Bengaluru 2nd Airport: ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈ 3 ಸ್ಥಳಗಳು ಶಾರ್ಟ್‌ಲಿಸ್ಟ್?

ಬೆಂಗಳೂರು (Bengaluru) ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದ್ದು, ಸಿಲಿಕಾನ್ ವ್ಯಾಲಿ ಎಂದು ಹೆಸರುವಾಸಿಯಾಗಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಮೂಲಕ ದೇಶದ ನಾನಾ ಭಾಗಗಳು ಹಾಗೂ ವಿದೇಶಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಡಳಿತರೂಢ ಕಾಂಗ್ರೆಸ್ ಸರ್ಕಾರ ಎರಡನೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿದೆ. ಈ ನೂತನ ವಿಮಾನ ನಿಲ್ದಾಣ ಎಲ್ಲಿ ಬರುತ್ತದೆ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.

ಸದ್ಯ, ರಾಜ್ಯ ಸರ್ಕಾರ ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸಂಭಾವ್ಯ ಸ್ಥಳಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳನ್ನು ಆಧರಿಸಿ, ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬಿಡದಿ ಮತ್ತು ಹಾರೋಹಳ್ಳಿ ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸೇರಿರುವ ಸೋಲೂರಿನಲ್ಲಿ ಹೊಸ ವಿಮಾನ ನಿಲ್ದಾಣಕ್ಕಾಗಿ ಸ್ಥಳವನ್ನು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

Bengaluru 2nd Airport 3 Places Shortlist Details

ಈ ಕುರಿತಂತೆ ಮೊದಲಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೊಂದಿಗೆ ಸಮಾಲೋಚನೆ ನಡೆಸಲಾಗುತ್ತದೆ. ಆ ಬಳಿಕ ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸೂಕ್ತ ಸ್ಥಳವೊಂದನ್ನು ಅಂತಿಮಗೊಳಿಸಿ, ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ಪ್ರಸ್ತಾವನೆಯನ್ನು ಸಲ್ಲಿಸಲು ತೀರ್ಮಾನಿಸಲಾಗಿವೆ ಎಂದು ಮೂಲಗಳು ಹೇಳಿವೆ.

ಆದರೆ, ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳದ ಆಯ್ಕೆಯು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಡುವೆ ಹಗ್ಗಜಗ್ಗಾಟಕ್ಕೂ ಕಾರಣವಾಗಿದೆ. ಡಿಕೆಶಿ ರಾಮನಗರ ಜಿಲ್ಲೆಯಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವ ಹೆಬ್ಬಯಕೆಯನ್ನು ಹೊಂದಿದ್ದಾರೆ. ಪರಮೇಶ್ವರ್ ತುಮಕೂರಿನಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸುವಂತೆ ಒತ್ತಡ ಹೇರುತ್ತಿದ್ದಾರೆ.

Bengaluru 2nd Airport 3 Places Shortlist Details

ಉದ್ದೇಶಿತ ಹೊಸ ವಿಮಾನ ನಿಲ್ದಾಣಕ್ಕಾಗಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ದಾಬಸ್‌ಪೇಟೆ ಮತ್ತು ತುಮಕೂರು ಸೇರಿದಂತೆ 7 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರು ಈ ಹಿಂದೆ ತಿಳಿಸಿದ್ದರು. ಎಲ್ಲ ಸಾಧಕ ಬಾಧಕಗಳನ್ನು ಚರ್ಚಿಸಿ, ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದು ಸಹ ಹೇಳಿದ್ದರು.

ಇತ್ತೀಚೆಗೆ ಬೆಂಗಳೂರಿನಲ್ಲಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮತಿ ಕೋರಿ ಕರ್ನಾಟಕ ಸರ್ಕಾರ ಪ್ರಸ್ತಾವನೆ ಸಲ್ಲಿಸಿದರೆ, ಅದನ್ನು ಅನುಮೋದಿಸಲಾಗುತ್ತದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ.ರಾಮಮೋಹನ್ ನಾಯ್ಡು ರಾಜ್ಯಸಭೆಗೆ ತಿಳಿಸಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದರು

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿಯಮವೇನು: ಪ್ರಸ್ತುತ ಕಾರ್ಯನಿರ್ವಹಿಸುವ ವಿಮಾನ ನಿಲ್ದಾಣವಿರುವ 150 ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ನೂತನ ವಿಮಾನ ನಿಲ್ದಾಣ (Airport) ನಿರ್ಮಾಣಕ್ಕೆ ಅವಕಾಶವಿಲ್ಲ. ಆಗೊಮ್ಮೆ, ಮತ್ತೊಂದು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಒಳಗೊಂಡಂತೆ ಹಲವು ಸಮಸ್ಯೆಗಳು ಬರುತ್ತವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, February 5, 2025, 14:20 [IST]
English summary
Bengaluru 2nd airport 3 places shortlist details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+