸಲ್ಲಿಸಬೇಕಾಗಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.
ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ಸಿಗುವ ಮಹೀಂದ್ರಾ XUV400 ಎಲೆಕ್ಟ್ರಿಕ್ ಕಾರು, ರೂ.15.99 ಲಕ್ಷದಿಂದ ರೂ.19.39 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇಎಲ್ ಮತ್ತು ಇಸಿ ರೂಪಾಂತರದ ಆಯ್ಕೆಯಲ್ಲಿ ಸಿಗುತ್ತದೆ. ಇಸಿ ವೇರಿಯೆಂಟ್ ವಿತರಣೆಯೂ ಹಬ್ಬದ ಋತುವಿನಲ್ಲಿ ಆರಂಭವಾಗುವ ನೀರಿಕ್ಷೆಯಿದೆ. ಈ ಕಾರು, ಫನ್, ಫಾಸ್ಟ್ ಮತ್ತು ಫಿಯರ್‌ಲೆಸ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಪಡೆದಿದೆ.
ಈ ಮಹೀಂದ್ರಾ XUV400 ಬ್ಯಾಟರಿ ಪ್ಯಾಕ್ ಹಾಗೂ ರೇಂಜ್ ಬಗ್ಗೆ ಹೇಳುವುದಾದರೆ, ಇದು ಎರಡು ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ದೊರೆಯುತ್ತದೆ. ಅವುಗಳೆಂದರೆ, 34.5 kWh ಹಾಗೂ 39.4 kWh ಬ್ಯಾಟರಿ ಪ್ಯಾಕ್. ಇವುಗಳಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 150 hp ಪವರ್ ಮತ್ತು 310 Nm ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಬ್ಯಾಟರಿ ಪ್ಯಾಕ್ ಅನ್ವಯ, 375 km ರಿಂದ 456 km ರೇಂಜ್ ಕೊಡುತ್ತದೆ.

ಮಹೀಂದ್ರಾ XUV400 ಎಲೆಕ್ಟ್ರಿಕ್ ಕಾರು, 150 kmph ಟಾಪ್ ಸ್ವೀಡ್ ಹೊಂದಿದ್ದು, ಕೇವಲ 8.3 ಸೆಕೆಂಡುಗಳಲ್ಲಿ 0-100 kph ವೇಗವನ್ನು ಪಡೆಯುತ್ತದೆ. ಬಹುತೇಕ ಮನೆ ವಿದ್ಯುತ್ (3.3kW ಎಸಿ ಚಾರ್ಜರ್) ಬಳಕೆಯಲ್ಲಿ ಇದರ ಬ್ಯಾಟರಿ ಪ್ಯಾಕ್ ಸಂಪೂರ್ಣ ಚಾರ್ಜ್ ಆಗಲು 13 ಗಂಟೆ ತೆಗೆದುಕೊಳ್ಳುತ್ತದೆ. ಫಾಸ್ಟ್ ಚಾರ್ಜಿಂಗ್ ಆಯ್ಕೆಯಲ್ಲಿ ಈ ಕಾರಿನ ಬ್ಯಾಟರಿ, 0-80% ಚಾರ್ಜ್ ಆಗಲು 50 ನಿಮಿಷ ಸಾಕು.
ಈ ಎಲೆಕ್ಟ್ರಿಕ್ ಕಾರು ಪಡೆದುಕೊಂಡಿರುವ ವೈಶಿಷ್ಟ್ಯಗಳ ಬಗ್ಗೆ ಹೇಳುವುದಾದರೆ, ಪ್ರಮುಖವಾಗಿ, 7.0 ಇಂಚಿನ ಟಚ್ ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕನೆಕ್ಟೆಡ್ ಕಾರ್ ಟೆಕ್ನಲಾಜಿ, ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ಸ್, ಆಕರ್ಷಕ ಸನ್‌ರೂಫ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ಫೀಚರ್ಸ್ ಒಳಗೊಂಡಿರುವ ಮೂಲಕ ಅತ್ಯಾಧುನಿಕವಾಗಿದ್ದು, ದೇಶದಲ್ಲಿ ತನ್ನದೇ ಆದ ಪ್ರತ್ಯೇಕ ಅಭಿಮಾನಿ ಬಳಗವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications