Bengaluru 2nd Airport: ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಸ್ಥಳ ಘೋಷಣೆ?

ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ ಇದೇ ಸೋಮವಾರದಿಂದ ಪ್ರಾರಂಭಗೊಂಡಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್‌ (Thawar Chand Gehlot) ಅವರು ಭಾಷಣ ಮಾಡಿದ್ದರು. ಮಾರ್ಚ್ 21 ರವರೆಗೆ ಅಧಿವೇಶನ ನಡೆಯಲಿದೆ. ಮಾರ್ಚ್ 7 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಹೊಸ ದಾಖಲೆಯೊಂದನ್ನು ಮಾಡಲಿದ್ದಾರೆ.

ಸದ್ಯ, ಬೆಂಗಳೂರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ವೇಗವಾಗಿ ಬೆಳೆಯುತ್ತಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport) ಮೂಲಕ ಸಂಚರಿಸುತ್ತಿರುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯ ಸರ್ಕಾರ ಬೆಂಗಳೂರಿನ ನಿವಾಸಿಗಳಿಗಾಗಿ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲು ಯೋಜಿಸಿದೆ. ಈ ಬಗ್ಗೆ ಸಾಕಷ್ಟು ಚರ್ಚೆಗಳು ಕೂಡ ನಡೆಯುತ್ತಿವೆ.

Bengaluru 2nd Airport Official Place Announced In Budget Expected

ಈ ಹಿಂದೆ, ಕರ್ನಾಟಕ ಸರ್ಕಾರ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ 3 ಸಂಭಾವ್ಯ ಸ್ಥಳಗಳನ್ನು ಗುರುತಿಸಿದೆ ಎಂದು ಮೂಲಗಳನ್ನು ಆಧರಿಸಿ, ವಿವಿಧ ಮಾಧ್ಯಮಗಳು ವರದಿ ಮಾಡಿದ್ದವು. ರಾಮನಗರದ ಬಿಡದಿ ಹಾಗೂ ಹಾರೋಹಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೋಲೂರಿನಲ್ಲಿ ನೂತನ ವಿಮಾನ ನಿಲ್ದಾಣಕ್ಕಾಗಿ ಸ್ಥಳವನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಲಾಗಿತ್ತು.

ಆದರೆ, ರಾಮನಗರ ಜಿಲ್ಲೆಯಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು ಹೆಚ್ಚು ಆಸಕ್ತಿ ಹೊಂದಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಅವರು, ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ವರದಿಯಾಗಿದೆ.

Bengaluru 2nd Airport Official Place Announced In Budget Expected

ನಾಡಿದ್ದು ಮಂಡಿಸಲಿರುವ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹೊಸದಾಗಿ ನಿರ್ಮಿಸುವ ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಗುರುತಿಸಿರುವ ಜಾಗದ ಹೆಸರನ್ನು ಘೋಷಣೆ ಮಾಡಬಹುದು ಎನ್ನಲಾಗಿದೆ. ಆದರೆ, ಈ ಕುರಿತಂತೆ ಸರ್ಕಾರದ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿಗಳು ಬಹಿರಂಗಗೊಂಡಿಲ್ಲ.

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ನಿಯಮವೇನು: ಯಾವುದೇ ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದರೆ, ಅದು ಪ್ರಸ್ತುತವಿರುವ ವಿಮಾನ ನಿಲ್ದಾಣದ 150 ಕಿ.ಮೀ ವ್ಯಾಪ್ತಿಯಲ್ಲಿ ಇರಬಾರದು. ಆಗೊಮ್ಮೆ, ಆ ಅಂತರದಲ್ಲಿ ವಿಮಾನ ನಿಲ್ದಾಣವನ್ನು ಸ್ಥಾಪಿಸಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಸೇರಿದಂತೆ ಹಲವು ಸಮಸ್ಯೆಗಳು ಬರುತ್ತವೆ.

ಸೋಮವಾರ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋತ್‌ ಅವರು, ವಾಯುಯಾನ ಕ್ಷೇತ್ರದಲ್ಲಿ ಸರ್ಕಾರ ಮಾಡಿರುವ ಹೂಡಿಕೆ ಬಗ್ಗೆಯೂ ಮಾತನಾಡಿದ್ದರು. 'ರೂ.347 ಕೋಟಿ ವೆಚ್ಚದ ನಿರ್ಮಿಸುತ್ತಿರುವ ವಿಜಯಪುರ ವಿಮಾನ ನಿಲ್ದಾಣದ ಕಾಮಗಾರಿ ಮುಕ್ತಾಯಗೊಂಡಿದೆ. ರೂ.319 ವೆಚ್ಚದಲ್ಲಿ ಮೈಸೂರು ವಿಮಾನ ನಿಲ್ದಾಣದ ರನ್‌ವೇಯನ್ನು ವಿಸ್ತರಿಸಲಾಗುತ್ತಿದೆ. ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ರೂ.219 ಅನುದಾನ ನೀಡಲಾಗಿದೆ' ಎಂದು ಹೇಳಿದ್ದರು.

ಒಟ್ಟಾರೆಯಾಗಿ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯವಾಗಿ ರಾಜ್ಯ ಸರ್ಕಾರ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಉದ್ದೇಶಿಸಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದರಿಂದ ದೇಶ - ವಿದೇಶಗಳ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜೊತೆಗೆ ವಿಮಾನ ನಿರ್ಮಿಸುವ ಸುತ್ತಮುತ್ತಲಿನ ಸ್ಥಳಗಳು ಸಹ ಅಭಿವೃದ್ಧಿಯಾಗಲಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 5, 2025, 10:17 [IST]
English summary
Bengaluru 2nd airport official place announced in budget expected
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+