Expressway: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಯಾವಾಗ.. ಪ್ರಯಾಣದ ಅವಧಿ ಇಷ್ಟೇನಾ?
ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru - Chennai Expressway), ಕಾಮಗಾರಿ ವೇಗವಾಗಿ ನಡೆಯುತ್ತಿದೆ. ರಾಜ್ಯದಲ್ಲಿ ಹೆದ್ದಾರಿ ನಿರ್ಮಾಣದ ಕೆಲಸಗಳು ಬಹುತೇಕ ಮುಕ್ತಾಯಗೊಂಡಿದೆ. ಈ ರಸ್ತೆ ನಿರ್ಮಾಣದಿಂದ ಬೆಂಗಳೂರು ಹಾಗೂ ಚೆನ್ನೈ ಮಧ್ಯೆ ಓಡಾಟ ನಡೆಸುವ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬನ್ನಿ.. ಈ ಎಕ್ಸ್‌ಪ್ರೆಸ್‌ವೇ ಯಾವಾಗ ಲೋಕಾರ್ಪಣೆಗೊಳ್ಳಲಿದೆ.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ಮಾಹಿತಿಯನ್ನು ತಿಳಿಯೋಣ.
ಕರ್ನಾಟಕದಲ್ಲಿ ಪೂರ್ಣ: ಈ ಹೆದ್ದಾರಿ ಬರೋಬ್ಬರಿ 262 ಕಿಲೋಮೀಟರ್ ಉದ್ದವಿದೆ. ಕರ್ನಾಟಕದಲ್ಲಿ 71 ಕಿಲೋಮೀಟರ್ ಹಾದು ಹೋಗಲಿದೆ. ಬೆಂಗಳೂರು ಗ್ರಾಮಾಂತರದ ಹೊಸಕೋಟೆಯಿಂದ ಕೋಲಾರ ಜಿಲ್ಲೆಯ ಬೇತಮಂಗಲವನ್ನು ಸಂಪರ್ಕಿಸಲಿದ್ದು, ಹೆಚ್ಚು - ಕಮ್ಮಿ ಕಾಮಗಾರಿ ಮುಗಿದಿದೆ. ಆದರೆ, ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅನುಮತಿ ನೀಡಿಲ್ಲ.

ಈ ಹಿಂದೆ, ಕರ್ನಾಟಕದಲ್ಲಿ ಹಾದುಹೋಗುವ ಎಕ್ಸ್‌ಪ್ರೆಸ್‌ವೇಯನ್ನು ವಾಹನ ಸವಾರರು ಬಳಕೆ ಮಾಡಲು ಆರಂಭಿಸಿದ್ದಾರೆ. ಖಾಲಿ ಹೆದ್ದಾರಿಯಲ್ಲಿ ವೇಗವನ್ನು ವಾಹನಗಳನ್ನು ಚಲಾಯಿಸುತ್ತಿದ್ದಾರೆ. ಇದರಿಂದ ಅಪಾಯವಾಗಬಹುದು. ಟೋಲ್ ಶುಲ್ಕ ನಿಗದಿ ಮತ್ತು ಎಲ್ಲ ರೀತಿಯ ವಾಹನ ಸಂಚಾರಕ್ಕೆ ಅನುಮತಿ ನೀಡದ ಬಳಿಕವಷ್ಟೇ ಈ ರಸ್ತೆಯನ್ನು ಉಪಯೋಗಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು.
ಆಂಧ್ರ & ತಮಿಳುನಾಡಿನಲ್ಲಿ ಕಾಮಗಾರಿ ಬಾಕಿ: ಕರ್ನಾಟಕದಲ್ಲಿ 'ಎಕ್ಸ್‌ಪ್ರೆಸ್‌ವೇ' ನಿರ್ಮಾಣದ ಕಾಮಗಾರಿ ಪೂರ್ಣಗೊಂಡಿದ್ದರೂ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ 2025ರ ಆಗಸ್ಟ್ ತಿಂಗಳೊಳಗೆ ಮುಕ್ತಾಯಗೊಳ್ಳುವ ನೀರಿಕ್ಷೆಯಿದೆ. ನವೆಂಬರ್‌ನಲ್ಲಿ ತಮಿಳುನಾಡಿನಲ್ಲಿ (105.7 ಕಿಲೋಮೀಟರ್) ಶೇಕಡ 65% ಹೆದ್ದಾರಿ ನಿರ್ಮಾಣದ ಕೆಲಸಗಳು ಮುಕ್ತಾಯಗೊಂಡಿದೆ ಎಂದು ವರದಿಯಾಗಿತ್ತು.

ಎಲ್ಲಿ ಹಾದು ಹೋಗುತ್ತದೆ & ಪ್ರಯಾಣದ ಅವಧಿ ಎಷ್ಟು: ಈ ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಹಾಗೂ ಕೋಲಾರ, ಆಂಧ್ರ ಪ್ರದೇಶದ ಚಿತ್ತೂರು, ತಮಿಳುನಾಡಿನ ರಾಣಿಪೇಟೆ ಮತ್ತು ಶ್ರೀಪೆರಂಬದೂರುಗಳಿಗೆ ಸಂಪರ್ಕ ಕೊಂಡಿಯಾಗಿದೆ. ಈಗಿರುವ 5 ರಿಂದ 6 ಗಂಟೆ ಪ್ರಯಾಣದ ಅವಧಿ, 2 ರಿಂದ 3 ಗಂಟೆಗಳಿಗೆ ಇಳಿಕೆಯಾಗುವ ಸಂಭವವಿದೆ.
ಎಕ್ಸ್‌ಪ್ರೆಸ್‌ವೇ ವಿಶೇಷತೆ ಏನು: ಸರಿ ಸುಮಾರು ರೂ.17,000 ಕೋಟಿ ಅನುದಾನದಲ್ಲಿ ಈ ಹೆದ್ದಾರಿಯನ್ನು ನಿರ್ಮಾಣ ಮಾಡಲಾಗುತ್ತಿದೆ. ನೂತನ ಎಕ್ಸ್‌ಪ್ರೆಸ್‌ವೇಯನ್ನು 4 ಲೈನ್‍ನಲ್ಲಿ ನಿರ್ಮಾಣಗೊಳುತ್ತಿದ್ದು, ವಾಹನ ದಟ್ಟಣೆಗೆ ಅನುಗುಣವಾಗಿ 8 ಲೈನ್‍ಗಳಿಗೆ ವಿಸ್ತರಣೆ ಮಾಡಬಹುದು. ಜೊತೆಗೆ ಹೊಸ ರಸ್ತೆಯೂ 17 ಫ್ಲೈಓವರ್‌ಗಳು ಮತ್ತು 41 ವೆಹಿಕಲ್ ಅಂಡರ್‌ಪಾಸ್‌ಗಳನ್ನು ಒಳಗೊಂಡಿದೆ.
ಇನ್ನು, ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಗರಿಷ್ಠ ವೇಗವನ್ನು ಗಂಟೆಗೆ 120 ಕಿಲೋಮೀಟರ್‌ವರೆಗೆ ಅನುಮತಿಸಬಹುದು ಎನ್ನಲಾಗಿದೆ. ನೂತನ ಹೆದ್ದಾರಿ ನಿರ್ಮಾಣದಿಂದ ಕರ್ನಾಟಕ, ಆಂಧ್ರ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪ್ರವಾಸೋದ್ಯಮ ಕ್ಷೇತ್ರಗಳಲ್ಲಿ ದೊಡ್ಡ ಮಟ್ಟದ ಪ್ರಗತಿಯಾಗಲಿದ್ದು, ರಿಯಲ್ ಎಸ್ಟೇಟ್ ಹಾಗೂ ವ್ಯಾಪಾರ ಹಾಗೂ ವಾಣಿಜ್ಯ ಚಟುವಟಿಕೆಗಳು ಕೂಡ ವೃದ್ಧಿಯಾಗಲಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications