Just In
- 45 min ago
ಭಾರತದಲ್ಲಿ ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಬಿಡುಗಡೆಗೆ ಸಿದ್ದವಾದ ಎಲೆಕ್ಟ್ರಾನ್ ಇವಿ
- 14 hrs ago
ಆಕರ್ಷಕ ವಿನ್ಯಾಸದ 2022ರ ಹ್ಯುಂಡೈ ಟ್ಯೂಸಾನ್ ಎಸ್ಯುವಿಯ ವಿಶೇಷತೆಗಳು
- 14 hrs ago
ಪಾಸ್ಫೋರ್ಟ್ ಪ್ರಯೋಜನಗಳೇನು? ಏಕೆ ವಿವಿಧ ಬಣ್ಣಗಳಲ್ಲಿ ಲಭ್ಯವಿರುತ್ತವೆ ನೋಡಿ..
- 15 hrs ago
ಬ್ರೇಕ್ ಫೇಲ್ ಆದಾಗ ಕೇವಲ 8 ಸೆಕೆಂಡುಗಳಲ್ಲಿ ಕಾರು ನಿಲ್ಲಿಸುವುದು ಹೇಗೆ? ಇಲ್ಲಿದೆ ಉಪಯುಕ್ತ ಸಲಹೆ
Don't Miss!
- Movies
ಮಗಳಿಗೆ ದುಬಾರಿ ಗಿಫ್ಟ್ ಕೊಟ್ಟ ನಟ ದುನಿಯಾ ವಿಜಯ್!
- News
ಏಡಿ ಕಣ್ಣಿಂದ ಕ್ಯಾಮೆರಾ- ಸೆಲ್ಫ್ ಡ್ರೈವಿಂಗ್ ಕಾರಿಗೆ ಭರ್ಜರಿ ಪುಷ್ಟಿ
- Lifestyle
ಶನಿದೋಷ ನಿವಾರಣೆ ಹಾಗೂ ಸಂಪತ್ತು ವೃದ್ಧಿಗೆ ಕೃಷ್ಣ ಜನ್ಮಾಷ್ಟಮಿಗೆ ಮಾಡಿ ಈ ವಿಶೇಷ ಪರಿಹಾರ
- Technology
ಧಮಾಕಾ ಕೊಡುಗೆ!..ಭರ್ಜರಿ ಡಿಸ್ಕೌಂಟ್ನಲ್ಲಿ ಹೊಸ ಸ್ಮಾರ್ಟ್ಟಿವಿ ನಿಮ್ಮದಾಗಿಸಿಕೊಳ್ಳಿ!
- Finance
ಆಗಸ್ಟ್ 17: ಭಾರತದ ಮೆಟ್ರೋ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು
- Sports
ಮ್ಯಾಂಚೆಸ್ಟರ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಖರೀದಿಸುತ್ತೇನೆ ಎಂದ ಎಲಾನ್ ಮಸ್ಕ್!
- Education
Distance Education Courses And Colleges : ದೂರ ಶಿಕ್ಷಣ ಮೂಲಕ ಅಧ್ಯಯನಕ್ಕೆ ಉತ್ತಮ ಕೋರ್ಸ್ ಮತ್ತು ಕಾಲೇಜುಗಳ ವಿವರ
- Travel
ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲ್ ಆನೆಗಳ ಶಿಬಿರಕ್ಕೆ ಭೇಟಿ ಕೊಡಿ
ಮ್ಯೂಸಿಕಲ್ ಸ್ಕೂಟರ್ನ ವಿಡಿಯೋ ಹಂಚಿಕೊಂಡು "ಭಾರತದಲ್ಲಿ ಮಾತ್ರ" ಎಂದ ಆನಂದ್ ಮಹೀಂದ್ರಾ
ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಟ್ವಿಟರ್ನಲ್ಲಿ ಸಾಕಷ್ಟು ಸಕ್ರಿಯರಾಗಿದ್ದಾರೆ. ಅವರು ಮಹೀಂದ್ರಾ ಮತ್ತು ಕ್ಲಾಸಿಕ್ ಲೆಜೆಂಡ್ಸ್ ಬಗ್ಗೆ ವಿಷಯವನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಅವರು ಇನ್ನು ಕೆಲವು ಕುತೂಹಲಕಾರಿಯಾದ ವಿಡಿಯೋಗಲು ಅಥವಾ ಚಿತ್ರಗಳನ್ನು ಸಹ ಹಂಚಿಕೊಳ್ಳುತ್ತಾರೆ.

ಅವರು ಇತ್ತೀಚೆಗೆ ವಿಭಿನ್ನವಾಗಿ ಅಲಂಕರಿಸಿರುವ ಬಜಾಜ್ ಚೇತಕ್ ಸ್ಕೂಟರ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅವರು ಟ್ವಿಟ್ಟರ್ ನಲ್ಲಿ ವಿಡಿಯೋ ಜೊತೆ "ಜೀವನವು ನೀವು ಬಯಸಿದಷ್ಟು ವರ್ಣರಂಜಿತ ಮತ್ತು ಮನರಂಜನೆಯನ್ನು ನೀಡಬಹುದು... #OnlyIndia (ಭಾರತದಲ್ಲಿ ಮಾತ್ರ) ಎಂದು ಬರೆದುಕೊಂಡಿದ್ದಾರೆ. ವೀಡಿಯೊದಲ್ಲಿ ಸ್ಕೂಟರ್ ಅನ್ನು ನೋಡಬಹುದು. ಇದು ಸ್ಕ್ರೀನ್ ಅನ್ನು ಸಹ ಹೊಂದಿದೆ, ಅದರ ಮೇಲೆ ನಾವು ಹಳೆಯ ಹಾಡಿನ ವೀಡಿಯೊ ಹಾಡನ್ನು ಪ್ಲೇ ಮಾಡುವುದನ್ನು ನೋಡಬಹುದು. ಈ ಸ್ಕೂಟರ್ನಲ್ಲಿ ಸ್ಪೀಕರ್ಗಳನ್ನು ಕೂಡ ಅಳವಡಿಸಿದ್ದಾರೆ.

ಸ್ಕೂಟರ್ನ ಸ್ಟೋರೇಜ್ ಸ್ಪೇಸ್ ನಲ್ಲಿ ಕ್ಲಾಕ್ ಅನ್ನು ಸಹ ಇರಿಸಲಾಗಿದೆ. ಸ್ಕೂಟರ್ ಮಾರ್ಪಡಿಸಿದ ಬಜಾಜ್ ಚೇತಕ್ ಎಂದು ತೋರುತ್ತದೆ. ಪೆಟ್ರೋಲ್ ಪಂಪ್ನಲ್ಲಿ ಸ್ಕೂಟರ್ ಪತ್ತೆಯಾಗಿದೆ. ಸ್ಕೂಟರ್ ಸ್ಕ್ರೀನ್ ಮೇಲೆ 'ಚುಪ್ ಗಯೇ ಸಾರೆ ನಜರೆ' ಎಂಬ ಹಾಡು ಪ್ಲೇ ಆಗುತ್ತಿದೆ.

ಇದು ಪೆಟ್ರೋಲ್ ಎಂಜಿನ್ನಿಂದ ಚಾಲಿತವಾಗಿರುವ ಮೂಲ ಚೇತಕ್ ಆಗಿದೆ. ಈ ಸ್ಕೂಟರ್ ಅನ್ನು ಲೈಟಿಂಗ್ಸ್ ಅನ್ನು ಅಳವಡಿಸಿ ವರ್ಣರಂಜಿತವಾಗಿದೆ. ಕಲರ್ ಫುಲ್ ಲೈಟಿಂಗ್ಸ್ ಜೊತೆ ವಿಭಿನ್ನ ರೀತಿಯ ಶೃಂಗಾರವನ್ನು ಮಾಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಹಲವಾರು ಜನರು ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ಸ್ಕೂಟರ್ ಶೃಂಗಾರವು ನೋಡುಗರ ಗಮನಸೆಳೆಯುವಂತಿದೆ. ಕೆಲವು ಜನರು ಹೊಸ ಗ್ರಾಫಿಕ್ಸ್ ಮತ್ತು ಆಫ್ಟರ್ ಮಾರ್ಕೆಟ್ ಮಾಡಿಫೈಟ್ ಪಾರ್ಟ್ಸ್ ಮೂಲಕ ತಮ್ಮ ವಾಹನವನ್ನು ಮಾಡಿಫೈಗೊಳಿಸುತ್ತಾರೆ.

ಆದರೆ ಮಧ್ಯಪ್ರದೇಶದ ವ್ಯಕ್ತಿಯೊಬ್ಬರು ಮಹಿಳೆಯರು ಧರಿಸುವ ಆಭರಣಗಳಿಂದ ತಮ್ಮ ವಾಹನವನ್ನು ಅಲಂಕರಿಸಿದ್ದಾರೆ.ಹೀಗಾಗಿ ವಾಹನಗಳನ್ನು ಅಲಂಕರಿಸುವುದು ಕಾನೂನಿನ ಪ್ರಕಾರ ಅಪರಾಧ. ಭಾರತೀಯ ಮೋಟಾರು ವಾಹನ ಕಾಯಿದೆಯು ಈ ರೀತಿಯ ಚಟುವಟಿಕೆಯನ್ನು ಅನುಮತಿಸುವುದಿಲ್ಲ ಎಂಬುದು ಗಮನಾರ್ಹವಾಗಿದೆ.

ಈ ಹಿಂದೆಯೂ ಭಾರತದಲ್ಲಿ ಮೂಲ ಸ್ವರೂಪ ಕಳೆದುಕೊಂಡಿರುವ ಮಾರ್ಪಾಡು ಮಾಡಿದ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ ಘಟನೆಗಳು ನಡೆದಿವೆ. ಈ ವಿಡಿಯೋ ಭಾರೀ ವೈರಲ್ ಆಗಿರುವುದರಿಂದ ಇವರಿಗೆ ದಂಡ ಬೀಳುವ ಸಾಧ್ಯತೆಗಳು ಕೂಡ ಇದೆ.

80ರ ದಶಕದಲ್ಲಿ ಭಾರತದಲ್ಲೇ ಸದ್ದು ಮಾಡಿದ ಹಮಾರಾ ಬಜಾಜ್ ಬಳಿಕ ಸ್ಥಗಿತಗೊಂಡಿತು. ಬಜಾಜ್ ಬೈಕ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಿತು. ಭಾರತೀಯರ ನೆಚ್ಚಿನ ಸ್ಕೂಟರ್ ಆಗಿದ್ದ ಚೇತಕ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಕಳೆದ ವರ್ಷ ಬಜಾಜ್ ಕಂಪನಿಯು ಬಿಡುಗಡೆಗೊಳಿಸಿದ್ದರು.

ಈ ಐಕಾನಿಕ್ ಚೇತಕ್ ಸ್ಕೂಟರ್ ಅನ್ನು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಗೊಳಿಸುವ ಮೂಲಕ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲವನ್ನು ಮೂಡಿಸುವ ಪ್ರಯತ್ನವನ್ನು ಬಜಾಜ್ ಕಂಪನಿಯು ಮಾಡಿತು. ಆದರೆ ಆರಂಭಿಕ ಹಂತದಿಂದಲ್ಲೇ ಬಜಾಜ್ ಕಂಪನಿಯು ಹಲವಾರು ವಿಘ್ನಗಳನ್ನು ಎದುರಿಸಬೇಕಾಯಿತು.

ಆರಂಭದಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ವಿನ್ಯಾಸದ ಬಗ್ಗೆ ಹಲವರು ಟೀಕೆಯನ್ನು ಮಾಡಿದರು. ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಕಳೆದ ವರ್ಷದ ಆರಂಭದಲ್ಲಿ ಬಿಡುಗಡೆಗೊಳಿಸಿದ್ದರು. ಬಜಾಜ್ ಕಂಪನಿಯು ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಅನ್ನು ಬಿಡುಗಡೆಗೊಳಿಸಿದ ಮೊದಲ ತಿಂಗಳಲ್ಲಿ ಕೇವಲ 21 ಯುನಿಟ್ಗಳನ್ನು ಮಾರಾಟ ಮಾಡಿದ್ದರು. ನಂತರ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ.
Life can be as colourful and entertaining as you want it to be… #OnlyInIndia pic.twitter.com/hAmmfye0Fo
— anand mahindra (anandmahindra) June 17, 2022
ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಎಂಟ್ರಿ ಲೆವೆಲ್ ಅರ್ಬೈನ್ ಸ್ಕೂಟರ್ ಸಿಟ್ರಶ್ ರಶ್ ಮತ್ತು ಸೈಬರ್ ವೈಟ್ ಬಣ್ಣಗಳಲ್ಲಿ ಲಭ್ಯವಿದೆ. ಇನ್ನು ಪ್ರೀಮಿಯಂ ರೂಪಾಂತರವು ಹ್ಯಾಝಲ್ನಟ್, ಬ್ರೂಕ್ಲಿನ್ ಬ್ಲ್ಯಾಕ್, ಸಿಟ್ರಸ್ ರಶ್, ವೆಲುಟ್ಟೊ ರೊಸ್ಸೊ ಮತ್ತು ಇಂಡಿಗೊ ಮೆಟಾಲಿಕ್ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ 4ಕೆ ಡಬ್ಲ್ಯು ಲೀಥಿಯಂ ಅಯಾನ್ ಬ್ಯಾಟರಿ ಪ್ಯಾಕ್ ಅನ್ನು ಹೊಂದಿದೆ. ಇದು ಇಕೋ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 95ಕಿ.ಮೀ ಮತ್ತು ಸ್ಪೋರ್ಟ್ ಮೋಡ್ನಲ್ಲಿ ಪ್ರತಿ ಚಾರ್ಜ್ಗೆ 85 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ರಿರ್ವಸ್ ಅಸಿಸ್ಟ್ ಮೋಡ್ ಅನ್ನು ಕೂಡ ಹೊಂದಿದೆ.

ಚೇತಕ್ ಸ್ಕೂಟರ್ ಮೊದಲ ನೋಟದಲ್ಲಿ ವೆಸ್ಪಾ ಸ್ಕೂಟರ್ನಂತೆ ಕಾಣುತ್ತದೆ. ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಬಳಕೆ ಮಾಡಲಾಗಿರುವ ಬ್ಯಾಟರಿ ಬರೋಬ್ಬರಿ 70 ಸಾವಿರ ಕಿ.ಮೀ ನಷ್ಟು ಕಾರ್ಯಕ್ಷಮತೆ ಹೊಂದಿದೆ. ಒಟ್ಟಾರೆ ಇತ್ತೀಚಿನ ದಿನಗಳಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇನ್ನು ನಿಧಾನವಾಗಿ ಭಾರತೀಯ ಮಾರುಕಟ್ಟೆಯಲ್ಲಿ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸುತ್ತಿದೆ. ಆದರೆ ಮಾರಾಟದಲ್ಲಿ ಒಂದು ಸಾವಿರ ಗಡಿಯನ್ನು ದಾಟಲು ಹಲವು ತಿಂಗಳನ್ನು ತೆಗೆದುಕೊಂಡಿದೆ.

ಡ್ರೈವ್ಸ್ಪಾರ್ಕ್ ಅಭಿಪ್ರಾಯ
ಹಳೆಯ ಸ್ಕೂಟರ್ ಅನ್ನು ವಿಭಿನ್ನವಾಗಿ ಅಲಂಕಾರಿಸುವುದು ಕಾಣಲು ಆಕರ್ಷಕವಾಗಿದೆ. ಆದರೆ ವಾಹನಗಳನ್ನು ಅಲಂಕರಿಸುವುದು ಕಾನೂನಿನ ಪ್ರಕಾರ ಅಪರಾಧ. ಭಾರತೀಯ ಮೋಟಾರು ವಾಹನ ಕಾಯಿದೆಯು ಈ ರೀತಿಯ ಚಟುವಟಿಕೆಯನ್ನು ಅನುಮತಿಸುವುದಿಲ್ಲ ಎಂಬುದು ಗಮನಾರ್ಹವಾದ ಅಂಶವಾಗಿದೆ.