ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆಗೆ ಬ್ರೇಕ್ ಹಾಕಲು ಡ್ರೋನ್ ಬಳಕೆ: ಟ್ರಾಫಿಕ್ ಮುಕ್ತ ನಗರವಾಗುತ್ತಾ?
ರಾಜ್ಯದ ರಾಜಧಾನಿ, ಸಿಲಿಕಾನ್ ಸಿಟಿ ಬೆಂಗಳೂರನ್ನು (Bengaluru) ನೆನಪಿಸಿಕೊಂಡರೆ, ಹತ್ತು ಹಲವು ಸಂಗತಿಗಳು ಕಣ್ಣ ಮುಂದೆ ಬಂದರೂ, ಬೆಂಗಳೂರಿನಲ್ಲಿ ನೆಲೆಸಿರುವ ಬಹುತೇಕರ ಕಣ್ಣಿಗೆ ಬೀಳುವುದು ಟ್ರಾಫಿಕ್ ಜಾಮ್. ವಿಶ್ವದಲ್ಲಿಯೇ ಅತಿದಟ್ಟಣೆ ಇರುವ ನಗರಗಳಲ್ಲಿ ಬೆಂಗಳೂರು ಕೂಡ ಒಂದಾಗಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆಯ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಟ್ರೋಲ್ ಗಳಾಗುತ್ತೆ.
ಬೆಂಗಳೂರಿನಟ್ರಾಪಿಕ್ ಜಾಮ್ ನಿಯಂತ್ರಣಕ್ಕೆ ಹೊಸ ಹೊಸ ಕಾರ್ಯತಂತ್ರಗಳನ್ನು ರೂಪಿಸುತ್ತಿವೆ. ಇಂದಿನಿಂದ ಒಂದು ವಾರದವರೆಗೂ ಡ್ರೋನ್ ಡ್ರೋನ್ ಹಾರಾಟ ನಡೆಯಲಿದೆ. ಸಂಚಾರ ನಿರ್ವಹಣೆ ಮತ್ತು ಟ್ರಾಫಿಕ್ ಜಾಮ್ ನಿಯಂತ್ರಣಕ್ಕೆ ಡ್ರೋನ್‌ಗಳು ಬಳಸಲಾಗುತ್ತಿವೆ. ಟ್ರಾಫಿಕ್ ಜಾಮ್ ಜಾಗಗಳಲ್ಲಿ ಡ್ರೋನ್ ಮೂಲಕ ಚಿತ್ರೀಕರಣ ಮಾಡಿ ಸಂಚಾರ ದಟ್ಟಣೆಯ ಕುರಿತು ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ಸಂಚಾರ ಪೊಲೀಸ್ ವಿಭಾಗದ ಪೊಲೀಸರಿಗೆ ಮೂರು ತಿಂಗಳ ಅವಧಿಯಲ್ಲಿ ಬೆಂಗಳೂರು ನಗರವನ್ನು ಸಂಚಾರ ಸಮಸ್ಯೆ ಮುಕ್ತವಾಗಿಸುವ ಗುರಿಯನ್ನು ನೀಡಲಾಗಿದೆ.ನ್ನು ರಸ್ತೆಗಳಲ್ಲಿ ಡ್ರೋನ್ ಕ್ಯಾಮರಾಗಳನ್ನು ಬಳಸಿ ಟ್ರಾಫಿಕ್ ಜಾಮ್ ಅನ್ನು ನಿಯಂತ್ರಿಸಲು ಪೊಲೀಸರಿಗೆ ಗೃಹ ಸಚಿವರಾದ ಡಾ ಜಿ.ಪರಮೇಶ್ವರ್ ಅವರು ಸೂಚನೆ ನೀಡಿದ್ದರು. ಸೇಫ್ ಸಿಟಿ ಯೋಜನೆಯಡಿಯಲ್ಲಿ ಹೊಸ ಡ್ರೋನ್ಗಳನ್ನು ಖರೀದಿಸಲಾಗಿದೆ. ನಗರದ ಎಲ್ಲಾ ಸಂಚಾರ ವಿಭಾಗದಲ್ಲೂ ಕೂಡ ಪ್ರಯೋಗಿಕವಾಗಿ ಬಳಸಲಾಗುತ್ತಿದೆ.
ಟ್ರಾಫಿಕ್ ಪೊಲೀಸರಿಗೆ ಡ್ರೋನ್ ಬಳಕೆಯ ಬಗ್ಗೆ ತರಬೇತಿ ನೀಡಲಾಗುತ್ತಿದೆ. ಸದ್ಯ ಹೆಬ್ಬಾಳ ಮೇಲ್ಸೇತುವೆ, ಸಿಲ್ಕ್ ಬೋರ್ಡ್ ಜಂಕ್ಷನ್, ಕೆ.ಆರ್.ಪುರ ಮೇಲ್ಸೇತುವೆ, ಮಾರತ್‌ಹಳ್ಳಿ, ಸಾರಕ್ಕಿ ಜಂಕ್ಷನ್, ಬನಶಂಕರಿ ಬಸ್ ನಿಲ್ದಾಣದ ಬಳಿ, ಇಬ್ಬಲೂರು ಜಂಕ್ಷನ್, ಟ್ರಿನಿಟಿ ಜಂಕ್ಷನ್ ನಲ್ಲಿ ಡ್ರೋನ್ ಅನ್ನು ಬಳಕೆ ಮಾಡುತ್ತಾರೆ. ಟ್ರಾಫಿಕ್ ಜಾಮ್ ಅನ್ನು ವೀಕ್ಷಿಸಿ ಟ್ರಾಫಿಕ್ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.

ನಗರದಲ್ಲಿ ಟ್ರಾಫಿಕ್ ಜಾಮ್ ಆದ ಸಂದರ್ಭದಲ್ಲಿ ಟ್ರಾಫಿಕ್ ಪೊಲೀಸರಿಗೆ ವಾಹನ ದಟ್ಟಣೆ ಎಲ್ಲವರೆಗೆ ಇದೆ ಎಂದು ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಎಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಒಳ್ಳೆಯದು ಎಂದು ತಿಳಿದು ಟ್ರಾಫಿಕ್ ಕ್ಲಿಯರ್ ಮಾಡಿಕೊಡಲು ಡ್ರೋನ್‌ಗಳು ಪೊಲೀಸರಿಗೆ ಸಹಾಯಕವಾಗಲಿವೆ. ವರದಿಗಳ ಪ್ರಕಾರ, ಆಂಧ್ರಪ್ರದೇಶದಲ್ಲಿ ಸಂಚಾರ ನಿರ್ವಹಣೆ ವ್ಯವಸ್ಥೆಯಲ್ಲಿ ಡ್ರೋನ್ ಬಳಕೆ ಪ್ರಯೋಗ ಯಶಸ್ವಿಯಾಗಿದೆ. ಅಲ್ಲಿ ಡ್ರೋನ್ ಬಳಕೆಯಿಂದಾಗಿ ಶೇ.20ರಷ್ಟು ಸಂಚಾರ ಸುಧಾರಿಸಿದೆ.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಳೆದ ಶುಕ್ರವಾರ ಹಿರಿಯ ಅಧಿಕಾರಿಗಳ ಜೊತ ನಡೆಸಿದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಜಿ ಪರಮೇಶ್ವರ್ ಅವರು ಮಾತನಾಡಿ, ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ನಾನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಮೂರು ತಿಂಗಳ ಗುರಿಯನ್ನು ನೀಡಿದ್ದೇನೆ. ನಗರವು ವಿಶ್ವದ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಎಂಬ ಅಪಖ್ಯಾತಿ ಗಳಿಸಿದೆ.
ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾದರೆ ನಿಖರ ಕಾರಣ ಪತ್ತೆ ಹಚ್ಚಲು ಪೊಲೀಸರಿಗೆ ಆಡಚಣೆಯಾಗುತ್ತಿದೆ. ಹೀಗಾಗಿ ವಾಹನ ದಟ್ಟಣೆ ತಗ್ಗಿಸಲು ಡ್ರೋನ್ ಕ್ಯಾಮರಾಗಳನ್ನು ಬಳಸಿ ಸಂಚಾರ ನಿರ್ವಹಣೆ ಮಾಡಲಾಗುತ್ತದೆ. ವಾಹನಗಳ ಸರಾಗವಾಗಿ ಚಲಿಸಲು ಅಡ್ಡಿಯಾದರೆ ಕೂಡಲೇ ಡ್ರೋನ್ ಬಳಸಿ ಯಾವ ಜಾಗದಲ್ಲಿ ಟ್ರಾಫಿಕ್ ಜಾಮ್ ಆಗಿದೆ ಎಂಬುದನ್ನು ಪತ್ತೆ ಮಾಡಿ ಸಮಸ್ಯೆ ಬಗೆಹರಿಸಬೇಕು. ಪೊಲೀಸ್ ನಿಯಂತ್ರಣ ಕೊಠಡಿಗೆ ಈ ಡ್ರೋನ್ ಕ್ಯಾಮರಾಗಳು ಸಂಪರ್ಕ ಹೊಂದಿರುತ್ತವೆ ಎಂದು ಹೇಳೀದರು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತೇವೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications