ಏಷ್ಯಾ ಕಪ್‌ನಲ್ಲಿ Team India ಚಾಂಪಿಯನ್: ಅಭಿಷೇಕ್ ಶರ್ಮಾಗೆ ಸಿಕ್ತು ಕಲ್ಲು ಬಂಡೆಯಂತಹ Haval H9 Suv.. ಬೆಲೆ ಎಷ್ಟು?

ಏಷ್ಯಾ ಕಪ್‌ನ ಫೈನಲ್ ಪಂದ್ಯವು ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಭಾನುವಾರ ನಡೆಯಿತು. ಟೀಮ್ ಇಂಡಿಯಾ ಭರ್ಜರಿಯಾಗಿ ಜಯ ಗಳಿಸಿದೆ. ಈ ಟೂರ್ನಿಯಲ್ಲಿ ಯುವ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ (Abhishek Sharma) ಅದ್ಭುತ ಪ್ರದರ್ಶನ ಪ್ರದರ್ಶನ ನೀಡಿದ್ದು, ಪ್ಲೇಯರ್ ಆಫ್ ದಿ ಟೂರ್ನಿಮೆಂಟ್ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಅವರಿಗೆ ಹವಾಲ್ ಹೆಚ್9 (Haval H9) ಎಸ್‌ಯುವಿ ಉಡುಗೊರೆಯಾಗಿ ಲಭ್ಯವಾಗಿದೆ. ಬನ್ನಿ, ಈ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಕುರಿತಂತೆ ಪ್ರಮುಖ ವಿವರಗಳನ್ನು ತಿಳಿಯೋಣ.

ಹವಾಲ್ ಹೆಚ್9 ವಿಶೇಷತೆಗಳೇನು:

ಇದೊಂದು ಆಫ್-ರೋಡ್ ಎಸ್‌ಯುವಿಯಾಗಿದ್ದು, ವಿದೇಶಿ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 142,199.8 ಸೌದಿ ರಿಯಾಲ್‌ ಬೆಲೆಯನ್ನು ಹೊಂದಿದೆ. ಭಾರತೀಯ ರೂಪಾಯಿಗೆ ಪರಿವರ್ತಿಸಿದಾಗ 33.60 ಲಕ್ಷ ಆಗುತ್ತದೆ. ಹೆಚ್9 ಮಿಡ್, ಹೆಚ್9 ಹೈ ಹಾಗೂ ಹೆಚ್9 ಪ್ರೀಮಿಯಂ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ.

Asia Cup Cricketer Abhishek Sharma Awarded HAVAL H9 SUV Details

ಈ ಕಾರು ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರನ್ನು ಸೆಳೆಯುತ್ತದೆ. ಅಡಾಪ್ಟಿವ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ ಲೈಟ್‌ಗಳು ಹಾಗೂ 18-19 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಸಿಲ್ವರ್, ವೈಟ್, ಬ್ಲ್ಯಾಕ್, ಗ್ರೇ ಹಾಗೂ ಗ್ರೀನ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ ಹವಾಲ್ ಹೆಚ್9 ಎಸ್‌ಯುವಿಯು ಹೆಚ್ಚು ವಿಶಾಲ ಗಾತ್ರದಲ್ಲಿದೆ. 4,950 ಎಂಎಂ ಉದ್ದ, 1,976 ಎಂಎಂ ಅಗಲ ಹಾಗೂ 1,905 ಎಂಎಂ ಎತ್ತರವಿದೆ. 224 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2800 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 2,280 ಕೆಜಿ ತೂಕವಿದೆ.

Asia Cup Cricketer Abhishek Sharma Awarded HAVAL H9 SUV Details

ಇದು 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ವೀಕೆಂಡ್ ಹಾಗೂ ರಜಾ ದಿನಗಳಲ್ಲಿ ದೂರದ ಊರುಗಳಿಗೆ ಪ್ರವಾಸಕ್ಕೆ ತೆರಳುವಾಗ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 747 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.0-ಲೀಟರ್ ಟರ್ಬೊಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 248 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 380 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಹೊಸ ಹವಾಲ್ ಹೆಚ್9 ಕಾರು 4ಡಬ್ಲ್ಯೂಡಿ (ಫೋರ್ ವೀಲ್ ಡ್ರೈವ್) ಟೆಕ್ನಾಲಜಿಯನ್ನು ಪಡೆದಿದೆ. ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 12 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 200 ಕೆಎಂಪಿಹೆಚ್ ಸ್ಪೀಡ್‌ನ್ನು ಪಡೆದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಇದರ ಕ್ಯಾಬಿನ್ ವಿನ್ಯಾಸವು ತುಂಬಾ ಚೆನ್ನಾಗಿದೆ. 14.6 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 10.25 ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಪ್ರೀಮಿಯಂ ಆಡಿಯೊ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ & ಮಸಾಜ್ ಫ್ರಂಟ್ ಸೀಟ್‌ಗಳು, 3-ಜೋನ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಏರ್ ಪ್ಯೂರಿಫೈಯರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಬ್ಲೈಂಡ್ ಸ್ಪಾಟ್ ಡಿಟೆಕ್ಷನ್, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್, ಟ್ರಾಫಿಕ್ ಜಾಮ್ ಅಸಿಸ್ಟ್ ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

More from DriveSpark

Article Published On: Monday, September 29, 2025, 17:32 [IST]
English summary
Asia cup cricketer abhishek sharma awarded haval h9 suv details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+