Just In
Don't Miss!
- Sports
ಐಪಿಎಲ್ನಲ್ಲಿ ಕೆಟ್ಟ ದಾಖಲೆ ಬರೆದ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ
- Finance
ಶಾಲೆಯನ್ನ ಅರ್ಧಕ್ಕೆ ತೊರೆದು, 8,000 ರೂ. ವೇತನ ಪಡೆಯುತ್ತಿದ್ದ ನಿಖಿಲ್ ಕಾಮತ್ ಶತಕೋಟ್ಯಧಿಪತಿ ಆಗಿದ್ದೇಗೆ?
- News
ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರ ಬಿಗಿ ರೂಲ್ಸ್
- Education
Bank Of Baroda Recruitment 2021: 512 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಯುಗಾದಿ ಆರ್ಥಿಕ ಭವಿಷ್ಯ 2021: ನಿಮ್ಮ ನಕ್ಷತ್ರ ಪ್ರಕಾರ ಈ ವರ್ಷ ಆದಾಯ ಸ್ಥಿತಿ ಹೇಗಿರಲಿದೆ
- Movies
ಅಜಯ್ ದೇವಗನ್-ಅಮಿತಾಭ್ ಸಿನಿಮಾದ ಚಿತ್ರೀಕರಣಕ್ಕೆ ಕೊರೊನಾ ಅಡ್ಡಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಡಿಭಾಗದ ರಸ್ತೆ ಕಾಮಗಾರಿ ವೀಕ್ಷಿಸಲು ಆಫ್ ರೋಡ್ ಮೂಲಕ ಪ್ರಯಾಣ ಬೆಳೆಸಿದ ಮುಖ್ಯಮಂತ್ರಿ
ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರು ವಾಹನಗಳ ಬಗ್ಗೆ ಕ್ರೇಜ್ ಹೊಂದಿದ್ದಾರೆ. ಅವರು ಸ್ವತಃ ತಾವೇ ವಾಹನಗಳನ್ನು ಚಾಲನೆ ಮಾಡುವುದನ್ನು ಇಷ್ಟಪಡುತ್ತಾರೆ. ಈ ಹಿಂದೆ ಅವರು ವಾಹನಗಳನ್ನು ಚಾಲನೆ ಮಾಡಿಕೊಂಡು ಅರುಣಾಚಲ ಪ್ರದೇಶದ ವಿವಿಧ ಭಾಗಗಳಿಗೆ ಭೇಟಿ ನೀಡಿದ್ದರು.

ಈಗ ಅವರು ಮಹೀಂದ್ರಾ ಥಾರ್'ನಲ್ಲಿ ಅರುಣಾಚಲ ಪ್ರದೇಶದ ಸಾಂಗ್ಲಾಂಗ್ ಜಿಲ್ಲೆಯಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿದ್ದಾರೆ.ಸಾಂಗ್ಲಾಂಗ್ ಇಂಡೋ-ಮ್ಯಾನ್ಮಾರ್ ಗಡಿ ಭಾಗದಲ್ಲಿದೆ. ಈ ಜಿಲ್ಲೆಯು ರಾಜ್ಯದ ಯಾವುದೇ ಹೆದ್ದಾರಿಯೊಂದಿಗೆ ಸಂಪರ್ಕವನ್ನು ಹೊಂದಿಲ್ಲ ಎಂಬುದು ಗಮನಾರ್ಹ.

ಈ ಕಾರಣಕ್ಕೆ ಸಾಂಗ್ಲಾಂಗ್‌ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳನ್ನು ವೀಕ್ಷಿಸಲು ಪೆಮಾ ಖಂಡುರವರು ಅರಣ್ಯ ಪ್ರದೇಶದ ಮೂಲಕ ಪ್ರಯಾಣಿಸಿದ್ದಾರೆ. ಅವರು ಹೆಲಿಕಾಪ್ಟರ್ ಮೂಲಕ ಪ್ರಯಾಣಿಸಬಹುದಾಗಿತ್ತು.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಆದರೆ ಆಟೋಮೊಬೈಲ್ ವಾಹನಗಳ ಬಗ್ಗೆ ಇರುವ ಆಸಕ್ತಿಯಿಂದಾಗಿ ಅವರು ಮಹೀಂದ್ರಾ ಥಾರ್ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಅವರು ಮಹೀಂದ್ರಾ ಥಾರ್ ಎಸ್‌ಯುವಿಯಲ್ಲಿ ಪ್ರಯಾಣಿಸುತ್ತಿರುವ ವೀಡಿಯೊವನ್ನು ಶಾಂತೊನಿಲ್ ನಾಗ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಈ ವೀಡಿಯೊವನ್ನು ನೋಡಿದರೆ ಪೆಮಾ ಖಂಡುರವರು ಚಲಿಸುತ್ತಿರುವ ರಸ್ತೆ ಎಷ್ಟು ಹದಗೆಟ್ಟಿದೆ ಎಂಬುದನ್ನು ಕಾಣಬಹುದು. ಆ ರಸ್ತೆ ತುಂಬಾ ಒರಟಾಗಿದ್ದು, ಕೆಸರುಮಯವಾಗಿರುವುದನ್ನು ಕಾಣಬಹುದು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಈ ರಸ್ತೆಯಲ್ಲಿ ಚಲಿಸಲು ಮಹೀಂದ್ರಾ ಥಾರ್ ಸೂಕ್ತವೆಂಬ ಕಾರಣಕ್ಕೆ ಪೆಮಾ ಖಂಡುರವರು ಈ ಕಾರ್ ಅನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಪೆಮಾ ಖಂಡು ವಿಜಯನಗರಕ್ಕೆ ರಸ್ತೆ ಮೂಲಕ ಭೇಟಿ ನೀಡಿದ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಪ್ರಯಾಣದ ವೇಳೆಯಲ್ಲಿ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಮಿಯಾವೊದಿಂದ ವಿಜಯನಗರಕ್ಕೆಮರೆಯಲಾಗದ ಪ್ರವಾಸ ಎಂದು ಹೇಳಿದ್ದಾರೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಅರುಣಾಚಲ ಪ್ರದೇಶದ ಮುಖ್ಯಮಂತ್ರಿಗಳು ಸುಮಾರು 157 ಕಿ.ಮೀ ಪ್ರಯಾಣ ಬೆಳೆಸಿದ್ದಾರೆ. ಪೆಮಾ ಖಂಡುರವರು ಜನರು ಬಳಸುವ ರಸ್ತೆಯನ್ನು ಪರಿಶೀಲಿಸಲು ಅರಣ್ಯ ಪ್ರದೇಶವನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಈಗ ನಡೆಯುತ್ತಿರುವ ರಸ್ತೆ ಕಾಮಗಾರಿಗಳು 2022ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿವೆ. ರಸ್ತೆ ಕಾಮಗಾರಿ ಪೂರ್ಣಗೊಂಡ ನಂತರ ಈ ಪ್ರದೇಶದ ಜನರಿಗೆ ಹೆಚ್ಚಿನ ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆಗಳಿವೆ ಎಂದು ಅವರು ಹೇಳಿದರು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಪೆಮಾ ಖಂಡುರವರು ತಮ್ಮ ಆಫ್-ರೋಡ್ ಪ್ರಯಾಣಕ್ಕಾಗಿ ಆಯ್ಕೆ ಮಾಡಿಕೊಂಡ ಮಹೀಂದ್ರಾ ಥಾರ್ ಎಸ್‌ಯುವಿಯನ್ನು ಕಳೆದ ವರ್ಷದ ಅಕ್ಟೋಬರ್'ನಲ್ಲಿಬಿಡುಗಡೆಗೊಳಿಸಲಾಯಿತು. ಹೊಸ ತಲೆಮಾರಿನ ಮಹೀಂದ್ರಾ ಥಾರ್ ಎಸ್‌ಯುವಿಯ ಬೆಲೆ ಎಕ್ಸ್‌ಶೋರೂಂ ದರದಂತೆ ರೂ.10 ಲಕ್ಷದಿಂದ ರೂ.14.15 ಲಕ್ಷಗಳಾಗಿದೆ.
ಮೂಲ: ಶಾಂತೊನಿಲ್ ನಾಗ್/ಯೂಟ್ಯೂಬ್