ಬೆಂಗಳೂರಿನಲ್ಲಿ ಮಾತ್ರ.. ಕುದುರೆ ಬಿಟ್ಟು ನಮ್ಮೂರಿನ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಮದುವೆ ಮನೆಗೆ ಬಂದ ಗಂಡು!

ಮದುವೆ ಸ್ವರ್ಗದಲ್ಲಿ ನಿಶ್ಚಯವಾಗಿರುತ್ತದೆ ಎಂದು ಹೇಳಲಾಗುತ್ತದೆ. ಎಲ್ಲೋ ಹುಟ್ಟಿದ ಹೆಣ್ಣು, ಎಲ್ಲೋ ಹುಟ್ಟಿದ ಗಂಡು 'ಸಪ್ತಪದಿ' ತುಳಿದು ಒಂದಾಗಿ ಬಾಳಿ ಬದುಕುವುದೇ ಜೀವನ... ವಿವಾಹ ಸಮಾರಂಭದ ಅದ್ಭುತ ಕ್ಷಣಗಳನ್ನು ಜೀವನ ಪೂರ್ತಿ ನೆನಪಿನಲ್ಲಿ ಉಳಿಯುವಂತೆ ಮಾಡಲು ನವಜೋಡಿಗಳು ಸಾಕಷ್ಟು ತಯಾರಿಯನ್ನು ಮಾಡಿಕೊಳ್ಳುತ್ತಾರೆ.

ಬೆಂಗಳೂರಿನಲ್ಲಿ ವರನೊಬ್ಬ ಕಲ್ಯಾಣ ಮಂಟಪಕ್ಕೆ ಕುದುರೆಯ ಬದಲು ಎಥರ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದು ಎಲ್ಲರ ಹುಬ್ಬೇರಿಸಿದ್ದಾನೆ. ಈ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ಗೊಂಡಿದ್ದು, ಅದನ್ನು ಸ್ವತಃ ಎಥರ್ ಎನರ್ಜಿ (Ather Energy) ಸಿಇಒ ತರುಣ್ ಮೆಹ್ತಾ (Tarun Mehta) ಕೂಡ ತಮ್ಮ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

Bengaluru Groom Arrives Wedding Hall On Ather Rizta Electric Scooter Details

ಎಥರ್ ಎನರ್ಜಿಯಲ್ಲಿ ಇಂಡಸ್ಟ್ರಿಯಲ್ ಡಿಸೈನರ್ ರಾಗಿ ಕಾರ್ಯನಿರ್ವಹಿಸುತ್ತಿರುವ ದರ್ಶನ್ ಪಟೇಲ್ ವಿವಾಹವು ಕಳೆದ ವಾರ ನಡೆದಿತ್ತು. ಅವರು ಮದುವೆ ಮನೆಗೆ ಕುದುರೆಯನ್ನು ಬಿಟ್ಟು 'ಎಥರ್ ರಿಜ್ಟಾ' ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಾಜ ಭಜಂತ್ರಿಯೊಂದಿಗೆ ಮೆರವಣಿಗೆಯಲ್ಲಿ ಬಂದಿದ್ದು, ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ನೃತ್ಯ ಮಾಡಿರುವುದನ್ನು ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಬಹುದು.

ವರ ದರ್ಶನ್ ಪಟೇಲ್ ಅವರು ಕಲ್ಯಾಣ ಮಂಟಪಕ್ಕೆ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಆಗಮಿಸಿರುವುದಕ್ಕೆ ಸಾಮಾಜಿಕ ಜಾಲತಾಣ ಬಳಕೆದಾರರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ನೆಟ್ಟಿಗರೊಬ್ಬರು, 'ನಾನು ಇದನ್ನು ಬೆಂಗಳೂರಿನಲ್ಲಿ ಮಾಡಬಲ್ಲೆ' ಎಂದಿದ್ದಾರೆ. ಮತ್ತೊಬ್ಬರು, 'ಎಲೆಕ್ಟ್ರಿಕ್ ಕುದುರೆ' ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು, 'ಒಳ್ಳೆಯದು, ಕುದುರೆಗಳು ಸಾಕಷ್ಟು ಕಷ್ಟ ಅನುಭವಿಸಿವೆ!' ಎಂದು ಕಾಮೆಂಟ್ ಮಾಡಿದ್ದಾರೆ.

Bengaluru Groom Arrives Wedding Hall On Ather Rizta Electric Scooter Details

ಮದುವೆ ಮನೆಗೆ ವರ ಆಗಮಿಸಿದ ಈ ಎಥರ್ ರಿಜ್ಟಾ (Ather Rizta) ಎಲೆಕ್ಟ್ರಿಕ್ ಸ್ಕೂಟರ್, ಕಳೆದ ತಿಂಗಳು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡಿತ್ತು. ಇದು ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ ರೂ.1.10 ಲಕ್ಷದಿಂದ ರೂ.1.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಜೊತೆಗೆ ಸಿಯಾಚಿನ್ ವೈಟ್ ಮೊನೊ, ಡೆಕ್ಕನ್ ಗ್ರೇ ಮೊನೊ, ಪ್ಯಾಂಗೊಂಗ್ ಬ್ಲೂ ಡ್ಯುಯೊ, ಕಾರ್ಡಮೊಮ್ ಗ್ರೀನ್ ಡ್ಯುಯೊ ಸೇರಿದಂತೆ 7 ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ ಎಥರ್ ರಿಜ್ಟಾ ಇ-ಸ್ಕೂಟರ್ 2.9 ಕೆಡಬ್ಲ್ಯೂಹೆಚ್ ಮತ್ತು 3.7 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಆಯ್ಕೆಯಲ್ಲಿ ಸಿಗಲಿದ್ದು, ಅದಕ್ಕೆ ತಕ್ಕಂತೆ 123 ರಿಂದ 160 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್ ಅನ್ನು ಹೊಂದಿದ್ದು, ಸ್ಮಾರ್ಟ್, ಇಕೋ ಮತ್ತು ಜಿಪ್ ಎಂಬ ರೈಡಿಂಗ್ ಮೋಡ್‌ನ್ನು ಒಳಗೊಂಡಿದೆ.

ಈ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದರ ಬ್ಯಾಟರಿ ಪ್ಯಾಕ್ ಶೇಕಡ 0 ರಿಂದ 80% ಚಾರ್ಜ್ ಆಗಲು 4 ಗಂಟೆ 30 ನಿಮಿಷ ತೆಗೆದುಕೊಳ್ಳುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) 200 ಎಂಎಂ ಡಿಸ್ಕ್ ಬ್ರೇಕ್, ಹಿಂಭಾಗ (ರೇರ್) 130 ಎಂಎಂ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Thursday, May 16, 2024, 11:03 [IST]
English summary
Bengaluru groom arrives wedding hall on ather rizta electric scooter details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+