Bengaluru Mysore Expressway: ಹುಡುಗಿಯೊಂದಿಗೆ ಹಿರೋಯಿಸಂ ತೋರಿಸಲು ಹೋದ ಪುಂಡ, ಬಂಧನ

ಪ್ರಸ್ತುತ ಯುವ ಜನರಿಗೆ ಸಾಮಾಜಿಕ ಜಾಲತಾಣದ ಗೀಳು ಆಂಟಿಕೊಂಡಿದ್ದು, ಬೇಗನೇ ಖ್ಯಾತಿಗಳಿಸಲು ನಾನಾ ಕಸರತ್ತು ಮಾಡುತ್ತಾರೆ. ಅದರಲ್ಲೂ ದ್ವಿಚಕ್ರ ವಾಹನಗಳಲ್ಲಿ ಸ್ಟಂಟ್ ಮಾಡುವುದು ಅಭ್ಯಾಸವಾಗಿ ಮಾರ್ಪಟ್ಟಿದೆ. ಕೆಲವರು, ಈ ರೀತಿಯ ಹುಚ್ಚು ಸಾಹಸಗಳಿಗೆ ಕೈ ಹಾಕಿ, ತಮ್ಮ ಪ್ರಾಣಕ್ಕೆ ಹಾನಿ ಮಾಡಿಕೊಳ್ಳುತ್ತಾರೆ.

ಸದ್ಯ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru Mysore Expressway)ಯ ಮೆಲ್ಸೇತುವೆಯೊಂದರಲ್ಲಿ ಯುವತಿಯೊಂದಿಗೆ ಸ್ಕೂಟರ್ ಮೇಲೆ ಸ್ಟಂಟ್ ಮಾಡಿದ್ದ ಯುವಕ ಹಾಗೂ ಆತನ ಸಹಚರರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ವೀಲಿಂಗ್‌ ಮಾಡಿದ್ದ ವಿಡಿಯೋವನ್ನು ಯುವಕರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಅದು ವೈರಲ್ ಆಗಿದ್ದು, ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.

Bengaluru Mysore Expressway

ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್‌ ಕುಮಾರ್ ಅವರು ಟ್ವೀಟ್ ಮಾಡಿದ್ದು, 'ಯುವತಿಯೊಂದಿಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಟಂಟ್ ಮಾಡುತ್ತಿದ್ದ ವ್ಯಕ್ತಿ ಹಾಗೂ ಆತನ ಸಹಚರರನ್ನು ರಾಮನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ವಿವಿಧ ಆರೋಪಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಈ ವಿಡಿಯೋಗಳು 5 - 6 ತಿಂಗಳ ಹಿಂದಿನವು. ರಾಮನಗರ ಎಸ್ಪಿ ಹಾಗೂ ಅವರ ತಂಡದ ಕಾರ್ಯ ಶ್ಲಾಘನೀಯ' ಎಂದು ಹೇಳಿದ್ದಾರೆ.

ಈಗಾಗಲೇ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅತಿವೇಗದ ಚಾಲನೆಯಿಂದ ಅಪಘಾತಗಳು ಹೆಚ್ಚುತ್ತಿದ್ದು, ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ವಿವಿಧ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಲ್ಲಿನ ಪೊಲೀಸರು, ಸೋಮವಾರದಿಂದಲೇ ಸ್ಪೀಡ್ ರಾಡಾರ್‌ಗಳನ್ನು ಅಳವಡಿಸಿದ್ದು, ಗಂಟೆಗೆ 100 ಕಿಲೋಮೀಟರ್ ವೇಗಮಿತಿ ದಾಟಿದವರ ವಿರುದ್ದ ಪ್ರಕರಣ ದಾಖಲಿಸುತ್ತಿದ್ದಾರೆ.

ಮಂಡ್ಯ ಪೋಲೀಸರು ಕೂಡ ನಿಗದಿತ ವೇಗಮಿತಿಯನ್ನು ದಾಟಿದರೆ, ರೂ.1000 ದಂಡ ವಿಧಿಸುವುದನ್ನು ಆರಂಭಿಸಿದ್ದಾರೆ. ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಮಾರ್ಚ್ 12ರಂದು ಉದ್ಘಾಟನೆಗೊಂಡಿತು. ಅಂದಿನಿಂದ ನಡೆದ ಅಪಘಾತಗಳಲ್ಲಿ 100 ಮಂದಿ ಪ್ರಾಣ ಕಳೆದುಕೊಂಡಿದ್ದು, 350 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ನಡೆಯುತ್ತಿರುವ ಅಪಘಾತಗಳ ಬಗ್ಗೆ ಸದನದಲ್ಲೂ ಚರ್ಚೆಯಾಗಿದೆ.

ವಿಧಾನ ಪರಿಷತ್ ಕಲಾಪದಲ್ಲಿ ಬುಧವಾರ ಈ ಕುರಿತು ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ ಮತ್ತು ಆಟೋ ಸೇರಿದಂತೆ ತ್ರಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸುವ ಸಂಬಂಧ ಹೆದ್ದಾರಿ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ವಾಹನ ಸವಾರರಲ್ಲಿ ಸ್ವೀಡ್ ಲಿಮಿಟ್ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಇನ್ನು, ಸಾರ್ವಜನಿಕ ರಸ್ತೆಯಲ್ಲಿ ಯಾವುದೇ ವಾಹನ ಬಳಸಿ, ಸಾಹಸ ಪ್ರದರ್ಶನ ಮಾಡುವುದು ಕಾನೂನಿನ ಪ್ರಕಾರ ಅಪರಾಧವಾಗಿದೆ. ಇದರಿಂದ ಜೀವಕ್ಕೂ ಅಪಾಯವಾಗಬಹುದು. ಆದರೂ ಸ್ಟಂಟ್ ಮಾಡಬೇಕು ಅಂದುಕೊಂಡರೆ ನಿಪುಣರ ಮಾರ್ಗದರ್ಶದಲ್ಲಿ ಎಲ್ಲ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿ, ಖಾಸಗಿ ಫಾರಂಹೌಸ್ ಅಥವಾ ರೇಸ್ ಟ್ರಾಕ್ ನಲ್ಲಿ ನಡೆಸಿರಿ. ಯಾವುದಕ್ಕೂ ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, July 7, 2023, 10:30 [IST]
English summary
Bengaluru mysore expressway police arrested 4 mens bike wheeling case
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+