Expressway: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ ಕುರಿತಂತೆ ಪ್ರಮುಖಾಂಶಗಳು.. 3 ಗಂಟೆ ಪ್ರಯಾಣ?

ದೇಶದ ಆರ್ಥಿಕ ಅಭಿವೃದ್ಧಿಗೆ ರಸ್ತೆಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಹೊಸ ಹೆದ್ದಾರಿಗಳ ನಿರ್ಮಾಣದಿಂದ ಸಾರಿಗೆ ಸಂಪರ್ಕ ವೃದ್ಧಿಗೊಂಡು ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳು ಅಭಿವೃದ್ದಿಗೊಳ್ಳಲಿವೆ. ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru - Chennai Expressway) ಕಾಮಗಾರಿಯು ವೇಗವಾಗಿ ನಡೆಯುತ್ತಿದ್ದು, ಈ ವರ್ಷಾಂತ್ಯದೊಳಗೆ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ. ನೂತನ ಹೆದ್ದಾರಿಯಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಪ್ರಯಾಣದ ಅವಧಿಯು ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗುತ್ತದೆ. ಬನ್ನಿ.. ಈ ಎಕ್ಸ್‌ಪ್ರೆಸ್‌ವೇ ವಿಶೇಷತೆಗಳ ಬಗ್ಗೆ ತಿಳಿಯೋಣ.

ಹೆದ್ದಾರಿಯ ಉದ್ದ: ಬೆಂಗಳೂರು - ಚೆನ್ನೈ ಕೈಗಾರಿಕಾ ಕಾರಿಡಾರ್‌ ಭಾಗವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‍ಹೆಚ್‍ಎಐ) ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ನಡೆಸುತ್ತಿದೆ. 262 ಕಿಮೀ ಉದ್ದದ ರಸ್ತೆ ಇದಾಗಿದ್ದು, 2022ರ ಮೇ 26ರಂದು ಪ್ರಧಾನಿ ನರೇಂದ್ರ ಮೋದಿ ಅವರು, ಈ ಹೆದ್ದಾರಿ ನಿರ್ಮಾಣಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿದ್ದರು. ಸದ್ಯ ಮೂರನೇ ಬಾರಿಗೂ ಪ್ರಧಾನ ಮಂತ್ರಿಯಾಗಿ ಮೋದಿ ಅವರು ಪ್ರಮಾಣ ವಚನವನ್ನು ಸ್ವೀಕರಿಸುತ್ತಿದ್ದು, ಬಹುತೇಕ ಅವರೇ ಹೊಸ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಬಹುದು.

Bengaluru - Chennai Expressway Top Highlights 3 Hours Journey

ಪ್ರಯಾಣದ ಅವಧಿ ಎಷ್ಟು: ಸಾಮಾನ್ಯ ಬೆಂಗಳೂರಿನಿಂದ - ಚೆನ್ನೈಗೆ 5-6 ಗಂಟೆ ಪ್ರಯಾಣಿಸಬೇಕಾಗಿದೆ. ಎಕ್ಸ್‌ಪ್ರೆಸ್‌ವೇ ಕಾಮಗಾರಿ ಸಂಪೂರ್ಣವಾಗಿ ಮುಗಿದು, ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟ ನಂತರ ಪ್ರಯಾಣದ ಅವಧಿಯು 3 ಗಂಟೆಗೆ ಕಡಿಮೆಯಾಗುವ ಸಂಭವವಿದೆ. ಹೊಸ ಹೆದ್ದಾರಿಯಲ್ಲಿ ವಾಹನಗಳ ವೇಗಮಿತಿಯನ್ನು ಗಂಟೆಗೆ 120 ಕಿ.ಮೀ ವರೆಗೆ ಅನುಮತಿಸಬಹುದು ಎಂದು ಹೇಳಲಾಗಿದೆ.

ಎಲ್ಲಿ ಹಾದುಹೋಗುತ್ತದೆ: ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru - Chennai Expressway) ಕರ್ನಾಟಕದ ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ, ಆಂಧ್ರದ ಚಿತ್ತೂರು, ತಮಿಳುನಾಡಿನ ರಾಣಿಪೇಟೆ ಹಾಗೂ ಶ್ರೀಪೆರಂಬದೂರಿನ ಮೂಲಕ ಹಾದುಹೊಗಲಿದೆ. ಈ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ರಿಯಲ್ ಎಸ್ಟೇಟ್ ಹಾಗೂ ಕೈಗಾರಿಕೋದ್ಯಮಗಳ ಪ್ರಗತಿಯಾಗುತ್ತದೆ.

4 ಪಥದ ರಸ್ತೆ: ಎರಡು ರಾಜ್ಯಗಳ ರಾಜಧಾನಿ ಸಂಪರ್ಕಿಸುವ ಈ ಹೆದ್ದಾರಿಯನ್ನು 4 ಪಥಗಳಲ್ಲಿ ನಿರ್ಮಾಣ ಮಾಡಲಾಗುತ್ತಿದ್ದು, ವಾಹನ ದಟ್ಟಣೆ ಹೆಚ್ಚಾದಂತೆ 8 ಪಥಗಳಿಗೆ ವಿಸ್ತರಿಸಬಹದು. ನೂತನ ಎಕ್ಸ್‌ಪ್ರೆಸ್‌ವೇ ಕಾಮಗಾರಿಗೆ ಎನ್‍ಹೆಚ್‍ಎಐ ಸರಿ ಸುಮಾರು ರೂ.17,000 ಕೋಟಿಯನ್ನು ಖರ್ಚು ಮಾಡುತ್ತಿದೆ ಎಂದು ತಿಳಿದುಬಂದಿದೆ.

ಮೊದಲ ಹಸಿರು ಹೆದ್ದಾರಿ: ಬೆಂಗಳೂರು - ಚೆನ್ನೈ ಮಧ್ಯೆ ನಿರ್ಮಾಣವಾಗುತ್ತಿರುವ ಈ ಎಕ್ಸ್‌ಪ್ರೆಸ್‌ವೇ ದೇಶದ ಮೊದಲ 'ಹಸಿರು ಹೆದ್ದಾರಿ' ಎಂಬ ಹಿರಿಮೆಗೂ ಪಾತ್ರವಾಗಲಿದೆ. ರಸ್ತೆ ನಿರ್ಮಾಣಕ್ಕೆ 33 ಕಿಲೋಮೀಟರ್ ಅರಣ್ಯ ಜಾಗವನ್ನು ಮಾತ್ರ ಬಳಸಲಾಗುತ್ತಿದ್ದು, 17 ಫ್ಲೈಓವರ್‌ಗಳು, 41 ವೆಹಿಕಲ್ ಅಂಡರ್‌ಪಾಸ್‌ಗಳನ್ನು ಹೊಂದಿರಲಿದೆ. ನೂತನ ರಸ್ತೆಯ ಆರಂಭಿಕ ಬಿಂದು ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಇದ್ದು, ಚೆನ್ನೈ ಹೊರವಲಯದ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳುತ್ತದೆ.

ಪ್ರಸ್ತುತ ಯಾವ ಹೆದ್ದಾರಿಗಳಿವೆ: ಬೆಂಗಳೂರಿಂದ ಚೆನ್ನೈ ತೆರಳಲು 2 ಪ್ರಮುಖ ಹೆದ್ದಾರಿಗಳಿವೆ. ಮೊದಲನೆಯದು 335 ಕಿಲೋಮೀಟರ್ ಉದ್ದದ ಹಳೆ ಮದ್ರಾಸ್ ರೋಡ್, ಮತ್ತೊಂದು 372 ಕಿ.ಮೀ ಉದ್ದದ ರಸ್ತೆಯಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ, ಹೊಸೂರು, ಕೃಷ್ಣಗಿರಿ, ವೆಲ್ಲೂರು ಹಾಗೂ ಶ್ರೀಪೆರಂಬದೂರು ಮಾರ್ಗವಾಗಿ ಚೆನ್ನೈಗೆ ಹೋಗಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 7, 2024, 22:22 [IST]
English summary
Bengaluru chennai expressway top highlights 3 hours journey
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+