ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ದೇಶಾದ್ಯಂತ ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ದುಬಾರಿ ದಂಡಗಳನ್ನು ವಿಧಿಸುತ್ತಿದ್ದರೂ ಸಹ ಕೆಲವು ಕಡೆಗಳಲ್ಲಿ ವಾಹನ ಸವಾರರು ಮಾತ್ರ ನಿಯಮ ಉಲ್ಲಂಘನೆ ಮಾಡುವುದು ಮಾತ್ರ ಕಡಿಮೆಯಾಗುತ್ತಿಲ್ಲ. ಇದಕ್ಕೆ ಪರಿಣಾಮಕಾರಿಯಾಗಿ ಕಡಿವಾಣ ಹಾಕುವ ಉದ್ದೇಶದಿಂದ ಬೆಂಗಳೂರು ಟ್ರಾಫಿಕ್ ಪೊಲೀಸರು ಹೊಸ ಯೋಜನೆಯೊಂದಕ್ಕೆ ಚಾಲನೆ ನೀಡಿದ್ದಾರೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಟ್ರಾಫಿಕ್ ಪೊಲೀಸರು ಇರುವ ಕಡೆಗಳಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವ ವಾಹನ ಸವಾರರು ಪೊಲೀಸರು ಇಲ್ಲದ ಕಡೆಗಳಲ್ಲಿ ಯಾವುದೇ ಭಯವಿಲ್ಲದೆ ಟ್ರಾಫಿಕ್ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುತ್ತಲೇ ಇರುತ್ತಾರೆ. ಇದರಿಂದ ಮುಖ್ಯ ರಸ್ತೆಗಳಿಂತ ಸಣ್ಣಪುಟ್ಟ ರಸ್ತೆಗಳಲ್ಲೇ ಹೆಚ್ಚು ಅಪಘಾತಗಳು ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಯುವ ಉದ್ದೇಶದಿಂದ ಯಾವುದೇ ಹೆಚ್ಚುವರಿ ಪೊಲೀಸರನ್ನು ನೇಮಕ ಮಾಡದೆಯೇ ವಾಹನ ಸವಾರರು ಕಟ್ಟುನಿಟ್ಟಾಗಿ ನಿಯಮಪಾಲನೆ ಮಾಡುವಂತೆ ಮಾಡಲಾಗುತ್ತಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಹೌದು, ಬೆಂಗಳೂರು ಟ್ರಾಫಿಕ್ ಪೊಲೀಸರು ಸಿಗ್ನಲ್‌ಗಳಲ್ಲಿ 24 ಗಂಟೆಯೂ ಕಾರ್ಯನಿರ್ವಹಣೆ ಮಾಡುವ ಉದ್ದೇಶದಿಂದ ಮ್ಯಾನಿಕ್ವಿನ್ಸ್‌ಗಳ(ಪ್ರತಿಕೃತಿ) ಮೊರೆ ಹೋಗಿದ್ದು, ಒನ್ ವೇ ಗಳಲ್ಲಿ ನುಗ್ಗುವ ಮತ್ತು ಸಿಗ್ನಲ್ ಜಂಪ್ ಪ್ರಕರಣಗಳನ್ನು ಕಡಿಮೆಗೊಳಿಸಲು ಟ್ರಾಫಿಕ್ ಪೊಲೀಸರನ್ನೇ ಹೋಲುವ ಮ್ಯಾನಿ​ಕ್ವಿನ್ಸ್‌​ಗಳನ್ನು ಅಳವಡಿಸಲಾಗುತ್ತಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಮ್ಯಾನಿ​ಕ್ವಿನ್ಸ್‌​ಗಳು ಟ್ರಾಫಿಕ್ ಪೊಲೀಸರಷ್ಟೆ ಎತ್ತರ, ಯೂನಿಫಾರಂ ಅನ್ನು ತೊಡಿಸಿರುವುದು ನಿಜವಾದ ಪೊಲೀಸರೇ ವಾಹನ ತಪಾಸಣೆಗೆ ನಿಂತಿರುವ ಹಾಗೆ ಭಾಸಲಾಗುತ್ತದೆ. ಇದರಿಂದ ಒನ್‌ವೇ ಗಳಲ್ಲಿ ನುಗ್ಗುವ ಮತ್ತು ಸಿಗ್ನಲ್ ಜಂಪ್ ಪ್ರಕರಣಗಳು ಪರಿಣಾಮಕಾರಿಯಾಗಿ ತಗ್ಗಿಸಬಹುದಾಗಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಬೆಂಗಳೂರಿನ ಪ್ರಮುಖ ಠಾಣಾ ವ್ಯಾಪ್ತಿಗಳಲ್ಲಿ ಈಗಾಗಲೇ ಮ್ಯಾನಿಕ್ವಿನ್ಸ್‌ಗಳ ಅಳವಡಿಕೆ ಮಾಡಲಾಗಿದ್ದು, ಶೀಘ್ರದಲ್ಲೇ ಮತ್ತಷ್ಟು ಮ್ಯಾನಿಕ್ವಿನ್ಸ್‌ಗಳನ್ನು ಟ್ರಾಫಿಕ್ ಪೊಲೀಸರು ಕೊರತೆ ಇರುವ ಕಡೆಗಳಲ್ಲಿ ನಿಯೋಜಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ಸಿಬ್ಬಂದಿ ಕೊರತೆಯಿದ್ದರೂ ಟ್ರಾಫಿಕ್ ನಿರ್ವಹಣೆ ಮತ್ತಷ್ಟು ಸುಲಭವಾಗಲಿದ್ದು, ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ಗಣನೀಯವಾಗಿ ತಗ್ಗಿಸಲು ಇದು ನೆರವಾಗಲಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಮ್ಯಾನಿಕ್ವಿನ್ಸ್‌ಗಳಿಗೆ ಪುಂಡರ ಕಾಟ

ಸಂಚಾರಿ ನಿಯಮ ಉಲ್ಲಂಘನೆ ತಡೆಗಾಗಿ ನಿಯೋಜನೆ ಮಾಡಲಾಗಿರುವ ಮ್ಯಾನಿಕ್ವಿನ್ಸ್‌ ಗಳನ್ನು ಕಂಡು ಭಯಭೀತರಾಗಿದ್ದ ಕೆಲವು ಪುಂಡರ ಗುಂಪುಗಳು ಮ್ಯಾನಿಕ್ವಿನ್ಸ್‌ಗಳನ್ನೇ ಹೊತ್ತೊಯ್ದ ಪ್ರಕರಣವು ದಾಖಲಾಗಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಸಿಸಿಟಿವಿ ಇಲ್ಲದಿರುವುದನ್ನು ಅರಿತ ಪುಂಡರ ಗುಂಪೊಂದು ಪುಲಿಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯೋಜನೆ ಮಾಡಲಾಗಿದ್ದ ಮ್ಯಾನಿಕ್ವಿನ್ಸ್ ಅನ್ನು ಕಳ್ಳತನ ಮಾಡಿದ್ದು, ಖದೀಮರ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಇನ್ನು ಸೆಪ್ಟೆಂಬರ್ 1ರಿಂದ ಜಾರಿಗೆ ಬಂದಿರುವ ಭಾರೀ ಪ್ರಮಾಣದ ದಂಡದಿಂದ ಹೆದರಿರುವ ವಾಹನ ಸವಾರರು ಸಂಚಾರಿ ನಿಯಮಗಳನ್ನು ಪಾಲಿಸುತ್ತಿದ್ದಾರೆ. ಈ ಕಾರಣಕ್ಕಾಗಿಯೇ ರಸ್ತೆ ಅಪಘಾತಗಳ ಪ್ರಮಾಣವು ಗಣನೀಯವಾಗಿ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ.

MOST READ: ದುಬಾರಿ ಕಾರಿನ ಟ್ಯಾಕ್ಸ್ ಉಳಿಸಲು ಈತ ಮಾಡಿದ್ದೇನು ಗೊತ್ತಾ?

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಹೊಸ ಮೋಟಾರು ವಾಹನ ಕಾಯ್ದೆಯನ್ನು ಜಾರಿಗೊಳಿಸಿದಾಗ ಭಾರೀ ಪ್ರಮಾಣದ ಪ್ರತಿಭಟನೆಗಳು ನಡೆದಿದ್ದವು. ಆದರೆ ಇದೀಗ ರಸ್ತೆ ಅಪಘಾತಗಳ ಪ್ರಮಾಣವು ಕುಸಿದಿರುವುದು ಕೇಂದ್ರ ಸರ್ಕಾರ ಜಾರಿಗೆ ತಂದ ಕಠಿಣ ಕ್ರಮವು ಸರಿಯಾಗಿದೆ ಎಂದು ಹೇಳಲಾಗುತ್ತಿದೆ.

MOST READ: ಪ್ರತಿ ಲೀಟರ್ ನೀರಿಗೆ 35 ಕಿ.ಮಿ ಮೈಲೇಜ್ ನೀಡುವ ಕಾರ್ ಎಂಜಿನ್ ಸಿದ್ದಪಡಿಸಿದ 21 ವರ್ಷದ ಯುವಕ

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಕರ್ನಾಟಕ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಮೋಟಾರ್ ಕಾಯ್ದೆ ಜಾರಿ ನಂತರ ಅಪಘಾತಗಳ ಪ್ರಮಾಣದಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ವಿವಿಧ ರಾಜ್ಯಗಳಲ್ಲಿ ಶೇ.10ರಿಂದ ಶೇ.45ರಷ್ಟು ಅಪಘಾತ ಪ್ರಕರಣಗಳು ಕಡಿಮೆಯಾಗಿವೆ.

MOST READ: ಈ ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಇದೀಗ ಬೆಂಗಳೂರು ಪೊಲೀಸರು ಸಂಚಾರಿ ನಿಯಮಗಳನ್ನು ವಾಹನ ಸವಾರರು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಮಾಡಲು ಮಹತ್ವದ ಯೋಜನೆಗೆ ಚಾಲನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಹೊಸ ಯೋಜನೆಯು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಲಿದೆ ಎನ್ನುವುದನ್ನು ಕಾಯ್ದನೋಡಬೇಕಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಭರ್ಜರಿ ದಂಡದ ನಡೆವೆಯೂ ಹೊಸ ಆದೇಶ ನೀಡಿದ ಹೈಕೋರ್ಟ್

ಇನ್ನು ದ್ವಿಚಕ್ರ ವಾಹನ ಸವಾರರು ಮತ್ತು ಹಿಂಬದಿ ಸವಾರರಿಗೆ ಹೆಲ್ಮೆಟ್ ಅನ್ನು ಕೇರಳ ಹೈಕೋರ್ಟ್ ಕಡ್ಡಾಯಗೊಳಿಸುವುದರ ಜೊತೆಗೆ ಕೆಲವು ಹೊಸ ನಿಬಂಧನೆಗಳನ್ನು ವಿಧಿಸಿದೆ. ಈ ನಿಬಂಧನೆಗಳು ಮುಂದಿನ ಡಿಸೆಂಬರ್ 1ರಿಂದ ಜಾರಿಗೆ ಬರಲಿವೆ ಎಂದು ಕೇರಳ ಹೈಕೋರ್ಟ್ ಅದೇಶ ನೀಡಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಹೆಲ್ಮೆಟ್ ಧರಿಸದೇ ಇರುವವರನ್ನು ಮತ್ತು ಬೈಕ್ ಸವಾರರನ್ನು ತಪಾಸಣೆ ಮಾಡಲು ನಿಲ್ಲಿಸಲು ಸೂಚಿಸಿದಾಗ ಅದನ್ನು ನಿಲ್ಲಸದೇ ಬೈಕ್ ಸವಾರರು ಮುಂದೆ ಚಲಿಸಿದ ಸಂದರ್ಭದಲ್ಲಿ ಟ್ರಾಫಿಕ್ ಪೋಲಿಸರು ಅವರನ್ನು ಬೆನ್ನಟ್ಟುವಂತಿಲ್ಲವೆಂದು ಕೇರಳ ಹೈಕೋರ್ಟ್ ಹೇಳಿದೆ. ಪೊಲೀಸರು ಅಂತಹ ವಾಹನ ಬರುವ ಹಾದಿಯಲ್ಲಿ ಅಡ್ಡ ಬಂದು ತಡೆಯುವುದು ಅಥವಾ ದೈಹಿಕ ಬಲ ತೋರುವುದು ಮಾಡುವಂತಿಲ್ಲ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಈ ರೀತಿ ವಾಹನಗಳನ್ನು ಅಡ್ಡಗಟ್ಟಿದಾಗ ಅಪಘಾತ ಅಥವಾ ಪ್ರಾಣಪಾಯವಾಗುವ ಕಾರಣ ಟ್ರಾಫಿಕ್ ಪೊಲೀಸರು ಅವರನ್ನು ಪತ್ತೆಹಚ್ಚಲು ಹೆಚ್ಚು ಅಧುನಿಕ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ನ್ಯಾಯಾಲಯ ಹೇಳಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಮೋಟಾರ್ ವಾಹನ ಡ್ರೈವಿಂಗ್ ನಿಯಂತ್ರಣ ಕಾಯ್ದೆ 2017ರ ನಿಯಮದಂತೆ ಟ್ರಾಫಿಕ್ ಪೊಲೀಸರು ವಾಹನವನ್ನು ಯಾವ ಕಾರಣಕ್ಕೆ ತಡೆಯಬಹುದು ಎಂಬುದರ ಬಗ್ಗೆ ಅಧಿಕೃತ ಪಟ್ಟಿ ತಯಾರಿಸಲು ನ್ಯಾಯಾಲಯವು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಟ್ರಾಫಿಕ್ ಪೊಲೀಸರು ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರನ್ನು ಪತ್ತೆ ಹಚ್ಚಲು ಡಿಜಿಟಲ್ ಕ್ಯಾಮೆರಾ, ಟ್ರಾಫಿಕ್ ಸಿಸಿ ಕ್ಯಾಮೆರಾ, ಮೊಬೈಲ್ ಕ್ಯಾಮೆರಾ, ಇತರ ಅಧುನಿಕ ತಂತ್ರಜ್ಞಾನಗಳನ್ನು ಬಳಿಸಿ ಅವರನ್ನು ಪತ್ತೆ ಹಚ್ಚಬಹುದಾಗಿದೆ. ವಾಹನದ ದಾಖಲೆ, ಫಿಟೆನೆಸ್ ಸರ್ಟಿಫಿಕೇಟ್ ಮತ್ತು ಇನ್ನಿತರ ದಾಖಲೆಗಳನ್ನು ಪರಿಶೀಲಿಸಲು ಮತ್ತು ದ್ವಿಚಕ್ರ ವಾಹನದ ಅಗತ್ಯ ಮಾಹಿತಿ ಪಡೆಯಲು ಇವುಗಳನ್ನು ಬಳಸಬಹುದು.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ವಾಹನಗಳ ಪರಿಶೀಲನೆಗಾಗಿ ವಾಹನದ ಮುಂದೆ ನಿಂತು ಅಡ್ಡ ಹಾಕುವುದು ಅಥವಾ ಬೆನ್ನುಟ್ಟವ ಮೂಲಕ ಯಾವುದೇ ದೈಹಿಕವಾಗಿ ಆಡಚಣೆಯನ್ನು ಮಾಡಬಾರದು. ಇದು ಸವಾರರಿಗೆ ಅಲ್ಲದೇ ಕರ್ತವ್ಯದಲ್ಲಿರುವ ಪೊಲೀಸ್ ಅಧಿಕಾರಗಳ ಜೀವಕ್ಕೂ ಅಪಾಯವನ್ನುಂಟು ಮಾಡಬಹುದು.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಕೇರಳದ ಮಲಪ್ಪುರಂನ 18 ವರ್ಷದ ಅರ್ಜಿದಾರರಿಗೆ ಜಾಮೀನು ನೀಡುವ ಪ್ರಕರಣದಲ್ಲಿ ಕೇರಳದ ಹೈಕೋರ್ಟ್ ಈ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಆರೋಪಿ ಮತ್ತು ಆತನ ಸ್ನೇಹಿತ ಹೆಲ್ಮೆಟ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಅವರನ್ನು ತಡೆಯಲು ಅಡ್ಡ ಬಂದಾಗ ಟ್ರಾಫಿಕ್ ಪೊಲೀಸ್ ಎಡಗಾಲಿಗೆ ಬೈಕ್ ಅನ್ನು ಹತ್ತಿಸಿ ಪರಾರಿಯಾಗಲು ಯತ್ನಿಸುತ್ತಾರೆ. ಈ ಸಂದರ್ಭದಲ್ಲಿ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರರು ರಸ್ತೆಯಲ್ಲಿ ಬಿದ್ದಿದರು.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಕೋರ್ಟ್‌ನಲ್ಲಿ ಈ ಪ್ರಕರಣದ ಸವಾರನು ಪೊಲೀಸರಿಂದಾಗಿ ಅಪಘಾತವಾಗಿತ್ತು ಎಂಬ ವಾದವನ್ನು ಮಂಡಿಸಿದರು. ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್ ಬೈಕಿಗೆ ಅಡ್ಡ ಬಂದು ಬೈಕಿನ ಹ್ಯಾಂಡಲ್ ಬಾರ್ ಅನ್ನು ಹಿಡಿಯದಿದ್ದರೆ ಅಪಘಾತ ಸಂಭವಿಸುತ್ತಿರಲಿಲ್ಲ ಎಂದು ನ್ಯಾಯಲಯದಲ್ಲಿ ಸವಾರನು ವಾದ ಮಂಡಿಸಿದ್ದನು.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ದೇಶದಲ್ಲಿ ಈ ರೀತಿಯ ಹಲವಾರು ಪ್ರಕರಣಗಳು ಸಂಭವಿಸಿವೆ. ಪೊಲೀಸರು ಅಡ್ಡ ಬಂದಾಗ ಅವರಿಂದ ಬಜಾವ್ ಆಗಲು ಅಥವಾ ಸವಾರನು ಹೆದರಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ. ಇದಕ್ಕೆ ಮುಂಬೈನಲ್ಲಿ ನಡೆದ ಘಟನೆಯ ಈ ವೀಡಿಯೋ ಉದಾಹರಣೆಯಾಗಿದೆ.

ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಇಂದಿನ ಅಧುನಿಕ ಯುಗದಲ್ಲಿ ಹಲವಾರು ಅತ್ಯಾಧುನಿಕ ತಂತ್ರಜ್ಞಾನಗಳಿವೆ. ಟ್ರಾಫಿಕ್ ಪೊಲೀಸರು ತಂತ್ರಜ್ಞಾನಗಳನ್ನು ಬಳಸಬಹುದಾಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದ ಸಂದರ್ಭದಲ್ಲಿ ಅದರ ನೋಂದಣೆ ಸಂಖ್ಯೆಯನ್ನು ಬಳಸಿ ಮಾಲೀಕನಿಗೆ ದಂಡದ ಚಲನ್ ಅಥವಾ ನೋಟಿಸ್ ಕಳುಹಿಸುವ ವಿಧಾನವನ್ನು ಅನುಸರಿಸಬಹುದಾಗಿದೆ.

Most Read Articles

Kannada
English summary
Bengaluru Police Deploy Mannequins as Traffic Cops to Curb Violations. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X