ಸೆಲ್ಯೂಟ್..! ವಿಶೇಷ ಚೇತನ ಸಾಧಕಿ ಪ್ರತಿಭೆಗೆ ಮಾರುಹೋದ ಆನಂದ್ ಮಹೀಂದ್ರಾ, ದುಬಾರಿ ಸ್ಕಾರ್ಪಿಯೋ ಕಾರು ಗಿಫ್ಟ್!

ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ (Anand Mahindra), ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಸದಾ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರ ಬೆಳಕಿಗೆ ತರುವ ಪ್ರಯತ್ನವನ್ನು ಮಾಡುತ್ತಿರುತ್ತಾರೆ. ಅವರ ಪ್ರತಿಭೆಯನ್ನು ಪ್ರೋತ್ಸಾಹಿಸಲು ತಮ್ಮ ಕಂಪನಿಯ ಜನಪ್ರಿಯ ಕಾರುಗಳನ್ನು ಉಡೊಗೊರೆಯಾಗಿಯೂ ಕೊಡುತ್ತಿರುತ್ತಾರೆ. ಇದೀಗ 18ರ ಯುವ ವಿಶೇಷಚೇತನ ಸಾಧಕಿ, ಅರ್ಜುನ ಪ್ರಶಸ್ತಿ ವಿಜೇತೆಯಾಗಿರುವ ಪ್ಯಾರಾ ಬಿಲ್ಲುಗಾರ್ತಿ ಶೀತಲ್ ದೇವಿ (Sheetal Devi) ಅವರಿಗೆ ದುಬಾರಿ ಬೆಲೆಯ 'ಸ್ಕಾರ್ಪಿಯೋ ಎನ್' ಎಸ್‌ಯುವಿಯನ್ನು ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಸ್ವತಃ ಆನಂದ್ ಮಹೀಂದ್ರಾ ಅವರೇ ತಮ್ಮ 'ಎಕ್ಸ್' ಖಾತೆಯಲ್ಲಿ ಹಲವು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಶೀತಲ್ ದೇವಿ ಅವರು, ಡೀಲರ್‌ಶಿಪ್‌ವೊಂದರಲ್ಲಿ ತಮ್ಮ ಕುಟುಂಬ ಸದಸ್ಯರೊಂದಿಗೆ ನೂತನ ಮಹೀಂದ್ರಾ ಸ್ಕಾರ್ಪಿಯೋ ಎನ್ (Mahindra Scorpio N) ಎಸ್‌ಯುವಿಯನ್ನು ವಿತರಣೆ ಪಡೆಯುತ್ತಿರುವುದನ್ನು ನೋಡಬಹುದು.

Anand Mahindra Gifted New Scorpio N For Armless Archer Sheetal Devi Details

ಆ ಪೋಸ್ಟ್‌ಗೆ 'ನಾನು ಶೀತಲ್ ದೇವಿ ಅವರ ಪ್ರತಿಭೆಯಿಂದ ಬಹಳ ಹಿಂದಿನಿಂದಲೂ ಪ್ರಭಾವಿತನಾಗಿದ್ದೇನೆ. ವೈಯಕ್ತಿಕವಾಗಿ ಭೇಟಿಯಾದಾಗ
ಆಕೆಯ ದೃಢನಿಶ್ಚಯ ನನ್ನ ಗಮನವನ್ನು ಸೆಳೆಯಿತು. ಶೀತಲ್ ದೇವಿ, ನನಗೆ ಒಂದು ಬಾಣವನ್ನು ಉಡುಗೊರೆಯಾಗಿ ನೀಡಿದ್ದರು.. ಶೀತಲ್ ನಮಗೆಲ್ಲರಿಗೂ ಸ್ಫೂರ್ತಿ.. ಆಕೆ ಮತ್ತಷ್ಟು ಎತ್ತರಕ್ಕೆ ಏರುತ್ತಿದ್ದಾರೆ.. ನೂತನ 'ಸ್ಕಾರ್ಪಿಯೋ ಎನ್' ಎಸ್‌ಯುವಿಯಲ್ಲಿ ಶೀತಲ್‌ನನ್ನು ನೋಡಲು ನನಗೆ ತುಂಬಾ ಹೆಮ್ಮೆಯಾಗುತ್ತದೆ' ಎಂಬ ಶೀರ್ಷಿಕೆಯನ್ನು ಆನಂದ್ ಮಹೀಂದ್ರಾ ಅವರು ಬರೆದುಕೊಂಡಿದ್ದಾರೆ.

ಆನಂದ್ ಮಹೀಂದ್ರಾ ಅವರು, ವಿಶೇಷಚೇತನ ಸಾಧಕಿ ಶೀತಲ್ ದೇವಿಗೆ 2023ರಲ್ಲಿ ತಮ್ಮ ಕಂಪನಿ ಕಾರನ್ನು ಗಿಫ್ಟ್ ನೀಡುವುದಾಗಿ ಘೋಷಣೆ ಮಾಡಿದ್ದರು. ಆದರೆ, ಶೀತಲ್ 2025ರಲ್ಲಿ ತನಗೆ 18 ವರ್ಷ ತುಂಬಿದ ನಂತರ ಉಡುಗೊರೆಯನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದರು. ಸದ್ಯ ಆಕೆಗೆ ಸ್ಕಾರ್ಪಿಯೋ ಎನ್ ಗಿಫ್ಟ್ ಕೊಡುವ ಮೂಲಕ ಆನಂದ್ ಮಹೀಂದ್ರಾ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ.

Anand Mahindra Gifted New Scorpio N For Armless Archer Sheetal Devi Details

ಶೀತಲ್ ದೇವಿ ಯಾರು: ಜಮ್ಮು & ಕಾಶ್ಮೀರ ಮೂಲದ ಶೀತಲ್ ದೇವಿ ಪ್ಯಾರಾ-ಆರ್ಚರ್ ಆಗಿದ್ದಾರೆ. ಅಂಗ ವೈಕಲ್ಯಕ್ಕೆ ತುತ್ತಾಗಿ, ಎರಡು ಕೈಗಳಿಲ್ಲದಿದ್ದರೂ ಅತಿ ಚಿಕ್ಕ ವಯಸ್ಸಿನಲ್ಲಿಯೇ ವಿಶಿಷ್ಟವಾದ ಸಾಧನೆ ಮಾಡಿದ್ದಾರೆ. ಪ್ಯಾರಾ ಏಷ್ಯನ್ ಕ್ರೀಡಾಕೂಡದಲ್ಲಿ ಚಿನ್ನ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ಜಯಿಸಿದ್ದಾರೆ. 2024ರ ಜನವರಿ 9 ರಂದು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೂ ಭಾಜನರಾಗಿದ್ದರು

ಮಹೀಂದ್ರಾ ಸ್ಕಾರ್ಪಿಯೋ ಎನ್ ವಿಶೇಷತೆಗಳೇನು: ಈ ಎಸ್‌ಯುವಿ ಕನಿಷ್ಠ ರೂ.13.99 ಲಕ್ಷ ಹಾಗೂ ಗರಿಷ್ಠ ರೂ.24.69 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 2.2-ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 12.12 ರಿಂದ 15.94 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಸ್ಕಾರ್ಪಿಯೋ ಎನ್ 6/ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, January 28, 2025, 16:07 [IST]
English summary
Anand mahindra gifted new scorpio n for armless archer sheetal devi details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+