ಬೆಂಗಳೂರು-ಪುಣೆ ಮಧ್ಯೆ ಹೊಸ ಎಕ್ಸ್‌ಪ್ರೆಸ್‌ವೇ.. 7 ಗಂಟೆ ಪ್ರಯಾಣ, ಕರ್ನಾಟಕದ ಈ ಜಿಲ್ಲೆಗಳಲ್ಲಿ ಹಾದುಹೋಗುತ್ತದೆ!

ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ (Bengaluru-Pune Expressway) ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ - NHAI) ದೊಡ್ಡಮಟ್ಟದಲ್ಲಿ ತಯಾರಿಯನ್ನು ನಡೆಸುತ್ತಿದೆ ಎಂದು ವರದಿಯಾಗಿದೆ. ಈ ಹೆದ್ದಾರಿ ಲೋಕಾರ್ಪಣೆಗೊಂಡ ಮೇಲೆ ಇವೆರೆಡು ನಗರಗಳ ನಡುವಿನ ಪ್ರಯಾಣದ ಅವಧಿಯು ಹಲವು ಗಂಟೆಗಳ ಕಾಲ ಇಳಿಕೆಯಾಗಲಿದ್ದು, ಆರ್ಥಿಕ ಅಭಿವೃದ್ಧಿಗೂ ಸಹಕಾರಿಯಾಗಲಿದೆ.

ಸುಮಾರು 700 ಕಿಲೋಮೀಟರ್ ಉದ್ದದ ಈ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ, ಕರ್ನಾಟಕದ 9 ಜಿಲ್ಲೆಗಳು (ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ) ಮತ್ತು ಮಹಾರಾಷ್ಟ್ರದ 3 ಜಿಲ್ಲೆಯಲ್ಲಿ (ಪುಣೆ, ಸತಾರ ಸಾಂಗ್ಲಿ) ಹಾದುಹೋಗಲಿದೆ. ದಾಬಸ್ ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆಯಿರುವ ಹುಲಿಕುಂಟೆ ಬಳಿ ಶುರುವಾಗಿ ಮಹಾರಾಷ್ಟ್ರದ ಶಿವರೆ ಸಮೀಪ ಮುಕ್ತಾಯಗೊಳ್ಳಲಿದೆ.

Bengaluru-Pune Expressway Cut Travel Time 7 Hours Passes This Karnataka Districts

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್ಎಐ) ಹೊಸ ಎಕ್ಸ್‌ಪ್ರೆಸ್‌ವೇಯನ್ನು 6 ಪಥದಲ್ಲಿ ಅಭಿವೃದ್ಧಿಪಡಿಸಲು ನಿರ್ಧಾರ ಮಾಡಿದ್ದು, ವಾಹನಗಳ ದಟ್ಟಣೆಗೆ ಅನುಗುಣವಾಗಿ ಈ ರಸ್ತೆಯನ್ನು 8 ಪಥದವರೆಗೆ ಮೇಲ್ದರ್ಜೆಗೇರಿಸಬಹುದು ಎನ್ನಲಾಗಿದೆ. ನೂತನ ಹೆದ್ದಾರಿಯು 6 ರೋಡ್ ಓವರ್ ಬ್ರಿಡ್ಜ್‌ಗಳು, 22 ಇಂಟರ್‌ಚೇಂಜ್‌ಗಳು ಹಾಗೂ 55 ಫ್ಲೈಓವರ್ (ಮೇಲ್ಸೇತುವೆ)ಗಳನ್ನು ಒಳಗೊಂಡಿರಲಿದೆ.

ಈ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ ನಿರ್ಮಾಣಗೊಳ್ಳುವವರೆಗೂ ರೂ.50,000 ಕೋಟಿ ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. ಭಾರತಮಾಲಾ ಹಂತ-2 ಯೋಜನೆಯಡಿ ಹೊಸ ಹೆದ್ದಾರಿಯ ಕಾಮಗಾರಿಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಲಿದ್ದು, ಬಹುತೇಕ 2028 ಉದ್ಘಾಟನೆಗೊಳ್ಳುವ ನಿರೀಕ್ಷೆಯಿದೆ. ಹಾಗೆಯೇ ರಾಷ್ಟ್ರೀಯ ಹೆದ್ದಾರಿ 4ಕ್ಕೂ ಪರ್ಯಾಯವಾಗಲಿದೆ ಎಂದು ಹೇಳಲಾಗಿದೆ.

Bengaluru-Pune Expressway Cut Travel Time 7 Hours Passes This Karnataka Districts

ಹೊಸ ಎಕ್ಸ್‌ಪ್ರೆಸ್‌ವೇ ಸಂಪೂರ್ಣವಾಗಿ ನಿರ್ಮಾಣಗೊಂಡು ಲೋಕಾರ್ಪಣೆಯಾದ ಮೇಲೆ ಬೆಂಗಳೂರು ಹಾಗೂ ಪುಣೆ ನಡುವೆ 95 ಕಿಲೋಮೀಟರ್‌ನಷ್ಟು ಅಂತರ ಕಡಿಮೆಯಾಗಲಿದೆ. ಜೊತೆಗೆ ಪ್ರಯಾಣದ ಅವಧಿಯು ಇಳಿಕೆಯಾಗಿದ್ದು, ಪ್ರಸ್ತುತ ಇವೆರೆಡು ನಗರಗಳ ನಡುವೆ 15 ಗಂಟೆಗಳ ಕಾಲ ವಾಹನದಲ್ಲಿ ಸಂಚರಿಸಬೇಕಾಗಿದ್ದು, ಅದು ಕೇವಲ 7 ಗಂಟೆಗೆ ಕಡಿತಗೊಳ್ಳಲಿದೆ.

ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇಯನ್ನು ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ (Mumbai-Pune Expressway)ನೊಂದಿಗೆ ಸಂಪರ್ಕ ಕಲ್ಪಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯೋಜಿಸುತ್ತಿದ್ದು, ಗಂಟೆಗೆ 120 ಕಿಲೋಮೀಟರ್ ವೇಗದಲ್ಲಿ ವಾಹನಗಳು ಚಲಿಸಲು ಸಾಧ್ಯವಾಗುವಂತೆ ಕೂಡ ಈ ಹೆದ್ದಾರಿಯನ್ನು ನಿರ್ಮಾಣ ಮಾಡಲಿದೆ ಎಂದು ತಿಳಿದುಬಂದಿದೆ. ಸದ್ಯ, ಕಾಮಗಾರಿ ಆರಂಭವಾಗಿರುವ ಕುರಿತು ಹೆಚ್ಚಿನ ವಿವರಗಳು ಲಭ್ಯವಿಲ್ಲ.

ಈ ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರದ ಜಿಲ್ಲೆಗಳ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ರಿಯಲ್ ಎಸ್ಟೇಟ್ ಕ್ಷೇತ್ರಗಳು ಸಾಕಷ್ಟು ಅಭಿವೃದ್ಧಿಗೊಳ್ಳಲಿದ್ದು, ಒಂದಷ್ಟು ಮಂದಿಗೆ ಉದ್ಯೋಗವು ಲಭ್ಯವಾಗಲಿದೆ ಎಂದು ನುರಿತವರು ಹೇಳುತ್ತಾರೆ.

ಬೆಂಗಳೂರು-ಚೆನ್ನೈ ನಡುವೆಯೂ ಈ ವರ್ಷಾಂತ್ಯದೊಳಗೆ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆಗೊಳ್ಳಲಿದೆ. 262 ಕಿಮೀ ಉದ್ದದ ಈ ಹೆದ್ದಾರಿಯು ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಹಾದುಹೋಗಲಿದೆ. ಇದರಿಂದ 5 ರಿಂದ 6 ಗಂಟೆ ಪ್ರಯಾಣ ಅವಧಿಯು 2 ಗಂಟೆ 30 ನಿಮಿಷಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ. 4 ಪಥದ ಹೊಸ ಹೆದ್ದಾರಿಯು ಬೆಂಗಳೂರು ಸಮೀಪದ ಹೊಸಕೋಟೆಯಲ್ಲಿ ಶುರುವಾಗಿ, ಚೆನ್ನೈ ಹೊರವಲಯದ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, May 21, 2024, 15:55 [IST]
English summary
Bengaluru pune expressway cut travel time 7 hours passes this karnataka districts
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+