ದೊಡ್ಮನೆ ಸೇರಿದ ಕೋಟಿ ಬೆಲೆಯ ಆಡಿ ಕ್ಯೂ7: ಅಶ್ವಿನಿ ಪುನೀತ್ ರಾಜ್‌ಕುಮಾರ್ ಹೊಸ ಕಾರಿನ ವಿಶೇಷತೆಗಳೇನು?
ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಕನ್ನಡಿಗರ ಮನದಲ್ಲಿ ಎಂದೆಂದಿಗೂ ಅಜರಾಮರ. ಅಪ್ಪು ಅವರಿಗೆ ಕಾರುಗಳ ಬಗ್ಗೆ ಹೆಚ್ಚು ಕ್ರೇಜ್ ಅನ್ನು ಹೊಂದಿದ್ದರು. ಇದೀಗ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಐಷಾರಾಮಿ ಆಡಿ ಕ್ಯೂ7 (Audi Q7) ಕಾರು ಖರೀದಿಸಿದ್ದಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ತಮ್ಮ ಹೊಸ ಐಷಾರಾಮಿ ಆಡಿ ಕಾರಿನೊಟ್ಟಿಗೆ ನಿಂತಿರುವ ಚಿತ್ರವನ್ನು ಆಡಿ ಬೆಂಗಳೂರು ಫೇಸ್‌ಬುಕ್ ಪೇಜ್ನಲ್ಲಿ ಶೇರ್ ಮಾಡಿದ್ದಾರೆ. ಈ ಐಷಾರಾಮಿ ಆಡಿ ಕ್ಯೂ7 ಮಾದರಿಯು ಗ್ರೇ ಬಣ್ಣವನ್ನು ಹೊಂದಿದೆ. ಈ ಐಷಾರಾಮಿ ಕಾರಿನ ಆನ್ ರೋಡ್ ಬೆಲೆಯು ರೂ.1.10 ಕೋಟಿಯಾಗಿದೆ. ಇವರು ಆಡಿ ಕ್ಯೂ7 ಕಾರಿನ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿಲ್ಲ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಪಿಆರ್ಕೆ ಪ್ರೊಡೆಕ್ಷನ್ (PRK Production) ಸಂಪೂರ್ಣ ಹೊಣೆ ಹೊತ್ತಿದ್ದಾರೆ. ನಿರ್ಮಾಪಕಿಯಾಗಿ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಅವರು ಮಹಿಳಾ ತಂತ್ರಜ್ಞರಿಗೆ ಅವಕಾಶ ನೀಡುವುದರ ಜೊತೆಗೆ ಮಹಿಳಾ ಪ್ರಧಾನ ಸಿನಿಮಾಗಳನ್ನು ಸಹ ನಿರ್ಮಾಣ ಮಾಡುತ್ತಿದ್ದಾರೆ. ಅವರು ಇತರ ಕನ್ನಡ ಸಿನಿಮಾಗಳ ಪ್ರಚಾರ ಕಾರ್ಯದಲ್ಲಿಯೂ ಭಾಗಿಯಾಗುತ್ತಾರೆ.
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಖರೀದಿಸಿದ ಆಡಿ ಕ್ಯೂ7 ಕಾರಿನ ಬಗ್ಗೆ ಹೇಳುವುದಾದರೆ, ಈ ಕಾರಿನಲ್ಲಿ ಅತ್ಯಾಧುನಿಕ ಫೀಚರ್ಸ್ ಮತ್ತು ತಂತ್ರಜ್ಙಾನಗಳನ್ನು ಒಳಗೊಂಡಿರುತ್ತದೆ. ಈ ಕಾರಿನಲ್ಲಿ 3.0-ಲೀಟರ್, ಟ್ವಿನ್-ಟರ್ಬೋಚಾರ್ಜ್ಡ್, ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 335 ಬಿಹೆಚ್‍ಪಿ ಪವರ್ ಮತ್ತು 500 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ನೊಂದಿಗೆ 8-ಸ್ಪೀಡ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಹೊಸ ಕ್ಯೂ5 ನಂತೆ ಕ್ಯೂ7 ಕೂಡ ಮೈಲ್ಡ್ -ಹೈಬ್ರಿಡ್ ಸಿಸ್ಟಂ ಅನ್ನು ಪಡೆಯುತ್ತದೆ, ಇದು 48-ವೋಲ್ಟ್ ಎಲೆಕ್ಟ್ರಿಕ್ ಮೋಟಾರು, ಲಿಥಿಯಂ-ಐಯಾನ್ ಬ್ಯಾಟರಿ ಮತ್ತು ಬೆಲ್ಟ್ ಆಲ್ಟರ್ನೇಟರ್ ಸ್ಟಾರ್ಟರ್ (BAS) ಅನ್ನು ಒಳಗೊಂಡಿರುತ್ತದೆ. ಇನ್ನು ಈ ಹೊಸ ಆಡಿ ಕ್ಯೂ7 ಫೇಸ್‌ಲಿಫ್ಟ್ ಎಸ್‍ಯುವಿಯು 250 ಕಿಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.
ಬ್ರ್ಯಾಂಡ್‌ನ ಕ್ವಾಟ್ರೊ ಆಲ್-ವೀಲ್-ಡ್ರೈವ್ ಸಿಸ್ಟಂ ಸಹ ಈ ಎಸ್‍ಯುವಿಯಲ್ಲಿ ನೀಡಲಾಗುತ್ತದೆ. ಆಡಿ ಕ್ಯೂ7 ಎಂಟ್ರಿ ಲೆವೆಲ್ ಪ್ರೀಮಿಯಂ ಪ್ಲಸ್ ರೂಪಾಂತರವು 19-ಇಂಚಿನ ಅಲಾಯ್ ವ್ಹೀಲ್ ಗಳು, ಎಂಟು ಏರ್‌ಬ್ಯಾಗ್‌ಗಳು, ಪನರೋಮಿಕ್ ಸನ್‌ರೂಫ್, ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಅಡಾಪ್ಟಿವ್ ಏರ್ ಸಸ್ಪೆನ್ಷನ್, ಆಂಬಿಯೆಂಟ್ ಲೈಟಿಂಗ್ ಮತ್ತು ಎಲೆಕ್ಟ್ರಿಕಲಿ-ಹೊಂದಾಣಿಕೆ ಸ್ಟೀರಿಂಗ್ ವ್ಹೀಲ್ ಅನ್ನು ಒಳಗೊಂಡಿದೆ.
ಇದರೊಂದಿಗೆ ಸೀಟುಗಳಿಗೆ ಲಂಬೂರ್ ಸಂಪೂರ್ಟ್, ಪಾರ್ಕಿಂಗ್ ಅಸಿಸ್ಟ್ ಜೊತೆಗೆ ಕ್ರೂಸ್ ಕಂಟ್ರೋಲ್, ಫ್ಹೋರ್ ಜೋನ್ ಕಂಟ್ರೋಲ್, ಪವರ್-ಹೊಂದಾಣಿಕೆ ಮುಂಭಾಗದ ಸೀಟುಗಳು ಮತ್ತು ಡ್ರೈವರ್ ಸೀಟ್‌ಗಾಗಿ ಮೆಮೊರಿ ಫಂಕ್ಷನ್, ವರ್ಚುವಲ್ ಕಾಕ್‌ಪಿಟ್ ಮತ್ತು ಲೇನ್ ಡಿಪರ್ಚರ್ ಎಕ್ಸಿಟ್ ಅನ್ನು ಹೊಂದಿದೆ. ಅಷ್ತೇ ಅಲ್ಲದೇ ಡ್ಯುಯಲ್-ಸ್ಕ್ರೀನ್ ಎಂಎಂಐ ಪ್ಲಸ್, ಆಡಿ ಡ್ರೈವ್ ಆಯ್ಕೆ, ಆಡಿ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ ಆಡಿ ಫೋನ್ ಬಾಕ್ಸ್ ಮತ್ತು ಆಡಿ ಸ್ಮಾರ್ಟ್‌ಫೋನ್ ಇಂಟರ್ಫೇಸ್ ಹೊಂದಿದೆ.
ಆಡಿ ಕ್ಯೂ7ಮಾದರಿಯಲ್ಲಿ ಟೆಕ್ನಾಲಜಿ ರೂಪಾಂತರವು ಅಡಾಪ್ಟಿವ್ ವಿಂಡ್‌ಶೀಲ್ಡ್ ವೈಪರ್‌ಗಳನ್ನು ಪಡೆಯುತ್ತದೆ, ಸೆನ್ಸರ್-ಕಂಟ್ರೋಲ್ಡ್ ಲಗೇಜ್ ಕಂಪಾರ್ಟ್‌ಮೆಂಟ್ ರೀಲಿಸ್ ಕಂಫರ್ಟ್ ಕೀ, ಹಿಂಭಾಗದಲ್ಲಿ ಚಾರ್ಜಿಂಗ್ ಫಂಕ್ಷನ್ ನೊಂದಿಗೆ USB ಪೋರ್ಟ್‌ಗಳು, ಆಡಿ ಪಾರ್ಕ್ ಅಸಿಸ್ಟ್ ಜೊತೆಗೆ 3D ಸರೌಂಡ್ ಕ್ಯಾಮೆರಾಗಳು, 730W ಬ್ಯಾಂಗ್ ಮತ್ತು ಒಲುಫ್‌ಸೆನ್ ಮೂಲದ ಸರೌಂಡ್ ಸೌಂಡ್ ಸಿಸ್ಟಮ್, ಮತ್ತು ಮ್ಯಾಟ್ರಿಕ್ಸ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








