Bengaluru-Mysuru Expressway: ಬೈಕ್, ಸ್ಕೂಟರ್ ಆಟೋಗಳು ಬ್ಯಾನ್? ಅಪಘಾತಗಳು ಕಂಟ್ರೋಲ್ ಆಗುತ್ತಾ..!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಚರ್ಚೆಯ ವಿಷಯವಾಗಿ ಮಾರ್ಪಟ್ಟಿದ್ದು, ಉದ್ಘಾಟನೆಗೂ ಮೊದಲಿನಿಂದಲೂ ಅಪಘಾತಗಳ ಸಂಖ್ಯೆ ಹೆಚ್ಚಳ, ಅವೈಜಾನಿಕ ಕಾಮಗಾರಿ ಸೇರಿದಂತೆ ಒಂದಿಲ್ಲೊಂದು ವಿಷಯಗಳಿಗೆ ಸುದ್ದಿಯಾಗುತ್ತಲೇ ಬಂದಿದೆ. ಇದೀಗ, ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ, ಆಟೋಗಳ ಸಂಚಾರ ಶೀಘ್ರದಲ್ಲೇ ನಿಷೇಧಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ ವಾಹನ, ಆಟೋಗಳು ಸೇರಿದಂತೆ ನಿಧಾನವಾಗಿ ಚಲಿಸುವ ವಾಹನಗಳನ್ನು ಶೀಘ್ರದಲ್ಲೇ ನಿಷೇಧಿಸಲಾಗುವುದು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಿಳಿಸಿದೆ. ಈ ಬಗ್ಗೆ, ಆದಷ್ಟು ಬೇಗ ಗೆಜೆಟ್ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದೆ ಎಂದು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿದೆ.

Bengaluru-Mysuru Expressway: ಬೈಕ್, ಸ್ಕೂಟರ್ ಆಟೋಗಳು ಬ್ಯಾನ್? ಅಪಘಾತಗಳು ಕಂಟ್ರೋಲ್ ಆಗುತ್ತಾ..!

ಹೈಸ್ಪೀಡ್ ಕಮ್ಯುಟ್ ಕಾರಿಡಾರ್‌ನಲ್ಲಿ ನಿಧಾನವಾಗಿ ಚಲಿಸುವ ವಾಹನಗಳು ಅಪಾಯ (threat) ಉಂಟು ಮಾಡುತ್ತವೆ. ಈ ಕಾರಣದಿಂದಾಗಿ ಅಪಘಾತಗಳಾಗುವುದನ್ನು ತಪ್ಪಿಸಲು ದ್ವಿಚಕ್ರ ವಾಹನ, ಆಟೋ ಮತ್ತು ಕೃಷಿ ಟ್ರಾಕ್ಟರ್‌ಗಳನ್ನು ಎಕ್ಸ್‌ಪ್ರೆಸ್‌ವೇಗಳಲ್ಲಿ ಅನುಮತಿಸುವುದಿಲ್ಲ. ಇಂತಹ ಹೆದ್ದಾರಿಗಳನ್ನು ಹೆಚ್ಚಿನ ವೇಗದ ವಾಹನಗಳಿಗಾಗಿ ಅಭಿವೃದ್ಧಿಪಡಿಸಲಾಗಿದೆ. ಅದರಡಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಬರುವುದರಿಂದ 'ನಿಷೇಧ'ದಂತಹ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಸೂಚನೆ ಹೊರಡಿಸಬಹುದು.

ಈ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕದಿಂದಲೂ ಆಗಾಗ ಸುದ್ದಿ ಮಾಡುತ್ತಿದ್ದು, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ ತಿಂಗಳ ಆರಂಭದಲ್ಲಿ ಬೆಂಗಳೂರಿನಿಂದ ನಿಡಘಟ್ಟ ಟೋಲ್ ಶುಲ್ಕವನ್ನು 22 ರಿಂದ 23% ಹೆಚ್ಚಿಸಿ, ಪ್ರಯಾಣಿಕರಿಗೆ ಶಾಕ್ ನೀಡಿತ್ತು. ಇದಿಷ್ಟೇ ಅಲ್ಲದೆ, ಈ ಹೆದ್ದಾರಿಯಲ್ಲಿ ಅಪಘಾತದ ಸಂಖ್ಯೆಗಳು ಹೆಚ್ಚುತ್ತಿದ್ದು, ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಇಲ್ಲಿ ವಾಹನಗಳ ಸಂಚಾರ ಪ್ರಾರಂಭವಾಗಿತ್ತು. ಅಲ್ಲಿಂದ ಫೆಬ್ರವರಿ (2023)ವರೆಗೆ 335ಕ್ಕೂ ಹೆಚ್ಚಿನ ಆಕ್ಸಿಡೆಂಟ್ ಆಗಿವೆ.

ಈ ಎಕ್ಸ್​ಪ್ರೆಸ್​ ವೇ ನಿರ್ಮಾಣದಿಂದ ಆಗಿರುವ ಅನುಕೂಲವೆಂದರೆ ಪ್ರಯಾಣದ ಅವಧಿ ತುಂಬಾ ಕಡಿಮೆಯಾಗಿರುವುದು. ಈ ಹಿಂದೆ, ಬೆಂಗಳೂರಿನಿಂದ ಮೈಸೂರು ತಲುಪಲು ಸುಮಾರು 150 ನಿಮಿಷ ಆಗುತ್ತಿತ್ತು. ಅದು ಕೇವಲ 90 ನಿಮಿಷಕ್ಕೆ ಇಳಿಕೆಯಾಗಿದೆ. 118 ಕಿಲೋಮೀಟರ್ ಉದ್ದದ ಈ ರಸ್ತೆ ಕಾಮಗಾರಿಯನ್ನು ರೂ.8172 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರತಮಾಲಾ ಉಪ ಯೋಜನೆ ಹಂತ-1ರ ಅಡಿಯಲ್ಲಿ ಮಾಡಿದೆ.

ಮೊದಲ ಹಂತದಲ್ಲಿ ಬೆಂಗಳೂರಿನಿಂದ ಚನ್ನಪಟ್ಟಣದ ನಿಡಘಟ್ಟದವರೆಗೂ (56 ಕಿ.ಮೀ ಉದ್ದ), ಎರಡನೇ ಹಂತದಲ್ಲಿ ನಿಡುಘಟ್ಟದಿಂದ ಮೈಸೂರಿನವರೆಗೆ (61 ಕಿ.ಮೀ) ರಸ್ತೆ ನಿರ್ಮಾಣದ ಕೆಲಸವನ್ನು ಮಾಡಲಾಗಿದೆ. ಈ ಹೆದ್ದಾರಿಯಲ್ಲಿ ಎರಡು ಕಡೆ ತಲಾ ಮೂರು ಪಥ ಒಳಗೊಂಡಿರುವ 6 ಪಥದ ಎಕ್ಸ್‌ಪ್ರೆಸ್‌ ವೇ ಇರಲಿದೆ. ಉಳಿದಂತೆ ಎರಡು ಬದಿಯಲ್ಲಿ ತಲಾ 2 ಪಥದ ಸರ್ವಿಸ್‌ ರಸ್ತೆ ಹೊಂದಿದ್ದು, 9 ದೊಡ್ಡ ಸೇತುವೆ, 44 ಕಿರು ಸೇತುವೆ, 4 ರೈಲ್ವೆ ಮೇಲ್ಸೇತುವೆ ಒಳಗೊಂಡಿದೆ.

ಒಟ್ಟಾರೆ, ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ನಿಧಾನವಾಗಿ ಚಲಿಸುವ ವಾಹನಗಳು ಅಪಾಯ ಉಂಟು ಮಾಡುತ್ತವೆ. ಅಪಘಾತವನ್ನು ತಡೆಯಲು ದ್ವಿಚಕ್ರ ವಾಹನ, ಆಟೋ ಮತ್ತು ಕೃಷಿ ಟ್ರಾಕ್ಟರ್‌ಗಳನ್ನು ಎಕ್ಸ್‌ಪ್ರೆಸ್‌ವೇಯಲ್ಲಿ ನಿಷೇಧಿಸಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈಗಾಗಲೇ ಹಲವು ಅಪಘಾತ ಪ್ರಕರಣಗಳು ವರದಿಯಾಗಿದ್ದು, NHAIನ ನಿಯಮ ಜಾರಿಯಾದ ಮೇಲೆ ಅಪಘಾತಗಳ ಸಂಖ್ಯೆ ಕಡಿಮೆಯಾಗಲಿದೆಯೇ, ಇಲ್ಲವೇ ಎಂಬುದರ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಎಲ್ಲಾ ಸಾಮಾಜಿಕ ಮಾಧ್ಯಮಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತದೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳೊಂದಿಗೆ ಸಂಪರ್ಕದಲ್ಲಿರಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ತಪ್ಪದೆ ಶೇರ್ ಮಾಡಿ.

Article Published On: Friday, April 28, 2023, 13:07 [IST]
English summary
Bengaluru mysuru expressway two wheelers autos may be banned details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+