ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಸೈಕಲ್ ಚಾಲನೆಯಿಂದ ಆರೋಗ್ಯಕ್ಕೆ ಹಲವು ರೀತಿಯ ಪ್ರಯೋಜನಗಳಾಗುತ್ತವೆ. ಯಾರೋ ಜನ ಸಾಮಾನ್ಯರು ಸೈಕಲ್ ಚಾಲನೆ ಮಾಡಿದರೆ ಅದೇನೂ ಅಷ್ಟು ಸುದ್ದಿಯಾಗುವುದಿಲ್ಲ. ಬದಲಿಗೆ ಹಿರಿಯ ಅಧಿಕಾರಿಗಳೋ, ಸೆಲೆಬ್ರಿಟಿಗಳೋ ಸೈಕಲ್ ಚಾಲನೆ ಮಾಡಿದರೆ ಅದೊಂದು ದೊಡ್ಡ ಸುದ್ದಿಯಾಗುತ್ತದೆ.

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಛತ್ತೀಸ್ ಗಢದ ಬಸ್ತಾರ್ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರೂ ಸೈಕಲ್ ಸವಾರಿ ಮಾಡುತ್ತಾ ನಗರದ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಇಬ್ಬರೂ ಅಧಿಕಾರಿಗಳು ಸೈಕ್ಲಿಂಗ್ ಮಾಡುತ್ತಿರುವ ವೀಡಿಯೊವನ್ನು ಟ್ವಿಟರ್‌ನಲ್ಲಿ ಶೇರ್ ಮಾಡಲಾಗಿದೆ.

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಕರೋನಾ ವೈರಸ್ ಸಾಂಕ್ರಾಮಿಕವು ಜನರಿಗೆ ಆರೋಗ್ಯದ ಬಗ್ಗೆ ಹೆಚ್ಚು ಅರಿವು ಮೂಡಿಸಿದೆ. ಈಗ ಜನರು ಫಿಟ್‌ನೆಸ್‌ಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅನೇಕ ಜನರು ಲಾಕ್ ಡೌನ್ ಅವಧಿಯಲ್ಲಿ ತಮ್ಮ ಮನೆಯಲ್ಲಿಯೇ ಜಿಮ್ ಮಾಡುತ್ತಿದ್ದಾರೆ.

MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಫಿಟ್ ನೆಸ್ ಕಾಪಾಡಿಕೊಳ್ಳಲು ಸೈಕ್ಲಿಂಗ್ ತುಂಬಾ ಪ್ರಯೋಜನಕಾರಿ. ನಿಯಮಿತವಾಗಿ ಸೈಕ್ಲಿಂಗ್‌ ಮಾಡಿದರೆ ದೇಹದ ಸ್ನಾಯುಗಳು ಬಲಿಷ್ಟವಾಗಿ ಚುರುಕಿನಿಂದ ಕೂಡಿರುತ್ತವೆ ಎಂದು ತಜ್ಞರು ಹೇಳುತ್ತಾರೆ.

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಸೈಕ್ಲಿಂಗ್ ದೇಹದಲ್ಲಿರುವ ಕೊಬ್ಬು ಹಾಗೂ ಬೊಜ್ಜನ್ನು ಸಹ ಕಡಿಮೆ ಮಾಡುತ್ತದೆ. ಕಳೆದ ಕೆಲವು ತಿಂಗಳುಗಳಿಂದ ದೇಶದಲ್ಲಿ ಸೈಕಲ್‌ಗಳಿಗೆ ಭಾರಿ ಬೇಡಿಕೆ ಕಂಡುಬಂದಿದೆ. ಕರೋನಾ ವೈರಸ್ ಹರಡಬಹುದೆಂಬ ಭಯದಿಂದ ಜನರು ಸಾರ್ವಜನಿಕ ಸಾರಿಗೆಗಳನ್ನು ಬಳಸುತ್ತಿಲ್ಲ.

MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಇನ್ನೂ ಕೆಲವರು ಬೈಕುಗಳ ಬದಲು ಸೈಕಲ್ ಗಳಲ್ಲಿಯೇ ಕಚೇರಿಗಳಿಗೆ ತೆರಳುತ್ತಿದ್ದಾರೆ. ದೇಶಿಯ ಮಾರುಕಟ್ಟೆಯಲ್ಲಿ ಸಾಮಾನ್ಯ ಸೈಕಲ್‌ಗಳಿಂದ ಹೈಸ್ಪೀಡ್ ಸೈಕಲ್‌ಗಳವರೆಗೆ ಹಲವು ರೀತಿಯ ಬೈಸಿಕಲ್‌ಗಳಿವೆ.

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಎಲೆಕ್ಟ್ರಿಕ್ ಸೈಕಲ್‌ಗಳನ್ನು ಸಹ ಬಿಡುಗಡೆಗೊಳಿಸಿವೆ. ಎಲೆಕ್ಟ್ರಿಕ್ ಸೈಕಲ್‌ಗಳ ಬೆಲೆ ಸಾಮಾನ್ಯ ಸೈಕಲ್‌ಗಳ ಬೆಲೆಗಿಂತ ದುಬಾರಿಯಾಗಿದ್ದರೂ ಅವುಗಳನ್ನು ಚಾಲನೆ ಮಾಡುವುದು ಹೊಸ ಅನುಭವವನ್ನು ನೀಡುತ್ತದೆ.

MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಅನೇಕ ದೇಶಗಳಲ್ಲಿ ಸೈಕಲ್‌ಗಳಿಗಾಗಿಯೇ ಪ್ರತ್ಯೇಕ ಸೈಕಲ್‌ ಟ್ರ್ಯಾಕ್‌ಗಳನ್ನು ನಿರ್ಮಿಸಲಾಗಿದೆ. ಇದರಿಂದ ಸೈಕಲ್ ಸವಾರಿ ಮಾಡುವವರಿಗೆ ಬೇರೆ ವಾಹನಗಳಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಸೈಕಲ್ ಚಾಲನೆ ಆರೋಗ್ಯವನ್ನು ಮಾತ್ರ ಕಾಪಾಡದೇ ಪರಿಸರವನ್ನು ಸಹ ಕಾಪಾಡುತ್ತದೆ.

ಕರೋನಾ ವೈರಸ್ ಎಫೆಕ್ಟ್: ಸೈಕಲ್‌ಗಳು ಈಗ ಎಲ್ಲರಿಗೂ ಅಚ್ಚುಮೆಚ್ಚು

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ತೆರಿಗೆ ವಿನಾಯಿತಿ ನೀಡಿದೆ. ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್‌ಟಿ ದರವನ್ನು ಸಹ ಕಡಿಮೆ ಮಾಡಲಾಗಿದೆ.

Most Read Articles

Kannada
English summary
Bastar SP DC seen riding bicycle in the city. Read in Kannada.
Story first published: Monday, July 27, 2020, 16:53 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X