Bengaluru-Mysuru Expressway: ಬೈಕ್, ಆಟೋ ಸಂಚಾರ ನಿಷೇಧ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway)ಯಲ್ಲಿ ಅಪಘಾತಗಳ ಸಂಖ್ಯೆಯನ್ನು ಕಡಿಮೆಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ದಿಟ್ಟ ಹೆಜ್ಜೆ ಇಟ್ಟಿದೆ. ಬೈಕ್, ಆಟೋ ಹಾಗೂ ಟ್ರಾಕ್ಟರ್ ಗಳ ಸಂಚಾರವನ್ನು ನಿಷೇಧಿಸಿ, ಅಧಿಸೂಚನೆ ಹೊರಡಿಸಿದೆ. ಆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

'ರಾಷ್ಟ್ರೀಯ ಹೆದ್ದಾರಿಗಳ ನಿಯಂತ್ರಣ (ಭೂಮಿ ಮತ್ತು ಸಂಚಾರ) ಕಾಯಿದೆ 2002' ಸೆಕ್ಷನ್ 35ರ ಅಡಿಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ದ್ವಿಚಕ್ರ ವಾಹನಗಳು, ಮೂರು ಚಕ್ರದ ವಾಹನಗಳು (ಆಟೋ), ಮೋಟಾರ್ ರಹಿತ ವಾಹನಗಳು, ಟ್ರಾಕ್ಟರ್ ಗಳು, ಮಲ್ಟಿ ಆಕ್ಸೆಲ್ ಹೈಡ್ರಾಲಿಕ್ ಟ್ರೈಲರ್ ವಾಹನಗಳು ಹಾಗೂ ಕ್ವಾಡ್ರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹೆದ್ದಾರಿ ಪ್ರಾಧಿಕಾರ ಜುಲೈ 12ರಂದು ಗೆಜೆಟ್ ಅಧಿಸೂಚನೆ ಹೊರಡಿಸಿದೆ.

Benagaluru-Mysuru Expressway: ಬೈಕ್, ಆಟೋ ಸಂಚಾರ ನಿಷೇಧ, ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಆದೇಶ

ಆಗಸ್ಟ್ 1ರಿಂದ ಸಂಚಾರ ನಿರ್ಬಂಧ ಆದೇಶ ಜಾರಿಯಾಗಲಿದೆ. ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಹಿನ್ನೆಲೆ, ಈ ಬಗ್ಗೆ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದ್ದವು. ಅಂತಿಮವಾಗಿ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಮೊದಲು, ಬೈಕ್ ಹಾಗೂ ಆಟೋ ಸಂಚಾರಕ್ಕೆ ನಿರ್ಬಂಧ ಹೇರುವ ಕುರಿತಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು.

ಇತ್ತೀಚೆಗೆ, ಎಕ್ಸ್‌ಪ್ರೆಸ್‌ವೇ ಕಾಮಗಾರಿಯನ್ನು ಅವೈಜಾನಿಕವಾಗಿ ಮಾಡಲಾಗಿದೆ ಎಂದು ಟೀಕೆಗೆ ಗುರಿಯಾಗಿದ್ದ ಹೆದ್ದಾರಿ ಪ್ರಾಧಿಕಾರ, ಈ ರಸ್ತೆ ಪರಿಶೀಲನೆಗೆ ವಿಶೇಷ ಸಮಿತಿ ರಚಿಸಿತ್ತು. ಆ ತಂಡ ಸದಸ್ಯರು, ಜುಲೈ 17ರಿಂದ ಜುಲೈ 20ರವರೆಗೆ ಈ ಹೆದ್ದಾರಿಯಲ್ಲಿ ಅಪಘಾತಗಳ ತಡೆಗೆ ಪರಿಶೀಲನೆ ನಡೆಸಿದ್ದರು. ಅಲ್ಲದೆ, ಮಾರ್ಚ್ ತಿಂಗಳಲ್ಲಿ ಉದ್ಘಾಟನೆಗೊಂಡ ಈ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದ ವಿವಿಧ ಅಪಘಾತಗಳಲ್ಲಿ 100ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

Benagaluru-Mysuru Expressway: ಬೈಕ್, ಆಟೋ ಸಂಚಾರ ನಿಷೇಧ, ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರ ಆದೇಶ

ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಹಾದುಹೋಗುವ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ತಡೆಗೆ ಅಲ್ಲಿನ ಪೊಲೀಸರು ಶತ ಪ್ರಯತ್ನ ನಡೆಸುತ್ತಿದ್ದು, ಜುಲೈ 4 ರಿಂದ ಸ್ಪೀಡ್ ರಾಡಾರ್‌ ನಿಯೋಜಿಸಿ, ಸಂಚಾರಿ ನಿಯಮ ಉಲ್ಲಂಘಿಸುವವರ ವಿರುದ್ಧ ಕೇಸ್ ದಾಖಲಿಸಿಕೊಂಡು ದಂಡ ವಿಧಿಸುವುದನ್ನು ಆರಂಭಿಸಿದ್ದರು. ಅದರ ಭಾಗವಾಗಿ, ಕೇವಲ 15 ದಿನದಲ್ಲಿ 2340 ಪ್ರಕರಣ ದಾಖಲಿಸಿ, ರೂ.16 ಲಕ್ಷ ದಂಡವನ್ನು ಸಂಗ್ರಹಿಸಿದ್ದರು.

ಬೆಂಗಳೂರಿನ ಸಮೀಪದ ಪಂಚಮುಖಿ ದೇವಸ್ಥಾನದಿಂದ ಮೈಸೂರಿನ ಮಣಿಪಾಲ್ ಆಸ್ಪತ್ರೆ ಜಂಕ್ಷನ್‌ವರೆಗೆ 118 ಕಿಮೀ ಉದ್ದದ ಈ ಎಕ್ಸ್‌ಪ್ರೆಸ್‌ವೇಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೈ ಸ್ಪೀಡ್ ಕಾರಿಡಾರ್ ಆಗಿ ಅಭಿವೃದ್ಧಿಪಡಿಸಿದೆ. ವಾಹನ ಸವಾರರ ಹಿತದೃಷ್ಟಿಯಿಂದ ಗರಿಷ್ಠ ವೇಗದ ಮಿತಿಗಳು 80 kmph ನಿಂದ 100 kmphಗೆ ಸೀಮಿತಗೊಳಿಸಲಾಗಿದೆ.

ಒಟ್ಟಾರೆ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ನಿರ್ಮಾಣ ಮಾಡಲಾಗಿದ್ದು, ಇದರಿಂದಾಗಿರುವ ದೊಡ್ಡ ಅನುಕೂಲವೆಂದರೆ, ಬೆಂಗಳೂರು, ಮೈಸೂರು ನಡುವೆ ಪ್ರಯಾಣದ ಅವಧಿ ಎಷ್ಟೋಪಟ್ಟು ಕಡಿಮೆಯಾಗಿರುವುದು. ಆದರೆ, ವಾಹನಗಳ ಅತಿಯಾದ ವೇಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿದ್ದವು. ಸದ್ಯ, ಇದರ ತಡೆಗೆ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆ ಇಟ್ಟಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 25, 2023, 14:05 [IST]
English summary
Bengaluru mysuru expressway ban autos bikes august 1 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+