ಕಾರಿನಲ್ಲಿ ಪ್ರೇಯಸಿಯೊಂದಿಗೆ ಜಗಳ... ಏನೂ ಮಾಡಲಾಗದೆ ಕಾರಿಗೆ ಬೆಂಕಿಯಿಟ್ಟ ಪ್ರಿಯಕರ

ಲಾಂಗ್ ಡ್ರೈವ್‌ಗೆಂದು ತೆರಳಿದ ಜೋಡಿಯೊಂದು ದಾರಿಯುದ್ದಕ್ಕೂ ಕಾರಿನಲ್ಲಿ ಜಗಳವಾಡಿದ್ದು, ಪ್ರೇಯಸಿಯ ಮೇಲೆ ಕೋಪಗೊಂಡ ಯುವಕ ನಡುರಸ್ತೆಯಲ್ಲಿ ತನ್ನ ಕಾರಿಗೆ ಬೆಂಕಿಯಿಟ್ಟಿದ್ದಾನೆ. ಘಟನೆಯಲ್ಲಿ ಸುಮಾರು 70 ಲಕ್ಷ ರೂ. ಮೌಲ್ಯದ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಈ ಪ್ರಕರಣ ಸಂಬಂಧ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಯಾವುದಾದರೊಂದು ವಿಷಯದ ಕುರಿತು ಕೋಪಗೊಂಡಾಗ ಮೂರ್ಖತನದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಏಕೆಂದರೆ ಆ ಸಮಯದಲ್ಲಿ ಯೋಚಿಸುವಷ್ಟು ತಾಳ್ಮೆ ಇರುವುದಿಲ್ಲ. ಇಂತಹ ಮೂರ್ಖ ನಿರ್ಧಾರಗಳ ಪರಿಣಾಮ ಆಗಾಗ್ಗೆ ದೊಡ್ಡ ನಷ್ಟಕ್ಕೆ ಕಾರಣವಾಗುತ್ತದೆ. ಈ ಘಟನೆಯೇ ಇದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಘಟನೆ ಕುರಿತು ಹಲವು ವರದಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಘಟನೆ ನಡೆದ ಸ್ಥಳದಲ್ಲಿ ಸೆರೆ ಹಿಡಿಯಲಾದ ಹಲವು ವಿಡಿಯೋಗಳು ಕೂಡ ವೈರಲ್ ಆಗಿವೆ.

ಕಾರಿನಲ್ಲಿ ಪ್ರೇಯಸಿಯೊಂದಿಗೆ ಜಗಳ... ಏನೂ ಮಾಡಲಾಗದೆ ಕಾರಿಗೆ ಬೆಂಕಿಯಿಟ್ಟ ಪ್ರಿಯಕರ

ವರದಿಗಳ ಪ್ರಕಾರ ಈ ಘಟನೆ ಇತ್ತೀಚೆಗೆ ತಮಿಳುನಾಡಿನ ಕಾಂಚೀಪುರಂನಲ್ಲಿ ನಡೆದಿದೆ. 28 ವರ್ಷದ ಕವಿನ್, ವೃತ್ತಿಯಲ್ಲಿ ವೈದ್ಯರಾಗಿದ್ದು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಈತ ತಮಿಳುನಾಡಿನ ಕಾಂಚೀಪುರಂನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮುಗಿಸಿದ್ದು, ಅದೇ ಕಾಲೇಜಿನಲ್ಲಿ ಓದುತ್ತಿದ್ದ 28 ವರ್ಷದ ಮಹಿಳಾ ವೈದ್ಯೆಯೊಂದಿಗೆ ಪ್ರೀತಿಯಲ್ಲಿದ್ದರು ಎನ್ನಲಾಗಿದೆ. ಆಗಾಗ್ಗೆ ಇಬ್ಬರು ಲಾಂಗ್‌ ಡ್ರೈವ್ ಹೋಗುತ್ತಿದ್ದರು, ಸಾಮಾನ್ಯವಾಗಿ ಜಗಳ ನಡೆಯುತ್ತಿತ್ತು. ಆದರೆ ಈ ಬಾರಿ ಅದು ತಾರಕಕ್ಕೇರಿದೆ ಎಂದು ತಿಳಿದುಬಂದಿದೆ.

ಕಳೆದ ವಾರ ಕವಿನ್ ತನ್ನ ಗೆಳತಿಯನ್ನು ಡ್ರೈವ್‌ಗೆ ಕರೆದೊಯ್ದಿದ್ದ. ಚೆನ್ನೈ-ಕಾಂಚಿಪುರಂ ಹೆದ್ದಾರಿಯ ಪ್ರತ್ಯೇಕ ಭಾಗವನ್ನು ತಲುಪಿದ ಅವರು ಕಾರಿನೊಳಗೆ ತೀವ್ರ ಜಗಳವಾಡುತ್ತಿದ್ದರು. ನಂತರ ಇಬ್ಬರೂ ಕಾರಿನಿಂದ ಇಳಿದು ಜಗಳ ಮುಂದುವರಿಸಿದ್ದಾರೆ. ಯಾವುದೋ ಕಾರಣಕ್ಕೆ ತೀವ್ರ ಕೋಪಗೊಂಡ ಕವಿನ್ ಒಂದು ಕ್ಷಣದಲ್ಲಿ ಕಾರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಕವಿನ್ ಓಡಿಸುತ್ತಿದ್ದ ಕಾರು Mercedes-Benz CLA 45 AMG ಸೆಡಾನ್ ಆಗಿದ್ದು, ಇದರ ಬೆಲೆ ಸುಮಾರು 70 ಲಕ್ಷ ರೂ. ಎನ್ನಲಾಗಿದೆ.

ಕಾರು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕ ದಳದವರು ಬರುವಷ್ಟರಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಕಾಂಚೀಪುರಂ ತಾಲೂಕು ಪೊಲೀಸರು ಕವಿನ್ ಅವರ ಕಾರಿಗೆ ಬೆಂಕಿ ಹಚ್ಚಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಿದ್ದಾರೆ. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ತನ್ನ ಕಾರಿಗೆ ಬೆಂಕಿ ಹಚ್ಚಲು ನಿಖರ ಕಾರಣ ಏನು ಎಂಬುದನ್ನು ವರದಿಗಳು ಉಲ್ಲೇಖಿಸಿಲ್ಲ.

ಭಾರತದಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದೇ ಮೊದಲಲ್ಲ. ತನ್ನ ಸೋದರ ಸಂಬಂಧಿ ಸಹೋದರಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದವನ ಕಾರಿಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದ. ಈ ಘಟನೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಪಶ್ಚಿಮ ದೆಹಲಿಯ ಸುಭಾಷ್ ನಗರದಲ್ಲಿನ ಮಲ್ಟಿಲೆವೆಲ್ ಪಾರ್ಕಿಂಗ್ ಸ್ಥಳದಲ್ಲಿ ನಡೆದಿದೆ. ಕಾರಿಗೆ ಬೆಂಕಿ ಹಚ್ಚಿದ್ದ ಕಾರಣ ದೆಹಲಿಯ 23 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಕಾರಿನಲ್ಲಿದ್ದ ಬೆಂಕಿ ಪಾರ್ಕಿಂಗ್ ಸ್ಥಳದಲ್ಲಿದ್ದ ಇತರ ಕಾರುಗಳಿಗೆ ವ್ಯಾಪಿಸಿ 20 ವಾಹನಗಳು ಬೆಂಕಿಗೆ ಆಹುತಿಯಾಗಿದ್ದವು.

ಕೋಪದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಕವಿನ್ ದುಬಾರಿ ಬೆಂಝ್ ಕಾರನ್ನು ಕಳೆದುಕೊಂಡಿದ್ದಾರೆ. ಸದ್ಯ ಇಬ್ಬರು ಹೇಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗೆಳತಿಯ ಮೇಲಿನ ಕೋಪಕ್ಕೆ ಕಾರು ಕಳೆದುಕೊಳ್ಳುವುದಲ್ಲದೇ ಪೊಲೀಸ್ ಠಾಣೆಗು ಹೋಗಿಬಂದಂತಾಗಿದೆ. ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಒಮ್ಮೆ ಶಾಂತವಾಗಿ ಯೋಚಿಸಿ ನೋಡಬೇಕು. ಇಲ್ಲದಿದ್ದರೆ ನಮ್ಮ ಕೋಪವೇ ನಮಗೆ ಶತ್ರುವಾಗಿ ಇಂತಹ ಅನಾಹುತಗಳಿಗೆ ನಾವೇ ಬಲಿಯಾಗುತ್ತೇವೆ ಎಂಬುದಕ್ಕೆ ಈ ಘಟನೆಯೇ ಉದಾಹರಣೆಯಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Most Read Articles

Kannada
English summary
Argument with girlfriend in car Rs 70 lakh car caught fire
Story first published: Thursday, February 2, 2023, 16:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X