ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ವೇಗವಾಗಿ ಹರಡುತ್ತಿದೆ. ಮೊದಲ ಅಲೆಗಿಂತ ಎರಡನೇ ಅಲೆ ಭೀಕರವಾಗಿದ್ದು, ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕರೋನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ.

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ಕರೋನಾ ವೈರಸ್ ಹರಡುವಿಕೆ ಸರಪಳಿಯನ್ನು ಮುರಿಯಲು ಈಗಾಗಲೇ ಹಲವು ರಾಜ್ಯಗಳು ಲಾಕ್‌ಡೌನ್ ಘೋಷಿಸಿವೆ. ಕಳೆದ ವರ್ಷ ಲಾಕ್‌ಡೌನ್ ಜಾರಿಗೊಳಿಸಿದ್ದಾಗ ದಿನ ನಿತ್ಯದ ದುಡಿಮೆಯ ಮೇಲೆ ಅವಲಂಬಿತರಾಗಿದ್ದ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವಾರು ಜನರು ಆರ್ಥಿಕ ಸಂಕಷ್ಟವನ್ನು ಎದುರಿಸಿದ್ದರು.

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ಈಗ ದೆಹಲಿಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಆಟೋ ಹಾಗೂ ಟ್ಯಾಕ್ಸಿ ಚಾಲಕರು ಆರ್ಥಿಕ ಸಂಕಷ್ಟವನ್ನು ಎದುರಿಸದೇ ಇರಲಿ ಎಂಬ ಕಾರಣಕ್ಕೆ ದೆಹಲಿ ಸರ್ಕಾರವು ಆರ್ಥಿಕ ಸಹಾಯವನ್ನು ಘೋಷಿಸಿದೆ.

MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್‌ಟಿಒ ಫಾರಂಗಳಿವು!

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಒಟ್ಟು 1.56 ಲಕ್ಷ ಆಟೋ ಹಾಗೂ ಟ್ಯಾಕ್ಸಿಗಳಿವೆ. ಎಲ್ಲಾ ನೋಂದಾಯಿತ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಮುಂದಿನ ಎರಡು ತಿಂಗಳವರೆಗೆ ರೂ.5000 ನೀಡಲಾಗುವುದು ಎಂದು ದೆಹಲಿ ಸರ್ಕಾರ ಘೋಷಿಸಿದೆ.

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ಕಳೆದ ಕೆಲವು ವಾರಗಳಿಂದ ದೆಹಲಿಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಈಗ ಈ ಅವಧಿಯನ್ನು ಮೇ 10ರವರೆಗೆ ವಿಸ್ತರಿಸಲಾಗಿದೆ. ಈ ಕಾರಣಕ್ಕೆ ಮುಂದಿನ ಎರಡು ತಿಂಗಳುಗಳವರೆಗೆ ದೆಹಲಿ ಸರ್ಕಾರವು ಆಟೋ ಹಾಗೂ ಟ್ಯಾಕ್ಸಿ ಡ್ರೈವರ್‌ಗಳಿಗೆ ರೂ.5000ಗಳ ನೆರವು ನೀಡಲಿದೆ.

MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್'ರವರು ಇತ್ತೀಚಿಗಷ್ಟೇ ಆಟೋ ಹಾಗೂ ಟ್ಯಾಕ್ಸಿ ಡ್ರೈವರ್‌ಗಳಿಗೆ ರೂ.5000 ಧನ ಸಹಾಯ ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಂಕಷ್ಟದ ಸಮಯದಲ್ಲಿ ಅವರಿಗೆ ಸ್ವಲ್ಪ ಪ್ರಮಾಣದಲ್ಲಿ ಸಹಾಯವಾಗಲಿದೆ.

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ದೆಹಲಿಯ ಪರಿಸ್ಥಿತಿ ಶೀಘ್ರದಲ್ಲೇ ಸುಧಾರಿಸಲಿದ್ದು, ಮತ್ತೆ ಲಾಕ್‌ಡೌನ್ ಜಾರಿಗೊಳಿಸುವ ಅಗತ್ಯವಿರುವುದಿಲ್ಲವೆಂದು ಅವರು ಹೇಳಿದರು. ಇದರ ಜೊತೆಗೆ ದೆಹಲಿಯಲ್ಲಿ 72 ಲಕ್ಷ ಪಡಿತರ ಚೀಟಿ ಹೊಂದಿರುವವರಿಗೆ ಎರಡು ತಿಂಗಳ ಉಚಿತ ಪಡಿತರ ನೀಡಲಾಗುವುದು.

MOSTREAD: 10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ಇದರಿಂದಲೂ ಸಹ ಜನರಿಗೆ ಸಹಾಯವಾಗಲಿದೆ. ಉಚಿತ ಪಡಿತರ ನಿಡುವುದರಿಂದ ಈ ಸಂಕಷ್ಟದ ಸಮಯದಲ್ಲಿ ಬಡವರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಆಟೋ ಚಾಲಕರಿಗೆ ಆರ್ಥಿಕ ನೆರವು ಘೋಷಿಸಿದ ಅರವಿಂದ್ ಕೇಜ್ರಿವಾಲ್

ದೆಹಲಿಯಲ್ಲಿ ಭಾನುವಾರ ಹೊಸದಾಗಿ 20,394 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಅಂದು ಒಟ್ಟು 71,997 ಪರೀಕ್ಷೆಗಳನ್ನು ನಡೆಸಲಾಗಿತ್ತು. ದೇಶದ ಇತರ ಭಾಗಗಳಂತೆ ದೆಹಲಿಯ ಆಸ್ಪತ್ರೆಗಳಲ್ಲಿಯೂ ಆಕ್ಸಿಜನ್ ಕೊರತೆ ಎದುರಾಗಿದೆ.

Most Read Articles

Kannada
English summary
Arvind Kejriwal announces package for auto and taxi drivers. Read in Kannada.
Story first published: Tuesday, May 4, 2021, 20:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X