Expressway: ಬೆಂಗಳೂರು-ಪುಣೆ ಮಧ್ಯೆ ನೂತನ ಎಕ್ಸ್‌ಪ್ರೆಸ್‌ವೇ.. ತ್ವರಿತ ಪ್ರಯಾಣ: ಕರ್ನಾಟಕದ ಈ ಜಿಲ್ಲೆಗಳಲ್ಲಿ ಬರುತ್ತೆ!

ಕರ್ನಾಟಕ ಹಾಗೂ ಪಕ್ಕದ ಮಹಾರಾಷ್ಟ್ರ ರಾಜ್ಯದ ಜನರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಮುಂದಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ಮತ್ತು ಪುಣೆ ನಡುವೆ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಿಸಲು ಯೋಜಿಸಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲಿ ಈ ರಸ್ತೆ ನಿರ್ಮಾಣದ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಲಾಗಿದೆ. ನೂತನ ಹೆದ್ದಾರಿ ನಿರ್ಮಾಣದಿಂದ ಪ್ರಯಾಣದ ಅವಧಿ ಸಾಕಷ್ಟು ಇಳಿಕೆಯಾಗಲಿದ್ದು, ಎರಡು ರಾಜ್ಯಗಳ ಮಧ್ಯೆ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ.

ಎಲ್ಲಿ ಬರುತ್ತದೆ: ನೂತನ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ (Bengaluru-Pune Expressway), ಕರ್ನಾಟಕದ ಒಂಬತ್ತು (ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೊಪ್ಪಳ, ಗದಗ, ಬಾಗಲಕೋಟೆ & ಬೆಳಗಾವಿ) ಹಾಗೂ ಮಹಾರಾಷ್ಟ್ರದ ಮೂರು ಜಿಲ್ಲೆಗಳಿಗೆ (ಸಾಂಗ್ಲಿ, ಸತಾರ & ಪುಣೆ) ಸಂಪರ್ಕ ಕೊಂಡಿಯಾಗಲಿದೆ ಎಂದು ತಿಳಿದುಬಂದಿದೆ.

Bengaluru Pune Expressway 7 Hours Journey Highway Passes This Karnataka Districts

ಎಷ್ಟು ಪಥಗಳಲ್ಲಿ ಅಭಿವೃದ್ಧಿ: ನೂತನ ಹೆದ್ದಾರಿಯನ್ನು ಎನ್‌ಎಚ್ಎಐ 8 ಪಥಗಳಲ್ಲಿ ಅಭಿವೃದ್ಧಿಪಡಿಸಲು ಯೋಜಿಸಿದೆ ಎನ್ನಲಾಗಿದೆ. ಈ ರಸ್ತೆ ನಿರ್ಮಾಣಕ್ಕೆ ರೂ.50 ಸಾವಿರ ಕೋಟಿಗೂ ಅಧಿಕ ವೆಚ್ಚವಾಗಬಹುದು ಎಂದು ಹೇಳಲಾಗಿದೆ. ಆದಷ್ಟು ಬೇಗ ಹೊಸ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕೆಲಸಗಳು ಶುರುವಾಗಲಿದ್ದು, 2028ರಲ್ಲಿ ವಾಹನ ಸಂಚಾರಕ್ಕೆ ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.

ಎಕ್ಸ್‌ಪ್ರೆಸ್‌ವೇ ಉದ್ದ & ಪ್ರಯಾಣದ ಅವಧಿ: ಈ ಎಕ್ಸ್‌ಪ್ರೆಸ್‌ವೇ ಬರೋಬ್ಬರಿ 700 ಕಿಲೋಮೀಟರ್ ಉದ್ದವಿರಲಿದೆ. ಬೆಂಗಳೂರು ಹಾಗೂ ಪುಣೆ ನಗರಗಳ ಮಧ್ಯೆ ಈಗಿರುವ 15 ಗಂಟೆಗಳ ಪ್ರಯಾಣದ ಅವಧಿ 7 ಗಂಟೆಗಳಿಗೆ ಕಡಿಮೆಯಾಗಲಿದೆ. ವಾಹನಗಳ ಗರಿಷ್ಠ ವೇಗವನ್ನು ಗಂಟೆಗೆ 120 ಕಿಲೋಮೀಟರ್‌ಗಳಿಗೆ ಸೀಮಿತಗೊಳಿಸಬಹುದು ಎಂದು ತಿಳಿದುಬಂದಿದೆ.

ಪ್ರಸ್ತುತ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ ಸ್ಥಿತಿಗತಿ: ನೂತನ ಹೆದ್ದಾರಿ ನಿರ್ಮಾಣ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ವಿಸ್ತೃತಾ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸುತ್ತಿದ್ದಾರೆ. ಅದು ಸಿದ್ದಗೊಂಡ ನಂತರ, ಭೂ ಸ್ವಾಧೀನ ಸೇರಿದಂತೆ ಇತರೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ಗೊತ್ತಾಗಿದೆ. ಈ ಎಕ್ಸ್‌ಪ್ರೆಸ್‌ವೇ ಹಲವು ಫ್ಲೈಓವರ್, ಓವರ್ ಬ್ರಿಡ್ಜ್‌ ಮತ್ತು ಇಂಟರ್‌ಚೇಂಜ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಕೂಡ ಬಹುತೇಕ ಪೂರ್ಣ: ಈ ಹೆದ್ದಾರಿ ನಿರ್ಮಾಣ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಇದು 262 ಕಿಲೋಮೀಟರ್‌ ಉದ್ದವಿದೆ. ಅದರಲ್ಲಿ 71 ಕಿಲೋಮೀಟರ್ ಕರ್ನಾಟಕದಲ್ಲಿ ಹಾದು ಹೋಗಲಿದ್ದು, ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರ ಜಿಲ್ಲೆಗಳಿಗೂ ಸಂಪರ್ಕ ಕೊಂಡಿಯಾಗಿದೆ.

ರಾಜ್ಯದಲ್ಲಿ ನೂತನ ಹೆದ್ದಾರಿ ನಿರ್ಮಾಣದ ಕೆಲಸಗಳು ಒಂದು ಹಂತಕ್ಕೆ ಬಂದಿದ್ದು, ಆದರೆ ಆಂಧ್ರಪ್ರದೇಶ & ತಮಿಳುನಾಡು ರಾಜ್ಯದಲ್ಲಿ ಸಾಕಷ್ಟು ಕಾಮಗಾರಿ ಬಾಕಿ ಉಳಿದಿದ್ದು, 2025ರ ಆಗಸ್ಟ್‌ನಲ್ಲಿ ಪೂರ್ಣಗೊಳ್ಳಬಹುದು. ಹೊಸ ಹೆದ್ದಾರಿ ನಿರ್ಮಾಣದಿಂದ ಬೆಂಗಳೂರು ಮತ್ತು ಚೆನ್ನೈ ಮಧ್ಯೆಯಿರುವ ಪ್ರಯಾಣದ ಅವಧಿಯು 5-6 ಗಂಟೆಯಿಂದ ಕೇವಲ 3 ಗಂಟೆಗಳಿಗೆ ಇಳಿಕೆಯಾಗಬಹುದು ಎನ್ನಲಾಗಿದೆ. ಸುಮಾರು ರೂ.17 ಸಾವಿರ ಕೋಟಿ ವೆಚ್ಚದಲ್ಲಿ 4 ಪಥಗಳಲ್ಲಿ ಈ ಎಕ್ಸ್‌ಪ್ರೆಸ್‌ವೇಯನ್ನು ನಿರ್ಮಿಸಲಾಗುತ್ತಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, December 31, 2024, 15:32 [IST]
English summary
Bengaluru pune expressway 7 hours journey highway passes this karnataka districts
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+