ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಇತ್ತೀಚೆಗೆ ದೇಶದ 5 ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 4 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಈ ಸಂಭ್ರಮವನ್ನು ಆಚರಿಸಲು ಪ್ರಧಾನಮಂತ್ರಿ ಮೋದಿ ಅವರು ಇತ್ತೀಚೆಗೆ ತಮ್ಮ ತವರು ರಾಜ್ಯಕ್ಕೆ ಭೇಟಿ ನೀಡಿ ರ್ಯಾಲಿಯಲ್ಲಿ ಭಾಗವಹಿಸಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಆ ವೇಳೆ ಅವರು ಬಳಸಿದ್ದ ವಾಹನವನ್ನು ಕಂಡು ಹರ್ಷ ವ್ಯಕ್ತಪಡಿಸಿರುವ ಮಹೀಂದ್ರಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಪ್ರಧಾನಿಗೆ ಧನ್ಯವಾದ ತಿಳಿಸಿದ್ದಾರೆ. ಹೌದು 4 ರಾಜ್ಯಗಳ ವಿಧಾನಸಭಾ ಚುನಾವಣೆಯ ವಿಜಯೋತ್ಸವ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ಗೆ ಭೇಟಿ ನೀಡಿದ್ದರು. ಆ ವೇಳೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ರ್ಯಾಲಿಗಳಲ್ಲಿ ಭಾಗವಹಿಸಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಅಲ್ಲದೇ ಗುಜರಾತ್‌ನಲ್ಲಿ ಶೀಘ್ರದಲ್ಲೇ ವಿಧಾನಸಭೆ ಚುನಾವಣೆ ಇರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ಈ ರ್ಯಾಲಿಗಳಲ್ಲಿ ಪ್ರಧಾನಿ ಮೋದಿಯವರು ಬಹುತೇಕ ಮಹೀಂದ್ರಾ ಕಾರನ್ನು ಬಳಸಿರುವುದು ವಿಶೇಷ. ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಹೀಂದ್ರಾ ಥಾರ್ ಕಾರನ್ನು ಬಳಸಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಇದು ಭಾರತದಲ್ಲಿನ ಅತ್ಯಂತ ಜನಪ್ರಿಯ ಎಸ್‌ಯುವಿಗಳಲ್ಲಿ ಒಂದಾಗಿದೆ. ವಾಸ್ತವವಾಗಿ, ಭಾರತದಲ್ಲಿ ಲಭ್ಯವಿರುವ ಅತ್ಯಂತ ಒಳ್ಳೆಯ ಆಫ್ ರೋಡ್ SUV ಅಂತಲೂ ಹೇಳಬಹುದು. ಪ್ರಧಾನಿ ನರೇಂದ್ರ ಮೋದಿ ಅವರು 'ಮೇಕ್ ಇನ್ ಇಂಡಿಯಾ' ಯೋಜನೆಗೆ ಉತ್ತೇಜನ ನೀಡುತ್ತಿದ್ದಾರೆ. ಸ್ಥಳೀಯ ಉತ್ಪನ್ನಗಳಿಗೆ ಬೆಂಬಲವಾಗಿಯೂ ಧ್ವನಿಯೆತ್ತಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಈ ನಡುವೆಯೂ ಅವರೇ ವಿದೇಶಿ ಕಾರುಗಳಂತಹ ಉತ್ಪನ್ನಗಳನ್ನು ಬಳಸುತ್ತಾರೆ ಎಂಬ ಟೀಕೆಗಳು ಆಗೊಮ್ಮೆ ಈಗೊಮ್ಮೆ ವ್ಯಕ್ತವಾಗುತ್ತಿರುತ್ತವೆ. ಇಂತಹ ಸನ್ನಿವೇಶದಲ್ಲಿ ಅನಿರೀಕ್ಷಿತವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಹೀಂದ್ರ ಥಾರ್ ಎಸ್‌ಯುವಿ ಕಾರನ್ನು ಬಳಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಇದನ್ನು ಕಂಡು ಹರ್ಷ ವ್ಯಕ್ತಪಡಿಸಿರುವ ಮಹೀಂದ್ರಾ ಸಮೂಹದ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಹೇಳಿದ್ದಾರೆ. ಅತ್ಯಂತ ಬಲಿಷ್ಠ ಮತ್ತು 'ಮೇಡ್ ಇನ್ ಇಂಡಿಯಾ' ಮಹೀಂದ್ರ ಥಾರ್ ಎಸ್‌ಯುವಿ ಬಳಸಿದ್ದಕ್ಕಾಗಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣದ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಈ ಕುರಿತು ಪ್ರತಿಕ್ರಿಯಿಸಿರುವ ಆನಂದ್ ಮಹೀಂದ್ರಾ, "ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಧನ್ಯವಾದಗಳು. ವಿಜಯೋತ್ಸವದ ಮೆರವಣಿಗೆಗೆ 'ಮೇಡ್ ಇನ್ ಇಂಡಿಯಾ' ವಾಹನಕ್ಕಿಂತ ಬೇರೆ ಯಾವುದೇ ವಾಹನ ಉತ್ತಮವಾಗಿಲ್ಲ. ಎಂದು ಆನಂದ್ ಮಹೀಂದ್ರ ಬಣ್ಣಿಸಿದ್ದಾರೆ. ಆನಂದ್ ಮಹೀಂದ್ರಾ ಅವರ ಈ ಪೋಸ್ಟ್‌ ಸದ್ಯ ವೈರಲ್ ಆಗುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಹೊಸ ತಲೆಮಾರಿನ ಮಹೀಂದ್ರ ಥಾರ್ ಎಸ್‌ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಉತ್ಸಾಹಭರಿತ ಪ್ರತಿಕ್ರಿಯೆಯನ್ನು ಪಡೆದಿದೆ. ಬುಕ್ಕಿಂಗ್‌ಗಳ ಸಂಗ್ರಹ ಮತ್ತು ಸೆಮಿಕಂಡಕ್ಟರ್ ಚಿಪ್‌ಗಳ ಕೊರತೆಯ ಹೊರತಾಗಿಯೂ, ಹೊಸ ತಲೆಮಾರಿನ ಮಹೀಂದ್ರ ಥಾರ್ ಎಸ್‌ಯುವಿ ದೀರ್ಘಾವಧಿಯ ಕಾಯುವಿಕೆಯನ್ನು ಹೊಂದಿದೆ. ಅನೇಕ ಗ್ರಾಹಕರು ಈ ಕಾರನ್ನು ಡೆಲಿವರಿ ಪಡೆಯಲು ಕುತೂಹಲದಿಂದ ಕಾಯುತ್ತಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಮಹೀಂದ್ರ ಥಾರ್ ಎಸ್‌ಯುವಿ ಒಟ್ಟು 2 ಎಂಜಿನ್ ಆಯ್ಕೆಗಳೊಂದಿಗೆ ಬರುತ್ತದೆ, ಒಂದು ಪೆಟ್ರೋಲ್ ಮತ್ತು ಡೀಸೆಲ್. ಅದರಂತೆ, ಈ ಕಾರಿನ ಪೆಟ್ರೋಲ್ ರೂಪಾಂತರಗಳು 2.0 ಲೀಟರ್ ಎಮ್‌ಸ್ಟ್ಯಾಲಿನ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿವೆ. ಮತ್ತೊಂದೆಡೆ, ಈ ಕಾರಿನ ಡೀಸೆಲ್ ರೂಪಾಂತರಗಳಿಗೆ 2.2 ಲೀಟರ್ ಎಮ್‌ಹಾಕ್ ಡೀಸೆಲ್ ಎಂಜಿನ್ ಅನ್ನು ಒದಗಿಸಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ ಉದ್ಯಮಿ ಆನಂದ್ ಮಹೀಂದ್ರಾ

ಹೊಸ ತಲೆಮಾರಿನ ಥಾರ್ ಎಸ್‌ಯುವಿಯನ್ನು ಅನುಸರಿಸಿ, ಮಹೀಂದ್ರಾ ಎಕ್ಸ್‌ಯುವಿ 700 ಅನ್ನು ಬಿಡುಗಡೆ ಮಾಡಿದೆ, ಇದು ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಅಲ್ಲದೇ ಮಹೀಂದ್ರಾ ಎಕ್ಸ್‌ಯುವಿ700(Mahindra XUV700) ಮಾದರಿಯು ಬಿಡುಗಡೆಯಾದ ಐದು ತಿಂಗಳಿನಲ್ಲಿ ಹಲವು ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರು ವರ್ಷದ ಶ್ರೇಷ್ಠ ಕಾರು ಮಾದರಿಯಾಗಿ ಹೊರಹೊಮ್ಮಿದೆ.

Most Read Articles

Kannada
English summary
Anand mahindra thanks prime minister narendra modi here is the reason why
Story first published: Thursday, March 17, 2022, 18:48 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X