Bengaluru: ಶೀಘ್ರ ಬೆಂಗಳೂರಿಗೆ 40 ಕಿ.ಮೀ ಸುರಂಗ ರಸ್ತೆ.. ಯಾವೆಲ್ಲ ಪ್ರದೇಶದಲ್ಲಿ ಬರುತ್ತೆ?

ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ ಎಂದು ಖ್ಯಾತಿ ಗಳಿಸಿರುವ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಎಂಬುದು ಸಾಮಾನ್ಯ ಜನರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ವಾಹನ ಸವಾರರಿಗೆ ಸಂಚಾರ ದಟ್ಟಣೆ ಸಮಸ್ಯೆಯಿಂದ ಪಾರು ಮಾಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ನಗರದ ವಿವಿಧ ಭಾಗಗಳಿಗೆ ಸುಲಭ ಸಂಪರ್ಕ ಕಲ್ಪಿಸಲು ಸುರಂಗ ರಸ್ತೆ ನಿರ್ಮಾಣಕ್ಕೆ ಮುಂದಾಗಿದೆ. ಈ ಸಂಬಂಧ ಸಾಕಷ್ಟು ತಯಾರಿಯನ್ನು ನಡೆಸುತ್ತಿದೆ. ಸದ್ಯ, ನೂತನ ಸುರಂಗ ರಸ್ತೆ ಬಗ್ಗೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ.

ಬೆಂಗಳೂರು (Bengaluru) ಟ್ರಾಫಿಕ್ ಜಾಮ್‌ಗೆ ಪರಿಹಾರವಾಗಿ ಶೀಘ್ರ ನಿರ್ಮಿಸಲು ಉದ್ದೇಶಿಸಲಾಗಿರುವ 40 ಕಿ.ಮೀ ಉದ್ದದ ಸುರಂಗ ರಸ್ತೆ (Tunnel Road) ಕುರಿತಂತೆ ಬಿಬಿಎಂಪಿ ಡಿಪಿಆರ್ ಸಿದ್ಧಪಡಿಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿವಿಧ ಮಾಧ್ಯಮಗಳು ಕೂಡ ವರದಿ ಮಾಡಿವೆ. ಹೊಸ ಸುರಂಗ ರಸ್ತೆ ನಿರ್ಮಾಣದಿಂದ ನಗರದಲ್ಲಿ ಸಂಚಾರ ದಟ್ಟಣೆ ಸಮಸ್ಯೆ ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗುವ ನೀರಿಕ್ಷೆಯಿದೆ.

Bengaluru Get 40-Km Tunnel Road Soon These Areas Covered

ಒಟ್ಟು 40 ಕಿ.ಮೀ ಉದ್ದದ ಈ ಸುರಂಗ ರಸ್ತೆಯನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ. 18 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ (North-South Corridor) ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಸಂಪರ್ಕವನ್ನು ಕಲ್ಪಿಸುತ್ತದೆ. ಪೂರ್ವ-ಪಶ್ಚಿಮ ಕಾರಿಡಾರ್ (East-West Corridor) ಕೆ.ಆರ್ ಪುರಂನಿಂದ ಮೈಸೂರು ರಸ್ತೆಯನ್ನು ಬೆಸೆಯುತ್ತದೆ.

ನೂತನ 40 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಾಣಕ್ಕೆ ದೊಡ್ಡ ಮಟ್ಟದಲ್ಲಿ ಅನುದಾನ ಅಗತ್ಯವಿದೆ. ಯೋಜನೆ ಅನುಷ್ಠಾನಗೊಳಿಸಲು ಬಿಬಿಎಂಪಿ ರೂ.19,000 ಕೋಟಿಯನ್ನು ಸಾಲದ ರೂಪದಲ್ಲಿ ಸಂಗ್ರಹಿಸಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಹಿಂದೆ, 73 ಕಿ.ಮೀ ಉದ್ದದ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೂ 'ಹುಡ್ಕೊ'ದಿಂದ ರೂ.27,000 ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿತ್ತು. ಅದೇ ಮಾದರಿಯನ್ನು ಅನುಸರಿಸಲು ಬಿಬಿಎಂಪಿ ಸಹ ಮುಂದಾಗಿದೆ.

Bengaluru Get 40-Km Tunnel Road Soon These Areas Covered

ಉತ್ತರ-ದಕ್ಷಿಣ ಕಾರಿಡಾರ್ ಭಾಗವಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಿರ್ಮಿಸಲು ಉದ್ದೇಶಿಸಿರುವ ಸುರಂಗ ರಸ್ತೆಯಿಂದ ವಾಹನ ಸವಾರರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈಗಿರುವ 1 ಗಂಟೆ ಪ್ರಯಾಣದ ಅವಧಿಯನ್ನು ಹೊಸ ಸುರಂಗ ರಸ್ತೆ 20 ರಿಂದ 25 ನಿಮಿಷಗಳಿಗೆ ಕಡಿಮೆಗೊಳಿಸಲಿದೆ. ಈ ರಸ್ತೆಯನ್ನು ವಾಹನಗಳು ಗಂಟೆಗೆ 40 - 60 ಕಿ.ಮೀ ಗರಿಷ್ಠ ವೇಗದಲ್ಲಿ ಸಂಚರಿಸಲು ಸಾಧ್ಯವಾಗುವಂತೆ ನಿರ್ಮಾಣ ಮಾಡಲಾಗುತ್ತದೆ ಎನ್ನಲಾಗಿದೆ. ಆದರೆ, ಪೂರ್ವ-ಪಶ್ಚಿಮ ಕಾರಿಡಾರ್ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ.

ಈ ಹಿಂದೆ, ಬೆಂಗಳೂರಿನಾದ್ಯಂತ 190 ಕಿಮೀ ಉದ್ದದ ಸುರಂಗ ರಸ್ತೆ ನಿರ್ಮಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು. ಬಳ್ಳಾರಿ ರಸ್ತೆ, ಎಸ್ಟೀಮ್ ಮಾಲ್ ಜಂಕ್ಷನ್ ನಿಂದ ಮೇಖ್ರಿ ಸರ್ಕಲ್, ಟ್ರಿನಿಟಿ ಸರ್ಕಲ್, ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಮೈಸೂರು ರಸ್ತೆಯಿಂದ ಶಿರಸಿ ವೃತ್ತ, ತುಮಕೂರು ರಸ್ತೆಯಿಂದ ಯಶವಂತಪುರ ಜಂಕ್ಷನ್, ಕೆಆರ್ ಪುರಂ, ಸಿಲ್ಕ್ ಬೋರ್ಡ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುರಂಗ ರಸ್ತೆ ಬರಲಿದೆ ಎಂದು ತಿಳಿದುಬಂದಿತ್ತು.

Bengaluru Get 40-Km Tunnel Road Soon These Areas Covered

ಇನ್ನು, ನೂತನ ಸುರಂಗ ರಸ್ತೆಯಿಂದ ಸಂಚಾರ ದಟ್ಟಣೆ ಸಮಸ್ಯೆ ದೂರವಾಗಿ ಹೆಚ್ಚಿನ ಅನುಕೂಲವಾಗುವುದರಲ್ಲಿ ಎರಡು ಮಾತಿಲ್ಲ. ಈ ರೀತಿಯ ರಸ್ತೆ ನಿರ್ಮಿಸುವ ಸಂದರ್ಭದಲ್ಲಿ ಭೂಸ್ವಾಧೀನ ಹಾಗೂ ಹೆಚ್ಚಿನ ಮರ ಕಡಿಯುವ ಅಗತ್ಯವಿಲ್ಲ. ಆದರೆ, ಸುರಂಗ ರಸ್ತೆ ಬದಲಿಗೆ ಅದೇ ಹಣದಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಿದರೆ, ವಾಯುಮಾಲಿನ್ಯ ಕಡಿಮೆಯಾವುದರೊಂದಿಗೆ ಹೆಚ್ಚಿನ ಜನರು ಕೂಡ ಓಡಾಟ ನಡೆಸಬಹುದು ಎಂಬುದು ಹಲವರ ಅಭಿಪ್ರಾಯವಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, December 18, 2024, 12:24 [IST]
English summary
Bengaluru get 40 km tunnel road soon these areas covered
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+