Rapido ಬೈಕಿನಲ್ಲಿ ಆಂಧ್ರ ಯುವಕನಿಂದ ಬೆಂಗಳೂರಿನಲ್ಲಿ ಲೈಂಗಿಕ ಕಿರುಕುಳ: ಚಲಿಸುವ ಬೈಕ್‌ನಿಂದಲೇ ಜಿಗಿದ ಯುವತಿ

ರ‍್ಯಾಪಿಡೋ (Rapido), ಓಲಾ (Ola) ಮತ್ತು ಉಬರ್ (Uber) ನಂತಹ ಮೊಬಿಲಿಟಿ ಪರಿಹಾರ ಅಪ್ಲಿಕೇಶನ್‌ಗಳು ಪ್ರಯಾಣವನ್ನು ಹೆಚ್ಚು ಅನುಕೂಲಕರವಾಗಿಸಿದೆ. ಆದರೆ ಕೆಲವು ಗ್ರಾಹಕರಿಗೆ ಕೆಟ್ಟ ಅನುಭವಗಳನ್ನು ನೀಡೀದೆ. ಇತ್ತೀಚೆಗೆರ‍್ಯಾಪಿಡೋ ಬೈಕ್‌ ಪ್ರಯಾಣದ ವೇಳೆ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಯುವತಿ.

ರ‍್ಯಾಪಿಡೋ ಚಾಲಕನಿಂದ ಲೈಂಗಿಕ ಕಿರುಕುಳ: ಚಲಿಸುವ ಬೈಕ್‌ನಿಂದಲೇ ಜಿಗಿದ ಯುವತಿನಿಂದ ಜಿಗಿದು ರಕ್ಷಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರ‍್ಯಾಪಿಡೋ ಚಾಲಕ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನ ಯಲಹಂಕ ನಾಗೇನಹಳ್ಳಿ ಸಮೀಪದ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಈ ಘಟನೆಯು ಏಪ್ರಿಲ್‌ 21 ರಂದು ನಡೆದಿದೆ. ಪೊಲೀಸರು ರೋಪಿಯನ್ನು ಬಂಧಿಸಿ ಜೈಲಿಗಟ್ಟಿದ ನಂತರ ಲೈಂಗಿಕ ಕಿರುಕುಳದ ಪ್ರಕರಣ ಬೆಳಕಿಗೆ ಬಂದಿದೆ.

Rapido Bike

ಈ ಯುವತಿಯು ಯಲಹಂಕದಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡುತ್ತಿದ್ದರು. ಈ ಯುವತಿಯು ಇಂದಿರಾನಗರ ತೆರಳಲು ರ‍್ಯಾಪಿಡೋ ಬೈಕ್ ಅನ್ನು ಬುಕ್ ಮಾಡಿದ್ದಳು. ಇನ್ನು ಬೈಕ್‌ನಲ್ಲಿ ಹೋಗುವಾಗ OTP ಪಡೆಯುವ ನೆಪದಲ್ಲಿ ಯುವತಿ ಮೊಬೈಲ್ ಕಸಿದುಕೊಂಡಿದ್ದಾನೆ. ನಂತರ, ಬೈಕ್‌ನಲ್ಲಿ ಚಲಾಯಿಸಿಕೊಂಡೇ ಯುವತಿಯ ಮೈ, ಕೈ ಮುಟ್ಟುತ್ತಾ ಲೈಂಗಿಕ ಕಿರುಕುಳ ನೀಡಿದ್ದಾನೆ.

ಇನ್ನು ಬೈಕ್ ಚಾಲಕ ಕಾಮುಕನಿಂದ ತಪ್ಪಿಸಿಕೊಳಲ್ಲು ಬೈಕಿನಿಂದ ಜಿಗಿದ್ದಿದ್ದಾರೆ. ಬೈಕ್ ವೇಗವಾಗಿ ಚಲಿಸುತ್ತಿರುವಾಗಲೇ ರಸ್ತೆ ಮಧ್ಯಕ್ಕೆ ಜಿಗಿದಿದ್ದಾರೆ. ಜಿಗಿದು ಕಾಮುಕನಿಂದ ತಪ್ಪಿಸಿಕೊಂಡು ಯಲಹಂಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಇನ್ನು ಪೊಲೀಸರು ಪ್ರಕರಣ ದಾಖಲಿಸಿಕೊಂಡು ರ‍್ಯಾಪಿಡೋ ಬೈಕ್‌ನಲ್ಲಿ ಯುವತಿಯರನ್ನು ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನ ಬಂಧಿಸಿದ್ದಾರೆ.

Rapido Bike

ಕಾಮುಕನನ್ನು ಆಂಧ್ರ ಪ್ರದೇಶ ಮೂಲದ ದೀಪಕ್ ರಾವ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರ ಪ್ರಯಾಣಕ್ಕಾಗಿ ಆಟೋ, ಟ್ಯಾಕ್ಸಿ, ರ್ಯಾಪಿಡೋ, ಓಲಾ, ಉಬರ್‌ ಸೇರಿದಂತೆ ಅನೇಕ ವ್ಯವಸ್ಥೆಗಳಿವೆ. ಆದರೆ, ಕಡಿಮೆ ಸಮಯದಲ್ಲಿ ಕಡಿಮೆ ಹಣದಲ್ಲಿ ಸುರಕ್ಷಿತ ಸ್ಥಳವನ್ನು ತಲುಪುವ ಉದ್ದೇಶದಿಂದ ಬೈಕ್ ಟ್ಯಾಕ್ಸಿ ಬುಕ್‌ ಮಾಡಿಕೊಂಡು ಹೋಗುತ್ತಾರೆ.

ಕಳೆದ ವರ್ಷ ಬೆಂಗಳೂರು ಪೊಲೀಸರು ಅಕ್ರಮವೆಂದು ಪರಿಗಣಿಸಿ 100 ಕ್ಕೂ ಹೆಚ್ಚು ರ‍್ಯಾಪಿಡೋ ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಪ್ರಕಾರ, ನಗರದಲ್ಲಿ ಅಕ್ರಮವಾಗಿ ಬಳಸುತ್ತಿರುವ ಬೈಕ್ ಟ್ಯಾಕ್ಸಿಗಳು ಅಪಘಾತಗಳು ಅಥವಾ ಯಾವುದೇ ವಾಹನ ಅಥವಾ ಜೀವ ಹಾನಿಯ ಸಂದರ್ಭದಲ್ಲಿ ವಿಮಾ ರಕ್ಷಣೆಗೆ ಅರ್ಹವಾಗಿರುವುದಿಲ್ಲ. ಯಾವುದೇ ವ್ಯಕ್ತಿ ಅಕ್ರಮ ಬೈಕ್ ಟ್ಯಾಕ್ಸಿ ನಡೆಸುತ್ತಿರುವುದು ಕಂಡುಬಂದರೆ, ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 10,000-15,000 ರೂ. ದಂಡ ವಿಧಿಸಬಹುದು.

ಈ ಬಗ್ಗೆ ರ‍್ಯಾಪಿಡೋ ಸಹ ಸಂಸ್ಥಾಪಕ ಪವನ್ ಗುಂಟುಪಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಬೈಕ್ ಟ್ಯಾಕ್ಸಿಗಳ ಪೈಪೋಟಿ ವಿರೋಧಿಸಿ ಆಟೋರಿಕ್ಷಾ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ. Rapido ಕಾನೂನಿನ ಮಿತಿಯೊಳಗೆ ಕಾರ್ಯನಿರ್ವಹಿಸುತ್ತದೆ ಮತ್ತು ಅದು ಕಾರ್ಯನಿರ್ವಹಿಸುವ ಎಲ್ಲಾ ರಾಜ್ಯಗಳಲ್ಲಿ ನಿಯಮಿತ ತೆರಿಗೆ-ಪಾವತಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕರು ಮತ್ತು ರ‍್ಯಾಪಿಡೋ ಬೈಕ್ ಚಾಲಕರ ನಡುವಿನ ಸಂಘರ್ಷ ಮುಂದುವರೆದಿದೆ,

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತ ಆಟೋಮೊಬೈಲ್ ಸುದ್ದಿಗಳನ್ನು ಒದಗಿಸುತ್ತದೆ, ಸೋಷಿಯಲ್ ಮೀಡಿಯಾಗಳಲ್ಲಿ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಪೇಜ್‌ಗಳನ್ನು ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರಿಯದಿರಿ.

Article Published On: Thursday, April 27, 2023, 15:35 [IST]
English summary
Bengaluru young woman jumped from moving rapido bike after being groped
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+