ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಕರೋನಾ ವೈರಸ್ ಎರಡನೇ ಅಲೆ ಭಾರತದಲ್ಲಿ ಅಪಾರ ಹಾನಿಯನ್ನುಂಟು ಮಾಡುತ್ತಿದೆ. ರೂಪಾಂತರಿ ವೈರಸ್‌ನಿಂದಾಗಿ ಪ್ರತಿದಿನ 4 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತಿವೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಲಾಕ್‌ಡೌನ್ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವುದರಿಂದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಮಾಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಕರೋನಾ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರಗಳು ಆಯಾ ರಾಜ್ಯಗಳಲ್ಲಿ ಕರೋನಾ ಕರ್ಫ್ಯೂ ಜಾರಿಗೊಳಿಸುತ್ತಿವೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಈಗ ಕರ್ನಾಟಕ ಸರ್ಕಾರವು ಸಹ ರಾಜ್ಯದಾದ್ಯಂತ ಲಾಕ್‌ಡೌನ್ ಜಾರಿಗೊಳಿಸಿವೆ. ಈ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

MOST READ:ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಇಂದಿನಿಂದ ಆರಂಭವಾಗುವ ಸಂಪೂರ್ಣ ಲಾಕ್‌ಡೌನ್‌ನಲ್ಲಿ ಕರ್ನಾಟಕ ಸರ್ಕಾರವು ರಾಜ್ಯದಾದ್ಯಂತ ಕರ್ಫ್ಯೂ ವಿಧಿಸಿದ್ದು, ಜನರ ಓಡಾಟವನ್ನು ನಿಷೇಧಿಸಲಾಗಿದೆ.ಸೂಕ್ತ ಕಾರಣವಿದ್ದರೆ ಮಾತ್ರ ಜನರು ಮನೆಯಿಂದ ಹೊರ ಬರಬಹುದು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಹಲವಾರು ಜನರು ಲಾಕ್‌ಡೌನ್ ಜಾರಿಗೊಳಿಸುವ ಮೊದಲು ಸಾವಿರಾರು ಜನರು ತಮ್ಮ ಊರುಗಳನ್ನು ಸೇರಿಕೊಂಡರು. ಇಲ್ಲಿಯೇ ನೆಲೆಸಿರುವವರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು.

MOST READ:ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಕೆಲವರು ಲಾಕ್‌ಡೌನ್ ನಿಯಮಗಳನ್ನು ಗಂಭೀರವಾಗಿ ಪರಿಗಣಿಸದೇ ಬೇಕಾಬಿಟ್ಟಿ ಸಂಚರಿಸುತ್ತಿದ್ದಾರೆ. ಇಂತಹ ಜನರನ್ನು ವಶಕ್ಕೆ ಪಡೆದಿರುವ ಬೆಂಗಳೂರು ಪೊಲೀಸರು ಅವರಿಂದ ಮತ್ತೆ ನಿಯಮಗಳನ್ನು ಉಲ್ಲಂಘಿಸುವುದಿಲ್ಲವೆಂದು ಪ್ರತಿಜ್ಞೆ ಮಾಡಿಸಿದ್ದಾರೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ಬೆಂಗಳೂರು ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 2,277 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಜನರು 2020ರ ಘಟನೆಗಳು ಮತ್ತೆ ಸಂಭವಿಸಬಹುದೆಂಬ ಆತಂಕದಲ್ಲಿದ್ದಾರೆ.

MOST READ:ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

2020ರಲ್ಲಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಿದ್ದಾಗ ಸಾವಿರಾರು ಜನರು ತಿಂಗಳುಗಟ್ಟಲೆ ಬೆಂಗಳೂರು ತೊರೆದಿದ್ದರು. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪೊಲೀಸರು ನಿನ್ನೆಯಿಂದಲೇ ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ವರದಿಗಳಾಗಿವೆ.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ನಿಯಮ ಉಲ್ಲಂಘಿಸಿದವರನ್ನು ಪೊಲೀಸರು ರಸ್ತೆ ಮಧ್ಯದಲ್ಲಿ ಕೂರಿಸಿದ್ದರು. ನಂತರ ಎಲ್ಲರಿಗೂ ಮತ್ತೆ ನಿಯಮಗಳನ್ನು ಉಲ್ಲಂಘಿಸುವುದಿಲ್ಲವೆಂದು ಪ್ರಮಾಣ ಮಾಡಿಸಿದ್ದಾರೆ.

MOST READ:ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಪೊಲೀಸರು ಧ್ವನಿವರ್ಧಕ ಬಳಸಿ ಎಲ್ಲರಿಂದಲೂ ಪ್ರಮಾಣ ಮಾಡಿಸಿದ್ದಾರೆ. ಪೊಲೀಸರು ಕರ್ಫ್ಯೂ ವೇಳೆ ವಿನಾಕಾರಣ ಮನೆಯಿಂದ ಹೊರ ಬಂದವರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

ವೀಡಿಯೊ ಕೃಪೆ: ಶಾಂತೊನಿಲ್ ನಾಗ್

ಪೊಲೀಸರು ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿದರೇ ಇಲ್ಲವೇ ಎಂಬ ಮಾಹಿತಿ ಲಭ್ಯವಾಗಿಲ್ಲ. ವಶಕ್ಕೆ ಪಡೆಯಲಾಗಿರುವ ಎಲ್ಲಾ ವಾಹನಗಳನ್ನು ಲಾಕ್‌ಡೌನ್ ತೆರವುಗೊಳಿಸಿದ ನಂತರ ಮರಳಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

MOST READ:ಜೀವದ ಹಂಗು ತೊರೆದು ಮಗುವಿನ ಪ್ರಾಣ ಉಳಿಸಿದ ರಿಯಲ್ ಹೀರೋಗೆ ಬೈಕ್ ಉಡುಗೊರೆ ನೀಡಿದ ಜಾವಾ ಕಂಪನಿ

ವೀಡಿಯೊ ಕೃಪೆ: ಶ್ರೀಟಾಕ್

2020ರಲ್ಲಿಯೂ ಪೊಲೀಸರು ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ಹೊರ ಬಂದವರಿಂದ ಸಾವಿರಾರು ವಾಹನಗಳನ್ನು ವಶಕ್ಕೆ ಪಡೆದಿದ್ದರು. ವಾಹನಗಳ ದಾಖಲೆಗಳನ್ನು ಪರಿಶೀಲಿಸಿದ ನಂತರ ವಾಹನಗಳನ್ನು ಹಿಂದಿರುಗಿಸಲಾಗಿತ್ತು.

ಲಾಕ್‌ಡೌನ್ ನಿಯಮ ಉಲ್ಲಂಘಿಸಿದ 2,200ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು

ವೀಡಿಯೊ ಕೃಪೆ: ಟಿವಿ 9 ಕನ್ನಡ

2020ರಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್'ನಲ್ಲಿ ಜನರ ಓಡಾಟದ ಮೇಲೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿತ್ತು. ಆದರೆ ಈ ಬಾರಿ ಬೆಳಿಗ್ಗೆ 6ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದೆ.

Most Read Articles

Kannada
English summary
Bengaluru cops seizes more than 2200 vehicles for violating lockdown norms. Read in Kannada.
Story first published: Monday, May 10, 2021, 16:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X