Just In
- 16 min ago
ಐಷಾರಾಮಿ ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಪೊಲೀಸ್ ಕಾನ್ಸ್ಟೆಬಲ್ಗಳು
- 1 hr ago
ಭಾರತದಲ್ಲಿ 3 ಸೀರಿಸ್ ಗ್ರ್ಯಾನ್ ಲಿಮೊಸಿನ್ ಬಿಡುಗಡೆ ಮಾಡಿದ ಬಿಎಂಡಬ್ಲ್ಯು
- 2 hrs ago
2020ರ ಡಿಸೆಂಬರ್ ತಿಂಗಳಿನಲ್ಲಿ ಭರ್ಜರಿಯಾಗಿ ಮಾರಾಟವಾದ ಟಾಟಾ ಹ್ಯಾರಿಯರ್
- 3 hrs ago
ಭಾರತದಲ್ಲಿ ಬಿಡುಗಡೆಯಾದ ಐದು ವರ್ಷಗಳಲ್ಲಿ ಹೊಸ ದಾಖಲೆಗೆ ಕಾರಣವಾದ ಹ್ಯುಂಡೈ ಕ್ರೆಟಾ
Don't Miss!
- News
ಗಡಿಯಲ್ಲಿ ಮತ್ತೆ ಶಿವಸೇನೆ ಪುಂಡಾಟ; ಕರ್ನಾಟಕ ಪ್ರವೇಶ ಯತ್ನ ವಿಫಲ
- Movies
ಸುದೀಪ್ 'ಫ್ಯಾಂಟಮ್' ಸಿನಿಮಾದಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್?
- Sports
ಆಸ್ಟ್ರೇಲಿಯಾ ತಂಡದ ಬದ್ಧತೆ ಹಾಗೂ ಪೈಯ್ನ್ ನಾಯಕತ್ವವನ್ನು ಪ್ರಶ್ನಿಸಿದ ಮಾಜಿ ಆಸಿಸ್ ಕ್ರಿಕೆಟಿಗ
- Lifestyle
ಈ 3 ವಸ್ತುಗಳನ್ನು ಹಾಕಿ ಮಾಡಿದ ಜ್ಯೂಸ್ ಕುಡಿದರೆ ಬೊಜ್ಜು ಕರುಗುತ್ತೆ, ಸೌಂದರ್ಯ ಹೆಚ್ಚುತ್ತೆ
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕೇವಲ ಎರಡು ಗಂಟೆಗಳಲ್ಲಿ 29 ಲಕ್ಷ ರೂಪಾಯಿ ದಂಡ ವಿಧಿಸಿದ ಬೆಂಗಳೂರು ಪೊಲೀಸರು
ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಈ ವಿಶೇಷ ಕಾರ್ಯಾಚರಣೆಗೆ ಆಪರೇಷನ್ ಸರ್ಪ್ರೈಸ್ ಚೆಕ್ ಎಂಬ ಹೆಸರಿಡಲಾಗಿತ್ತು.

ಈ ವಿಶೇಷ ಕಾರ್ಯಾಚರಣೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ಕೇವಲ ಎರಡು ಗಂಟೆಗಳಲ್ಲಿ ರೂ.29.50 ಲಕ್ಷ ದಂಡ ವಿಧಿಸಲಾಗಿದೆ. ಸಂಚಾರಿ ಪೊಲೀಸರು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆ ಮಾಡುವವರು, ರಾಂಗ್ ಸೈಡಿನಲ್ಲಿ ವಾಹನ ಚಾಲನೆ ಮಾಡುವವರು, ಸೀಟ್ ಬೆಲ್ಟ್ ಧರಿಸದೇ ಕಾರು ಚಾಲನೆ ಮಾಡುವವರು, ವಾಹನ ಚಾಲನೆ ವೇಳೆ ಸೆಲ್ ಫೋನ್‌ನಲ್ಲಿ ಮಾತನಾಡುವವರ ವಿರುದ್ಧ ಕಾರ್ಯಾಚರಣೆಯನ್ನು ಆರಂಭಿಸಿದ್ದರು.

ಈ ವಿಶೇಷ ಕಾರ್ಯಾಚರಣೆಯನ್ನು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 1.30ರವರೆಗೆ ಒಟ್ಟು 2 ಗಂಟೆಗಳ ಕಾಲ ನಡೆಸಲಾಯಿತು. ಬೆಂಗಳೂರು ನಗರದಾದ್ಯಂತ ಒಟ್ಟು 178 ಸ್ಥಳಗಳಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದರು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಈ ಕಾರ್ಯಾಚರಣೆಯಲ್ಲಿ ಸಂಚಾರಿ ಪೊಲೀಸರು ಒಟ್ಟು 6,247 ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದೇ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನ ಸವಾರರಿಗೆ ರೂ.29.50 ಲಕ್ಷ ದಂಡ ವಿಧಿಸಲಾಗಿದೆ.

ಬೆಂಗಳೂರು ಸಂಚಾರಿ ಪೊಲೀಸರು ಆಪರೇಷನ್ ಸರ್ಪ್ರೈಸ್ ಚೆಕ್ ನಡೆಸಿದ ರೀತಿಯೇ ವಿಶಿಷ್ಟವಾಗಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಈ ಹಿಂದೆ ವಾಹನ ತಪಾಸಣೆ ನಡೆಸದ ಸ್ಥಳಗಳಲ್ಲಿ ಸಂಚಾರಿ ಪೊಲೀಸರನ್ನು ನಿಯೋಜಿಸಿದ್ದರು.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಹೊಸ ಸ್ಥಳಗಳಲ್ಲಿ ನಿಂತು ಸಂಚಾರ ಉಲ್ಲಂಘನೆಗಳ ಮೇಲೆ ನಿಗಾ ಇಡಲಾಗಿತ್ತು. ನಗರ ಪ್ರದೇಶಗಳಲ್ಲಿ ಸಂಚಾರಿ ಪೊಲೀಸರು ಎಲ್ಲಿ ತಪಾಸಣೆ ನಡೆಸುತ್ತಾರೆ ಎಂಬ ಅರಿವು ವಾಹನ ಸವಾರರಿಗೆ ಇರುತ್ತದೆ.

ಈ ಕಾರಣಕ್ಕೆ ನಿಯಮಗಳನ್ನು ಉಲ್ಲಂಘಿಸುವ ವಾಹನ ಸವಾರರು ಆ ಸ್ಥಳಗಳಲ್ಲಿ ಸಂಚರಿಸುವುದಿಲ್ಲ. ಒಂದು ವೇಳೆ ಆ ಸ್ಥಳಗಳಲ್ಲಿ ಸಂಚರಿಸಿದರೂ ಆ ಕ್ಷಣಕ್ಕೆ ಮಾತ್ರ ಹೆಲ್ಮೆಟ್ ಧರಿಸುತ್ತಾರೆ. ಮೊಬೈಲ್ ಫೋನ್‌ಗಳನ್ನು ಬಳಸುವುದು ಇಲ್ಲ.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಆ ಸ್ಥಳವನ್ನು ದಾಟಿದ ನಂತರ ಮತ್ತೆ ಹಳೆ ಚಾಳಿಯನ್ನು ಮುಂದುವರೆಸುತ್ತಾರೆ. ಈ ಕಾರಣಕ್ಕೆ ಬೆಂಗಳೂರು ನಗರ ಸಂಚಾರಿ ಪೊಲೀಸರು ಈ ಹಿಂದೆ ವಾಹನ ತಪಾಸಣೆ ನಡೆಸದ ಹೊಸ ಸ್ಥಳಗಳನ್ನು ಹುಡುಕಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಅದಕ್ಕಾಗಿಯೇ ಈ ಕಾರ್ಯಾಚರಣೆಗೆ ಆಪರೇಷನ್ ಸರ್ಪ್ರೈಸ್ ಚೆಕ್ ಎಂಬ ಹೆಸರಿಡಲಾಗಿದೆ. ಮುಂದೆಯೂ ಸಹ ಇದೇ ರೀತಿ ಕಾರ್ಯಾಚರಣೆಗಳನ್ನು ನಡೆಸಲಾಗುವುದು ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಇದರಿಂದ ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತದೆ ಎಂಬುದು ಸಂಚಾರಿ ಪೊಲೀಸರ ಅಭಿಪ್ರಾಯ. ಭಾರತದಲ್ಲಿ ವಿಶ್ವದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತವೆ. ಭಾರತದಲ್ಲಿ ಪ್ರತಿ ವರ್ಷ ಸುಮಾರು 1.50 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ.

ವಾಹನ ಸವಾರರು ಸಂಚಾರ ನಿಯಮಗಳನ್ನು ಕಡೆಗಣಿಸುತ್ತಿರುವುದೇ ಅಪಘಾತಗಳಿಗೆ ಪ್ರಮುಖ ಕಾರಣ. ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಸಂಚಾರಿ ಪೊಲೀಸರು ಹೀಗೆ ವಿವಿಧ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.