ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾದ ಜಗನ್ ಮೋಹನ್ ರೆಡ್ಡಿರವರು ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜನರ ಒಳಿತಿಗಾಗಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಲಾಕ್ ಡೌನ್ ನಿಂದ ತೊಂದರೆಗೀಡಾಗಿರುವ ಬಡವರು ಹಾಗೂ ಅಸಹಾಯಕರಿಗೆ ಹಣಕಾಸಿನ ಸಹಾಯ ಸೇರಿದಂತೆ ಹಲವು ರೀತಿಯಲ್ಲಿ ನೆರವಾಗಿದ್ದಾರೆ.

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಲಾಂಡ್ರಿ ಕಾರ್ಮಿಕರು, ಕ್ಷೌರಿಕರು, ಟೈಲರ್‌ಗಳಂತಹ ಕಾರ್ಮಿಕರಿಗಾಗಿ ರೂ.247 ಕೋಟಿ ಬಿಡುಗಡೆಗೊಳಿಸಿದ್ದಾರೆ. ಇದರ ಜೊತೆಗೆ ಸಂಕಷ್ಟಕ್ಕೆ ಸಿಲುಕಿರುವ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ತಲಾ ರೂ.10 ಸಾವಿರ ನೀಡಿದ್ದಾರೆ. ಈಗ ಆಂಧ್ರಪ್ರದೇಶ ಸರ್ಕಾರವು ಹೊಸದಾಗಿ 1,068 ಆಂಬುಲೆನ್ಸ್‌ಗಳನ್ನು ನಿಯೋಜಿಸಿದೆ.

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಪುಣೆ ಮೂಲದ ಕಂಪನಿಯಿಂದ ಈ ಆಂಬ್ಯುಲೆನ್ಸ್ ಗಳನ್ನು ಪಡೆಯಲಾಗಿದೆ. 1,068 ಆಂಬುಲೆನ್ಸ್‌ಗಳ ಪೈಕಿ 130 ಆಂಬುಲೆನ್ಸ್‌ಗಳಲ್ಲಿ ಸುಧಾರಿತ ಜೀವ ಉಳಿಸುವ ಸಾಧನಗಳನ್ನು ಅಳವಡಿಸಲಾಗಿದೆ. 282 ಆಂಬ್ಯುಲೆನ್ಸ್ ಗಳು ಭದ್ರತಾ ಸೌಲಭ್ಯಗಳನ್ನು ಹೊಂದಿವೆ.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಇನ್ನುಳಿದ 656 ಯುನಿಟ್ ಗಳನ್ನು ಗ್ರಾಮೀಣ ಜನರ ಸೇವೆಗಾಗಿ ನಿಯೋಜಿಸಲಾಗಿದೆ. ಈ ಎಲ್ಲಾ ಆಂಬ್ಯುಲೆನ್ಸ್ ಗಳನ್ನು ಬಣ್ಣ, ಹೆಚ್ಚುವರಿ ಫೀಚರ್ ಹಾಗೂ ಡಯಲ್‌ ನಂಬರ್ ಗಳಿಂದ (104 ಮತ್ತು 108) ಗುರುತಿಸಲಾಗಿದೆ.

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಇಡೀ ದೇಶವು ಮಾರಕ ಕರೋನಾ ವೈರಸ್ ಕಪಿಮುಷ್ಟಿಯಲ್ಲಿ ಸಿಲುಕಿದೆ. ಈ ಪರಿಸ್ಥಿತಿಯಲ್ಲಿ ಆಂಧ್ರ ಪ್ರದೇಶ ಸರ್ಕಾರವು ಜನರನ್ನು ರಕ್ಷಿಸಲು ಯಾವುದೇ ತೊಂದರೆಯುಂಟಾಗದಂತೆ ನೋಡಿಕೊಳ್ಳಲು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಂಬುಲೆನ್ಸ್‌ಗಳನ್ನು ನಿಯೋಜಿಸಿದೆ.

MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಗಮನಿಸಬೇಕಾದ ಸಂಗತಿಯೆಂದರೆ ಭಾರತದ ಬೇರೆ ಯಾವುದೇ ರಾಜ್ಯವು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆಂಬುಲೆನ್ಸ್‌ಗಳನ್ನು ಹೊಂದಿಲ್ಲ. ಆಂಧ್ರ ಪ್ರದೇಶದ ಈ ನಡೆ ಇಡೀ ದೇಶದ ಗಮನ ಸೆಳೆದಿದೆ.

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಜಗನ್ ಮೋಹನ್ ರೆಡ್ಡಿರವರು ಅಧಿಕಾರ ವಹಿಸಿಕೊಂಡಾಗ 104 ಹಾಗೂ 108 ಸಂಖ್ಯೆಯ ಆಂಬ್ಯುಲೆನ್ಸ್ ಸೇವೆಯನ್ನು ರಾಜ್ಯದಲ್ಲಿ ತರಲು ಆದೇಶ ನೀಡಿದ್ದರು. ಕರೋನಾ ವೈರಸ್ ನಿಂದ ಉಂಟಾಗಿರುವ ಈ ಸಂಕಷ್ಟದ ಸಂದರ್ಭದಲ್ಲಿ 104 ಹಾಗೂ 108 ಸಂಖ್ಯೆಗಳನ್ನು ಹೊಂದಿರುವ ಆಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ.

MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಈ ಬಗ್ಗೆ ಮಾತನಾಡಿರುವ ಜಗನ್ ಮೋಹನ್ ರೆಡ್ಡಿರವರು ಸಾರ್ವಜನಿಕರು ತುರ್ತು ಪರಿಸ್ಥಿತಿಯಲ್ಲಿ ಕರೆ ಮಾಡಿದರೆ, ನಗರ ಪ್ರದೇಶಗಳಲ್ಲಿ 15 ನಿಮಿಷಗಳಲ್ಲಿ, ಗ್ರಾಮೀಣ ಪ್ರದೇಶದಲ್ಲಿ 20 ನಿಮಿಷಗಳಲ್ಲಿ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ 30 ನಿಮಿಷಗಳಲ್ಲಿ ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸುತ್ತವೆ ಎಂದು ಹೇಳಿದ್ದಾರೆ.

ಒಂದೇ ದಿನದಲ್ಲಿ ಸಾವಿರಕ್ಕೂ ಹೆಚ್ಚು ಆಂಬ್ಯುಲೆನ್ಸ್ ಪಡೆದ ಜಗನ್ ಸರ್ಕಾರ

ಜುಲೈ 1ರಂದು ವಿಜಯವಾಡದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ, ಜಗನ್ ಮೋಹನ್ ರೆಡ್ಡಿರವರು ಈ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಿದ್ದಾರೆ. ಈ ಮೂಲಕ ಕರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ತಮ್ಮದೇ ಆದ ರೀತಿಯಲ್ಲಿ ಕೈಜೋಡಿಸಿದ್ದಾರೆ.

Most Read Articles

Kannada
English summary
AP Government gets more than 1000 ambulance. Read in Kannada.
Story first published: Thursday, July 2, 2020, 11:06 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X