Bengaluru 2nd Airport: ಗುಡ್‌ನ್ಯೂಸ್‌.. ತುಮಕೂರು ಬಳಿ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ?

ಬೆಂಗಳೂರು (Bengaluru) ನಗರ ಐಟಿ ಹಬ್ ಆಗಿದ್ದು, ಜಾಗತಿಕವಾಗಿಯೂ ವೇಗವಾಗಿ ಬೆಳೆಯುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಮೂಲಕ ದೇಶದ ಪ್ರಮುಖ ನಗರಗಳು ಹಾಗೂ ವಿದೇಶಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ದುಪಟ್ಟಾಗುತ್ತಿದೆ. ಪ್ರತಿನಿತ್ಯ ಸಾವಿರಾರು ಮಂದಿ ಓಡಾಟ ನಡೆಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಾಯುಯಾನ ಮೂಲಸೌಕರ್ಯ ಅಭಿವೃದ್ಧಿಗೆ ಕರ್ನಾಟಕ ಸರ್ಕಾರ ಮುಂದಾಗಿದ್ದು, ಎರಡನೇ ವಿಮಾನ ನಿರ್ಮಿಸಲು ಯೋಜಿಸಿದೆ. ಆದರೆ, ನೂತನ ವಿಮಾನ ನಿಲ್ದಾಣವನ್ನು ಎಲ್ಲಿ ನಿರ್ಮಿಸಬೇಕು ಎಂಬುದರ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಸದ್ಯ, ತುಮಕೂರು (Tumakuru) ಸಮೀಪ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ರಾಜ್ಯ ಸರ್ಕಾರಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ (G.Parameshwara) ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಬಗ್ಗೆ ತುಮಕೂರು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣಾ ನೇರವೇರಿಸಿದ ಬಳಿಕ ಅವರು ಮಾತನಾಡಿದರು‌.

Bengaluru 2nd Airport Construction Likely Near Tumakuru Details

'ರಾಜ್ಯ ಬೃಹತ್ ಕೈಗಾರಿಕೆ & ಮೂಲಸೌಕರ್ಯ ಅಭಿವೃದ್ಧಿ ಸಚಿವರಿಗೆ ಬೆಂಗಳೂರಿನ 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರು ಆಸುಪಾಸಿನಲ್ಲಿ ನಿರ್ಮಿಸುವಂತೆ ಮನವಿ ಮಾಡಿದ್ದೇನೆ.‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧ ಎರಡು ಕಡೆಗಳಲ್ಲಿ ಭೂಮಿಯನ್ನು ಗುರುತಿಸಲಾಗಿದೆ' ಎಂದು ಗೃಹ ಸಚಿವರು ಹೇಳಿದ್ದಾರೆ.

'ವಸಂತ ನರಸಾಪುರಕ್ಕೆ ಹೊಂದಿಕೊಂಡಂತೆ ರಾಷ್ಟ್ರೀಯ ಹೆದ್ದಾರಿ 48 (NH-48) ಸಮೀಪ 3,000 ಎಕರೆ ಭೂಮಿ ಮತ್ತು ಶಿರಾ ತಾಲ್ಲೂಕಿನ ಸಿ.ಬಿ.ನರಸಿಂಹ ಸ್ವಾಮಿ ದೇವಸ್ಥಾನ ಸಮೀಪ 4 ರಿಂದ 5 ಸಾವಿರ ಎಕರೆ ಭೂಮಿಯನ್ನು ನಕ್ಷೆ ಮೂಲಕ ಗುರುತಿಸಲಾಗಿದೆ. ತುಮಕೂರಿನಲ್ಲೇ ವಿಮಾನ ನಿಲ್ದಾಣ ನಿರ್ಮಿಸುವಂತೆ ಜಿಲ್ಲೆಯ ಶಾಸಕರು ಹಾಗೂ ಸಂಸದರು ಪಕ್ಷಾತೀತವಾಗಿ ಒತ್ತಾಯಿಸುತ್ತೇವೆ' ಎಂದು ಅವರು ತಿಳಿಸಿದ್ದಾರೆ.

Bengaluru 2nd Airport Construction Likely Near Tumakuru Details

'ರಾಜ್ಯದಲ್ಲಿ ತುಮಕೂರು ಪ್ರತಿಷ್ಟಿತವಾದ ಜಿಲ್ಲೆಯಾಗಿದೆ. ಬೆಳಗಾವಿ, ಕಲಬುರಗಿ ನಂತರ ವಿಸ್ತೀರ್ಣದಲ್ಲಿ ತುಮಕೂರು ಅತಿದೊಡ್ಡ ಜಿಲ್ಲೆಯಾಗಿಯೂ ಹೊರಹೊಮ್ಮಿದೆ.‌ 11 ವಿಧಾನಸಭಾ ಕ್ಷೇತ್ರಗಳು ಹಾಗೂ 3 ಲೋಕಸಭಾ ಕ್ಷೇತ್ರಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಬೆಂಗಳೂರಿಗೆ 70 ಕಿ.ಮೀ ದೂರದಲ್ಲಿರುವ ತುಮಕೂರು, ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರಿನಲ್ಲಿ ತುಮಕೂರು ಒಂದು ಭಾಗವಾಗಲಿದೆ. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡುತ್ತಿದೆ' ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.

ತುಮಕೂರಿನಲ್ಲಿ 2ನೇ ವಿಮಾನ ನಿಲ್ದಾಣ ಏಕೆ: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ನಿಯಮಗಳ ಪ್ರಕಾರ, ಪ್ರಸ್ತುತವಿರುವ ವಿಮಾನ ನಿಲ್ದಾಣವಿರುವ 150 ಕಿ.ಮೀ ಅಂತರದಲ್ಲಿ ಯಾವುದೇ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅನುಮತಿಸಲಾಗುವುದಿಲ್ಲ. ಆಗೊಮ್ಮೆ, ಮತ್ತೊಂದು ವಿಮಾನ ನಿಲ್ದಾಣವನ್ನು ಸ್ಥಾಪಿಸಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತವೆ.

ಇಂತಹ ತೊಂದರೆಯನ್ನು ನಿಭಾಯಿಸುವುದರೊಂದಿಗೆ ಬೆಂಗಳೂರು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಿಸಲು ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು ಜಿಲ್ಲೆ ಸೂಕ್ತವಾದ ಸ್ಥಳವಾಗಿದೆ. ಜೊತೆಗೆ ರಾಷ್ಟ್ರೀಯ ಹೆದ್ದಾರಿಯೂ ಹಾದು ಹೋಗುವುದರಿಂದ ಬೆಂಗಳೂರಿನಿಂದ ಪ್ರಯಾಣಿಕರು ಯಾವುದೇ ಟ್ರಾಫಿಕ್ ಕಿರಿಕಿರಿ ಇಲ್ಲದೆ ಸುಲಭವಾಗಿ ತಲುಪಲು ಸಾಧ್ಯವಾಗುತ್ತದೆ ಎಂಬುದು ಹಲವರ ಅಭಿಪ್ರಾಯವಾಗಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, January 27, 2025, 13:35 [IST]
English summary
Bengaluru 2nd airport construction likely near tumakuru details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+