Bengaluru 2nd Airport: ತುಮಕೂರು - ಚಿತ್ರದುರ್ಗ ಮಧ್ಯೆ 2ನೇ ವಿಮಾನ ನಿಲ್ದಾಣ ನಿರ್ಮಾಣ? ಸಿಹಿಸುದ್ದಿ
ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ (Bengaluru Kempegowda International Airport) ಮೂಲಕ ದೇಶ, ವಿದೇಶಗಳಿಗೆ ತೆರಳುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಗರವು ಐಟಿ ಹಬ್ ಆಗಿರುವುದರಿಂದ ಪ್ರತಿನಿತ್ಯ ಸಾವಿರಾರು ಮಂದಿ ಪ್ರಯಾಣಿಸುತ್ತಾರೆ. ಈ ನಿಟ್ಟಿನಲ್ಲಿ ವಾಯುಯಾನ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ.
ಸಂಭಾವ್ಯ ಬೆಂಗಳೂರು ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ತುಮಕೂರು - ಚಿತ್ರದುರ್ಗ ನಡುವೆ ಸ್ಥಳ ಹುಡುಕಾಟ ಕೆಲಸಗಳು ಪ್ರಾರಂಭವಾಗಿವೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಧ್ಯಮ, ಬೃಹತ್ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ (MB Patil) ಅವರು, ಹೊಸ ವಿಮಾನ ನಿಲ್ದಾಣಕ್ಕೆ ಸೂಕ್ತ ಸ್ಥಳ ಗುರುತಿಸುವ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ ಎಂದು ಹೇಳಿದ್ದಾರೆ.

'ಒಂದೇ ನಗರದಲ್ಲಿ ಅನೇಕ ವಿಮಾನ ನಿಲ್ದಾಣಗಳನ್ನು ನಿರ್ಮಿಸಿರುವ ಮುಂಬೈ ಹಾಗೂ ಗೋವಾದಂತಹ ನಗರಗಳನ್ನು ನಿದರ್ಶನವಾಗಿ ತೆಗೆದುಕೊಳ್ಳಲಾಗಿದೆ' ಎಂದು ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ. ಆದರೆ, ಪ್ರಸ್ತುತ ವಿಮಾನ ನಿಲ್ದಾಣವಿರುವ 150 ಕಿಲೋಮೀಟರ್ ಅಂತರದಲ್ಲಿ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಮಾರ್ಗಸೂಚಿಗಳ ಪ್ರಕಾರ, ಯಾವುದೇ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಸ್ಥಾಪನೆಯನ್ನು ಅನುಮತಿಸಲಾಗುವುದಿಲ್ಲ.
ಆಗೊಮ್ಮೆ, ಆ ಅಂತರದೊಳಗೆ ಎರಡನೇ ವಿಮಾನ ನಿಲ್ದಾಣವನ್ನು ನಿರ್ಮಿಸಿದರೆ, ಎರಡು ವಿಮಾನ ನಿಲ್ದಾಣಗಳ ಮಧ್ಯೆ ಏರ್ ಟ್ರಾಫಿಕ್ ಸೇರಿದಂತೆ ವಿವಿಧ ತೊಂದರೆಗಳು ಬರುತ್ತಿವೆ. ಇಂತಹ ಸಮಸ್ಯೆಯನ್ನು ನಿಭಾಯಿಸಿ, ಬೆಂಗಳೂರು ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಏರ್ಪೋರ್ಟ್ ನಿರ್ಮಾಣಕ್ಕೆ ತುಮಕೂರು - ಚಿತ್ರದುರ್ಗ ನಡುವಿನ ಮಾರ್ಗವೇ ಸೂಕ್ತ ಸ್ಥಳವಾಗಿದೆ ಎಂದು ತಿಳಿದುಬಂದಿದೆ.

ಎಚ್‌ಎಎಲ್‌ನಲ್ಲಿ ಹಳೆಯ ವಿಮಾನ ನಿಲ್ದಾಣವನ್ನು ಪುನರಾರಂಭಿಸುವುದಕ್ಕೆ ಆರಂಭದಲ್ಲಿ ಪರಿಗಣಿಸಲಾಗಿತ್ತು. ಆದರೆ, ನಾನಾ ಕಾರಣಗಳಿಗೆ ಅದನ್ನು ಕೈ ಬಿಡಲಾಯಿತು. ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಾದರೆ, ರಾಜ್ಯ ಸರ್ಕಾರ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ನಿಲ್ದಾಣಕ್ಕೆ ಸೂಕ್ತ ಸ್ಥಳವನ್ನು ಹುಡುಕಾಟ ನಡೆಸಬೇಕು. ಒಂದೊಮ್ಮೆ ಕೃಷಿ ಜಮೀನು ಇದ್ದರೆ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಬೇಕು.
ಇತ್ತೀಚೆಗೆ, ಸ್ಟಾರ್ ಏರ್ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಿಂದ, ಹೈದರಾಬಾದ್, ತಿರುಪತಿ ಮತ್ತು ಗೋವಾಕ್ಕೆ ವಿಮಾನ ಸೇವೆಯನ್ನು ಆರಂಭಿಸಿದೆ. ಹೊಸ ಎಂಬ್ರಾರ್ ಇ175 ವಿಮಾನದೊಂದಿಗೆ ಈ ಸೇವೆಯನ್ನು ಒದಗಿಸುತ್ತಿದೆ. ಈ ವಿಮಾನ ಎರಡು ದರ್ಜೆಯ ಆಸನ ವ್ಯವಸ್ಥೆಯನ್ನು ಹೊಂದಿದೆ. ಅವುಗಳೆಂದರೆ, 12 - ಲಗ್ಸುರಿ ಬ್ಯುಸಿನೆಸ್ ಕ್ಲಾಸ್, 64 - ಎಕಾನಾಮಿಕ್ ಕ್ಲಾಸ್. ಇವು ಹೆಚ್ಚು ವಿಶಾಲವಾಗಿದ್ದು, ವಿಮಾನದಲ್ಲಿ ಊಟದ ವ್ಯವಸ್ಥೆಯೂ ಇದೆ.
ಶಿವಮೊಗ್ಗದಿಂದ ವಿವಿಧ ಸ್ಥಳಗಳಿಗೆ ವಿಮಾನಯಾನ ಸೇವೆ ಆರಂಭವಾಗುವುದರಿಂದ ಉತ್ತರ ಕನ್ನಡ, ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಜನರಿಗೆ ಭಾರೀ ಅನುಕೂಲವಾಗುತ್ತದೆ. ಸೋಗಾನೆಯಲ್ಲಿರುವ ಕುವೆಂಪು ವಿಮಾನ ನಿಲ್ದಾಣ ಶಿವಮೊಗ್ಗ ನಗರದಿಂದ 8.8 ಕಿ.ಮೀ ಹಾಗೂ ಭದ್ರಾವತಿಯಿಂದ 8.2 ಕಿ.ಮೀ ದೂರದಲ್ಲಿದೆ. ಬೋಯಿಂಗ್ 737 ಮತ್ತು ಏರ್‌ಬಸ್ A320 ನಂತಹ ದೊಡ್ಡ ವಿಮಾನಗಳನ್ನು ಇಲ್ಲಿ ಲ್ಯಾಂಡ್ ಮಾಡಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications