Vande Bharat: ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ನಿಲುಗಡೆ.. ರಾಯಚೂರು, ಕಲಬುರಗಿ ಜನರಿಗೆ ಗುಡ್ ನ್ಯೂಸ್?

ಬೆಂಗಳೂರು (Bengaluru) ಹೈದರಾಬಾದ್ (Hyderabad) ನಡುವೆ ಶೀಘ್ರದಲ್ಲೇ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲು ಕಾರ್ಯಾಚರಣೆ ನಡೆಸಲಿದೆ. ಬಹುತೇಕ, ಕರ್ನಾಟಕದ ಈ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ವರದಿಯಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.

ಬೆಂಗಳೂರು - ಹೈದರಾಬಾದ್ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ತಿಂಗಳಾಂತ್ಯದಿಂದ ಓಡಾಟ ನಡೆಸಲಿದೆ. ಆದರೆ, ಈ ರೈಲು ರಾಜ್ಯ ರಾಜಧಾನಿ ಬೆಂಗಳೂರು ಬಿಟ್ಟರೆ, ಬೇರೆ ಯಾವುದೇ ರೈಲು ನಿಲ್ದಾಣದಲ್ಲಿ ನಿಲ್ಲುವುದಿಲ್ಲ ಎಂದು ಹೇಳಲಾಗಿತ್ತು. ಸದ್ಯ, ವಿವಿಧ ಮೂಲಗಳಿಂದ ದೊರೆತ್ತಿರುವ ಮಾಹಿತಿ ಪ್ರಕಾರ, ಈ ರೈಲು ಕಲಬುರಗಿಯ ಸೇಡಂ ಹಾಗೂ ರಾಯಚೂರು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎನ್ನಲಾಗಿದೆ. ಇದರೊಟ್ಟಿಗೆ ಆಂಧ್ರ ಪ್ರದೇಶದ ಗುಂತಕಲ್ ಜಂಕ್ಷನ್‌ನಲ್ಲಿಯೂ ನಿಲ್ಲಬಹುದು.

Vande Bharat: ಬೆಂಗಳೂರು-ಹೈದರಾಬಾದ್ ವಂದೇ ಭಾರತ್ ನಿಲುಗಡೆ.. ರಾಯಚೂರು, ಕಲಬುರಗಿ ಜನರಿಗೆ ಗುಡ್ ನ್ಯೂಸ್?

ಇವೆರೆಡು ನಗರಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ನಿರ್ವಹಣೆಯನ್ನು ಸಿಕಂದರಾಬಾದ್ (ಹೈದರಾಬಾದ್)ನಲ್ಲಿ ಮುಖ್ಯ ಕಚೇರಿ ಹೊಂದಿರುವ ದಕ್ಷಿಣ ಮಧ್ಯೆ ರೈಲ್ವೆ ಮಾಡಲಿದ್ದು, ಈಗಾಗಲೇ, ಇದರ ಪರೀಕ್ಷಾರ್ಥ ಸಂಚಾರವನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಧರ್ಮಾವರಂ, ಧೋನೆ, ಕರ್ನುಲ್, ಗದ್ವಲ್ ಮಹಬೂಬ್ ನಗರ ಮತ್ತು ಶಾದ್ ನಗರ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ ಎಂದು ಹೇಳಲಾಗಿದೆ.

ಬೆಂಗಳೂರು ಹೈದರಾಬಾದ್ ನಡುವೆ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳಿಗೆ ಹೋಲಿಸಿದರೆ, ವಂದೇ ಭಾರತ್ ಎಕ್ಸ್‌ಪ್ರೆಸ್ ಬೇಗನೇ ನಿಗದಿತ ಗುರಿಯನ್ನು ತಲುಪಲಿದೆ. ಇವೆರೆಡು ನಗರ ನಡುವೆ 618 ಕಿಲೋಮೀಟರ್ ದೂರವನ್ನು ಕ್ರಮಿಸಲು ಸಾಮಾನ್ಯ ರೈಲುಗಳು, 11 - 12 ಗಂಟೆ ತೆಗೆದುಕೊಂಡರೇ, ವಂದೇ ಭಾರತ್ ಕೇವಲ 7 - 8 ಗಂಟೆಗಳಲ್ಲಿ ತಲುಪಲಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ (ಬೆಂಗಳೂರು - ಹೈದರಾಬಾದ್) ರೈಲು 16 ಬೋಗಿಗಳನ್ನು ಒಳಗೊಂಡಿರಲಿದೆ. ಅದರಲ್ಲಿ 2 ಎಕ್ಸಿಕ್ಯೂಟಿವ್ ಮತ್ತು ಉಳಿದ 14 ಸಾಮಾನ್ಯ ಬೋಗಿಗಳಾಗಿರಲಿವೆ. ಪ್ರಸ್ತುತ ಈ ರೈಲು ಎಂದಿನಿಂದ ಕಾರ್ಯಾರಂಭ ಮಾಡಲಿದೆ. ಅಧಿಕೃತವಾಗಿ ಯಾವ ರೈಲು ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ಟಿಕೆಟ್ ದರವೆಷ್ಟು ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ.

ಕರ್ನಾಟಕದಲ್ಲಿ ಈಗಾಗಲೇ ಎರಡು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ. ಬೆಂಗಳೂರು - ಹುಬ್ಬಳ್ಳಿ - ಧಾರವಾಡ ನಡುವೆ ಸಂಚರಿಸುವ ರೈಲು ಮಂಗಳವಾರ ಹೊರತುಪಡಿಸಿ, ವಾರದ ಎಲ್ಲಾ ದಿನಗಳಲ್ಲಿ ಓಡಾಟ ನಡೆಸುತ್ತದೆ. ಪ್ರಯಾಣದ ಅವಧಿಯು ಸುಮಾರು 7 ಗಂಟೆಯಿದೆ. ಮತ್ತೊಂದು, ರೈಲು ಚೆನ್ನೈ - ಬೆಂಗಳೂರು - ಮೈಸೂರು ಮಾರ್ಗದಲ್ಲಿ ಸಂಚರಿಸುತ್ತಿದೆ.

ಈ ಮೂರು ನಗರಗಳ ನಡುವೆ ಓಡಾಟ ನಡೆಸಲು (504 ಕಿಮೀ) ಕೇವಲ ಆರೂವರೆ ಗಂಟೆ ತೆಗೆದುಕೊಳ್ಳುತ್ತದೆ. ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ವಿಮಾನದಂತೆ ಸೌಕರ್ಯವನ್ನು ಹೊಂದಿವೆ. ಇದರಲ್ಲಿ ಪ್ರತೇಕ ಎಂಜಿನ್ ಇಲ್ಲ. ಜೊತೆಗೆ ಸಂಪೂರ್ಣ ಎಸಿಯಿರುವ ಈ ರೈಲಿನ ಸೀಟುಗಳು ಆರಾಮದಾಯವಾಗಿದ್ದು, ಸ್ವಯಂ ಚಾಲಿತ ಬಾಗಿಲು ಹಾಗೂ ಜೈವಿಕ ಶೌಚಾಲಯದ ವ್ಯವಸ್ಥೆಯನ್ನು ಹೊಂದಿದೆ.

ಇನ್ನು, ಮಾಹಿತಿ ತಂತ್ರಜ್ಞಾನಕ್ಕೆ ಹೆಸರಾಗಿರುವ ಬೆಂಗಳೂರು - ಹೈದರಾಬಾದ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸುತ್ತಿರುವುದು ಇವೆರೆಡು ನಗರಗಳ ಪ್ರಯಾಣಿಕರಿಗೆ ಖುಷಿ ತಂದಿದೆ. ಈ ರೈಲಿನ ಸಂಚಾರದಿಂದ ವಾಣಿಜ್ಯ ಚಟುವಟಿಕೆಗಳು ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಾಗಲಿದೆ. ಕೆಲವೇ ದಿನಗಳಲ್ಲಿ ಈ ರೈಲು ತನ್ನ ಸಂಚಾರವನ್ನು ಶುರು ಮಾಡಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, August 22, 2023, 15:22 [IST]
English summary
Bengaluru hyderabad vande bharat stop sedam raichur expected
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+