ಅಂಬಾನಿ ಮನೆ ಮದುವೆ: ಟ್ಯಾಕ್ಸಿಗಳಾದ ಕೋಟಿ ಕೋಟಿ ಬೆಲೆಯ ರೋಲ್ಸ್ ರಾಯ್ಸ್, ಬಿಎಂಡಬ್ಲ್ಯು ಕಾರುಗಳು!

ದೇಶದ ಪ್ರಖ್ಯಾತ ಉದ್ಯಮಿ, ರಿಲಯನ್ಸ್ ಸಂಸ್ಥೆಯ ಮಾಲೀಕ ಮುಕೇಶ್ ಅಂಬಾನಿ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಅದ್ಧೂರಿ ವಿವಾಹ ಪೂರ್ವ ಕಾರ್ಯಕ್ರಮಗಳು ಭಾನುವಾರ ಮುಕ್ತಾಯಗೊಂಡಿತ್ತು. ಈ ಸಮಾರಂಭಕ್ಕೆ ದೇಶ ವಿದೇಶಗಳಿಂದ ಗಣ್ಯರು ಆಗಮಿಸಿದ್ದರು.

ಕಾರ್ಯಕ್ರಮದ ಸ್ಥಳಕ್ಕೆ ವಿಶೇಷ ಆಹ್ವಾನಿತರನ್ನು ಕರೆ ತರಲು ಚಾರ್ಟರ್ಡ್ ಫ್ಲೈಟ್ ಮತ್ತು ದುಬಾರಿ ಬೆಲೆಯ ಐಷಾರಾಮಿ ಕಾರುಗಳನ್ನು ಅಂಬಾನಿ ಕುಟುಂಬ ವ್ಯವಸ್ಥೆ ಮಾಡಿತ್ತು. ಮಾರ್ಚ್ 1 ರಂದು ಸಿನಿಮಾ ನಟ ನಟಿಯರು, ಉದ್ಯಮಿಗಳು ಹಾಗೂ ರಾಜಕಾರಣಿಗಳು ಜಾಮ್‌ನಗರಕ್ಕೆ ಆಗಮಿಸಲು ದೆಹಲಿ ಮತ್ತು ಮುಂಬೈನಿಂದ ಹಲವು ಚಾರ್ಟರ್ಡ್ ಫ್ಲೈಟ್ ಗಳು ಕಾರ್ಯಚರಣೆ ನಡೆಸಿದ್ದವು ಎಂದು ವರದಿಯಾಗಿದೆ.

Anant Ambani Radhika Merchant Wedding Rolls Royce BMW Range Rover Cars Seen Like A Taxis

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಅದರಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿರುವ ಸ್ಥಳದಲ್ಲಿ ರೋಲ್ಸ್ ರಾಯ್ಸ್ (Rolls Royce), ಬಿಎಂಡಬ್ಲ್ಯು (BMW) ಹಾಗೂ ರೇಂಜ್ ರೋವರ್ (Range Rover) ಕಾರುಗಳು ಸಾಲಾಗಿ ನಿಂತಿರುವುದನ್ನು ನೋಡಬಹುದು. ಇದೇ ಕಾರುಗಳನ್ನು ವಿಮಾನ ನಿಲ್ದಾಣದಿಂದ ಗಣ್ಯರನ್ನು ಕರೆದುಕೊಂಡು ಬರಲು ಉಪಯೋಗಿಸಲಾಗಿತ್ತು ಎಂದು ತಿಳಿದುಬಂದಿದೆ.

ವಿಡಿಯೋ ಕಾಣಸಿಗುವ ರೋಲ್ಸ್ ರಾಯ್ಸ್ ಘೋಸ್ಟ್ (Rolls-Royce Ghost), ದೇಶೀಯ ಮಾರುಕಟ್ಟೆಯಲ್ಲಿ ರೂ.6.95 ರಿಂದ ರೂ.7.95 ಕೋಟಿ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 6.75 - ಲೀಟರ್ ಟ್ವಿನ್ ಟರ್ಬೊ ಎಂಜಿನ್ ಹೊಂದಿದ್ದು, 571 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 850 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. 8 - ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.

ಈ ರೋಲ್ಸ್ ರಾಯ್ಸ್ ಘೋಸ್ಟ್ ಕಾರು, ಕೇವಲ 4.8 ಸೆಕೆಂಡುಗಳಲ್ಲಿ 0 - 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದ್ದು, ಗಂಟೆಗೆ 250 ಕಿ.ಮೀ ಗರಿಷ್ಠ ವೇಗವನ್ನು ಹೊಂದಲಿದೆ. ಡಿಜಿಟಲ್ ಡ್ರೈವರ್ ಡಿಸ್ಪ್ಲೇ, 1300ಡಬ್ಲ್ಯೂ ಆಡಿಯೋ ಸಿಸ್ಟಮ್, ಹೆಡ್ ಅಪ್ ಡಿಸ್ಪ್ಲೇ, ಇಲ್ಯುಮಿನೇಟೆಡ್ ಡ್ಯಾಶ್‌ಬೋರ್ಡ್ ಹಾಗೂ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ಬಿಎಂಡಬ್ಲ್ಯೂ ಐಎಕ್ಸ್ (BMW iX) ಕಾರನ್ನು ಸಹ ನೋಡಬಹುದು. ಇದು ರೂ.1.21 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು 76.6 ಕೆಡಬ್ಲ್ಯೂಹೆಚ್ (kWh) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದಿದ್ದು, ಸಂಪೂರ್ಣ ಚಾರ್ಜ್ ನಲ್ಲಿ 425 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

Anant Ambani Radhika Merchant Wedding Rolls Royce BMW Range Rover Cars Seen Like A Taxis

ನೂತನ ಬಿಎಂಡಬ್ಲ್ಯೂ ಐಎಕ್ಸ್ ಕಾರು 200 ಕೆಎಂಪಿಹೆಚ್ ಟಾಪ್ ಸ್ವೀಡ್ (ಗರಿಷ್ಠ ವೇಗ) ಪಡೆಯಲಿದೆ. 7 ಗಂಟೆ 25 ನಿಮಿಷಗಳಲ್ಲಿ ಈ ಕಾರಿನ ಬ್ಯಾಟರಿ ಪ್ಯಾಕ್ ಪೂರ್ತಿ ಚಾರ್ಜ್ ಆಗುತ್ತದೆ. 12.3 - ಇಂಚಿನ ಡಿಜಿಟಲ್ ಡ್ರೈವರ್‌ನ ಡಿಸ್‌ಪ್ಲೇ, 14.9 - ಇಂಚಿನ ಟಚ್‌ಸ್ಕ್ರೀನ್ ಸಿಸ್ಟಮ್, ವಿಲ್ಕಿನ್ಸ್ ಸೌಂಡ್ ಸಿಸ್ಟಮ್, 4D ಆಡಿಯೊ ಫಂಕ್ಷನ್, 5ಜಿ ಮೊಬೈಲ್ ಕನೆಕ್ಟಿವಿಟಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಇದೇ ವಿವಾಹ ಪೂರ್ವ ಸಮಾರಂಭದಲ್ಲಿ ಗಣ್ಯರನ್ನು ಕರೆತರಲು ರೇಂಜ್ ರೋವರ್ (Range Rover) ಎಸ್‌ಯುವಿಯನ್ನು ಸಹ ಬಳಕೆ ಮಾಡಲಾಗಿದೆ. ಭಾರತದಲ್ಲಿ ಈ ಕಾರು ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಗ್ರಾಹಕರಿಗೆ ಖರೀದಿಗೆ ದೊರೆಯಲಿದ್ದು, ರೂ.67 ಲಕ್ಷದಿಂದ ರೂ.4.47ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜೊತೆಗೆ ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 4, 2024, 13:33 [IST]
English summary
Anant ambani radhika merchant wedding rolls royce bmw range rover cars seen like taxis
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+