IndiGo: ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರಿಂದ 'ರಾಮ ಬರುತ್ತಾರೆ..' ಗಾಯನ, ವಿಡಿಯೋ ಸಖತ್ ವೈರಲ್
ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಅಯೋಧ್ಯೆ (Ayodhya)ಯಲ್ಲಿ ರಾಮ ಮಂದಿರ (Ram Mandir) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಜನವರಿ 22 ರಂದು 'ರಾಮ ಲಲ್ಲಾ' ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಇದಕ್ಕಾಗಿ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ.
ಇತ್ತೀಚೆಗಷ್ಟೇ ಇಂಡಿಗೋ (IndiGo) ವಿಮಾನದಲ್ಲಿ ಪ್ರಯಾಣಿಕರು ರಾಮ್ ಆಯೇಂಗೆ (ರಾಮ ಬರುತ್ತಾರೆ - Ram Aayenge) ಎಂದು ಹಾಡುತ್ತಿರುವ ವಿಡಿಯೋ ಕ್ಲಿಪ್ ಇನ್‌ಸ್ಟಾಗ್ರಾಂನಲ್ಲಿ ಸಖತ್ ವೈರಲ್ ಆಗಿದೆ. ಕೇಂದ್ರ ಸರ್ಕಾರದ ಮೈಗೊವ್ (MyGov) ಪುಟದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, 'ಅಯೋಧ್ಯೆಗೆ ಹೋಗುವ ವಿಮಾನದಲ್ಲಿ ಪ್ರಯಾಣಿಕರು ತಮ್ಮ ಉತ್ಸಾಹವನ್ನು ತೋರಿಸುತ್ತಾ ಏಕಕಂಠದಲ್ಲಿ ಹಾಡಿರುವುದು ನಿಜವಾಗಿಯೂ ಉತ್ತಮ ಅನುಭವ' ಎಂದು ಶೀರ್ಷಿಕೆ ಬರೆಯಲಾಗಿದೆ.

ಈ ವಿಡಿಯೋದಲ್ಲಿ ಪ್ರಯಾಣಿಕರು ಚಪ್ಪಾಳೆ ತಟ್ಟುತ್ತಲೇ 'ರಾಮ್ ಆಯೇಂಗೆ' ಎಂದು ಹಾಡುತ್ತಿರುವುದು ಹಾಗೂ ಕೆಲವರು ಈ ದೃಶ್ಯವನ್ನು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಸೆರೆಯಿಡಿಯುತ್ತಿರುವುದನ್ನು ನೋಡಬಹುದು. ಇನ್‌ಸ್ಟಾಗ್ರಾಂನಲ್ಲಿ ಈ ಕ್ಲಿಪ್ (ತುಣುಕು) 14 ಲಕ್ಷ ವೀಕ್ಷಣೆಯಾಗಿದ್ದು, ಸರಿ ಸುಮಾರು 1,396,052 ಅಧಿಕ ಲೈಕ್, 8000 ಹೆಚ್ಚಿನ ಕಾಮೆಂಟ್ ಪಡೆದುಕೊಂಡಿದೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ (Air India Express) ಅಯೋಧ್ಯೆ (Ayodhya) - ಬೆಂಗಳೂರು (Bengaluru) ನಡುವೆ ತನ್ನ ಮೊದಲ ತಡೆ-ರಹಿತ (non - stop) ವಿಮಾನ ಸಂಚಾರವನ್ನು ಈಗಾಗಲೇ ಪ್ರಾರಂಭಿಸಿದೆ. ಈ ವಿಮಾನ ವಾರದ ಮೂರು ದಿನ (ಸೋಮವಾರ, ಬುಧವಾರ ಮತ್ತು ಗುರುವಾರ) ಕಾರ್ಯಚರಣೆ ನಡೆಸಲಿದೆ.

ಈ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಬೆಂಗಳೂರಿಂದ ಬೆಳಗ್ಗೆ 7.30ಕ್ಕೆ ಹೋರಾಡಲಿದ್ದು, 10 ಗಂಟೆಗೆ ಅಯೋಧ್ಯೆಯನ್ನು ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3 ಗಂಟೆಗೆ ಸಂಚಾರವನ್ನು ಆರಂಭಿಸಲಿದ್ದು, ಸಂಜೆ 5.30ಕ್ಕೆ ಬೆಂಗಳೂರಿಗೆ ಬರಲಿದೆ. ಸದ್ಯ, ಟಿಕೆಟ್ ದರಗಳು ದ್ವಿಗುಣಗೊಂಡಿದೆ ಎಂಬ ವಿವರಗಳು ಲಭ್ಯವಾಗಿದೆ. ಬೆಂಗಳೂರು ಹೊರತುಪಡಿಸಿ, ಕೋಲ್ಕತ್ತಾ ಹಾಗೂ ದೆಹಲಿಯಿಂದಲೂ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನಗಳು ಸಂಚರಿಸಲಿವೆ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (Airports Authority of India), ರೂ.350 ಕೋಟಿ ವೆಚ್ಚದಲ್ಲಿ ಅಯೋಧ್ಯೆ ವಿಮಾನ ನಿಲ್ದಾಣ (Ayodhya International Airport)ವನ್ನು ಅಭಿವೃದ್ಧಿಪಡಿಸಿದೆ. ಡಿಸೆಂಬರ್ 14 ರಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಈ ಏರ್‌ಪೋರ್ಟ್ ಗೆ ಪರವಾನಿಗೆಯನ್ನು ನೀಡಿತ್ತು. ಡಿಸೆಂಬರ್ 30ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಈ ವಿಮಾನ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದ್ದರು.
ರಾಮ ಜನ್ಮಭೂಮಿ ಅಯೋಧ್ಯೆಗೆ ವಿಮಾನ ಮಾತ್ರವಲ್ಲದೆ, ವಿವಿಧ ರಾಜ್ಯಗಳಿಂದ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ. ಛತ್ತೀಸ್‌ಗಢದಲ್ಲಿ ಸಿಎಂ ವಿಷ್ಣು ದೇವ್ ಸಾಯಿ ನೇತೃತ್ವದ ಆಡಳಿತರೂಢ ಬಿಜೆಪಿ ಸರ್ಕಾರ, ಕ್ಯಾಬಿನೆಟ್ ಸಭೆಯಲ್ಲಿ ಶ್ರೀರಾಮನ ದರ್ಶನಕ್ಕೆ ಹೋಗಲು ಇಚ್ಚಿಸುವ ಭಕ್ತರಿಗಾಗಿ 'ವಾರ್ಷಿಕ ಉಚಿತ ರೈಲು ಪ್ರಯಾಣ ಯೋಜನೆ'ಗೆ ಅನುಮೋದನೆ ನೀಡಿದೆ. ಕರ್ನಾಟಕದಿಂದಲೂ ಫೆಬ್ರವರಿಯಿಂದ ಅಯೋಧ್ಯೆಗೆ 11 ವಿಶೇಷ ರೈಲುಗಳು ಸಂಚರಿಸುವ ನೀರಿಕ್ಷೆಯಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications