Bangalore bandh: ಬೆಂಗಳೂರು ಬಂದ್ ಘೋಷಣೆ.. ಏನಿರುತ್ತೆ, ಏನಿರಲ್ಲ?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ರಾಜ್ಯಾದ್ಯಂತ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಟ್ಟಿದೆ. ಇದರಿಂದ ನಷ್ಟಕ್ಕೆ ಸಿಲುಕಿರುವ ರಾಜ್ಯ ಖಾಸಗಿ ಸಾರಿಗೆ ಒಕ್ಕೂಟ ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್‍ಗೆ ಕರೆ ನೀಡಿದೆ.

ಆಗಸ್ಟ್ 31 ರೊಳಗೆ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಗಡುವನ್ನು ನೀಡಿತ್ತು. ಆದರೆ, ಸೂಕ್ತ ಪ್ರತಿಕ್ರಿಯೆ ಬಾರದ ಹಿನ್ನೆಲೆ, ಬೆಂಗಳೂರು ಬಂದ್ (Bangalore bandh) ಮಾಡುವ ನಿರ್ಧಾರಕ್ಕೆ ಬಂದಿದೆ. ಆ ದಿನ (ಸೆ.11), ನಗರದಲ್ಲಿ ಆಟೋಗಳು, ಏರ್ಪೋಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್‌, ಬಸ್‌ ಸೇರಿದಂತೆ ಸರಿ ಸುಮಾರು 9 ಲಕ್ಷ ಖಾಸಗಿ ವಾಹನಗಳು ರಸ್ತೆಗೆ ಇಳಿಯುವುದು ಅನುಮಾನವಾಗಿದೆ.

Bangalore bandh: ಬೆಂಗಳೂರು ಬಂದ್ ಘೋಷಣೆ, ಏನಿರುತ್ತೆ ಏನಿರಲ್ಲ?

ಬಂದ್ ದಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ ಪಾರ್ಕ್ ತನಕ ಮೆರವಣಿಗೆ ನಡೆಸಲು ಖಾಸಗಿ ಸಾರಿಗೆ ಒಕ್ಕೂಟದ ಸದಸ್ಯರು ತೀರ್ಮಾನ ಮಾಡಿದ್ದಾರೆ. ಪ್ರಸ್ತುತ, ರಾಜ್ಯದಲ್ಲಿ 5 ಲಕ್ಷಕ್ಕೂ ಅಧಿಕ ಆಟೋ, 3 ಲಕ್ಷ ಕ್ಯಾಬ್‌ ಮತ್ತು 50,000 ಖಾಸಗಿ ಬಸ್‌ಗಳು ಕಾರ್ಯಚರಣೆ ನಡೆಸುತ್ತಿವೆ.

ಇವುಗಳಿಂದ, ಸರ್ಕಾರಕ್ಕೆ ಪ್ರತಿ ವರ್ಷ ನೇರ ತೆರಿಗೆ ರೂಪದಲ್ಲಿ ರೂ.2,000 ಕೋಟಿ ಹೆಚ್ಚು ಸಂಗ್ರಹವಾಗುತ್ತದೆ. ಪರೋಕ್ಷ ತೆರಿಗೆ ರೂಪದಲ್ಲಿ ರೂ.20,000 ಕೋಟಿ (ಡೀಸೆಲ್, ಪೆಟ್ರೋಲ್ ವಾಹನ ಬಿಡಿ ಭಾಗಗಳು ಮತ್ತು ಟೈರ್ ಖರೀದಿ) ಪಾವತಿಸುತ್ತಿದ್ದಾರೆ. ಆದರೆ, ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಜೀವನ ನಡೆಸುವುದು ಕಷ್ಟವಾಗಿದೆ ಎಂದು ಖಾಸಗಿ ಸಾರಿಗೆ ಒಕ್ಕೂಟ ಸದಸ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

Bangalore bandh: ಬೆಂಗಳೂರು ಬಂದ್ ಘೋಷಣೆ, ಏನಿರುತ್ತೆ ಏನಿರಲ್ಲ?

ಜೂನ್ 11ರಂದು ಶಕ್ತಿ ಯೋಜನೆಯ ಭಾಗವಾಗಿ ಕರ್ನಾಟಕದಾದ್ಯಂತ ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡದ ಪರಿಣಾಮವಾಗಿ, ಶೇಕಡ 40% ಆದಾಯವನ್ನು ಕಳೆದುಕೊಂಡಿದ್ದೇವೆ. ಈ ಯೋಜನೆಯಿಂದ ನಮಗಾಗಿರುವ ನಷ್ಟಕ್ಕೆ ಪರಿಹಾರ ನೀಡಬೇಕು ಎಂದು ಒಕ್ಕೂಟ ಸದಸ್ಯರು ಒತ್ತಾಯಿಸಿದ್ದಾರೆ. ಅಲ್ಲದೆ, ಕೊರೋನಾ ಸಾಂಕ್ರಾಮಿಕದ ವೇಳೆಯೂ ಸಾಕಷ್ಟು ನಷ್ಟ ಅನುಭವಿಸಿ, ಸಾಲದ ಸುಳಿಯಲ್ಲಿ ಸಿಲುಕಿಕೊಂಡಿದ್ದೇವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಕಳೆದ ಜುಲೈ 27 ರಂದೇ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿತ್ತು. ಆದರೆ, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು, ಖಾಸಗಿ ಸಾರಿಗೆ ಒಕ್ಕೂಟದ ಸದಸ್ಯರೊಂದಿಗೆ ಜುಲೈ 24 ರಂದು ಸಭೆ ನಡೆಸಿ, ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಬಂದ್ ಮುಂದಿಡಲಾಗಿತ್ತು. ಸದ್ಯ, ಗಡುವು ಮುಗಿದರೂ ಯಾವುದೇ ಬೇಡಿಕೆ ಈಡೇರಿಸಿದ ಕಾರಣ, ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ ನಡೆಸಲಿವೆ.

ಬಂದ್ ದಿನ ಖಾಸಗಿ ಬಸ್‌, ಕ್ಯಾಬ್‌ ಮತ್ತು ಆಟೋಗಳು ರಸ್ತೆಗೆ ಇಳಿಯುವುದು ಅನುಮಾನವಾಗಿರುವುದರಿಂದ ಇವುಗಳನ್ನೇ ಅವಲಂಭಿಸರುವ ಲಕ್ಷಾಂತರ ಜನರಿಗೆ ತೊಂದರೆಯಾಗಬಹುದು. ಆದರೆ, ಎಂದಿನಂತೆ ಬಿಎಂಟಿಸಿ, ಮೆಟ್ರೊ ಸೇವೆಗಳು ಇರಲಿವೆ. ದಿನನಿತ್ಯ ಬಳಕೆಯ ಹಾಲು, ತರಕಾರಿ ಪೂರೈಕೆಯಲ್ಲಿಯೂ ಅಷ್ಟಾಗಿ ವ್ಯತ್ಯಾಸವಾಗುವುದಿಲ್ಲ ಎಂದು ಹೇಳಲಾಗಿದೆ. ಶಾಲಾ - ಕಾಲೇಜುಗಳು ಇರುತ್ತವೆಯೇ, ಇಲ್ಲವೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, September 4, 2023, 18:37 [IST]
English summary
Bangalore bandh on september 11 here the full details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+