ಫ್ಯಾಮಿಲಿ ಕಾರುಗಳಿವು.. ಇನ್ವಿಕ್ಟೊ, ಸಫಾರಿಯೇ ಬೆಸ್ಟ್: 7 ಜನ ಸುಲಭವಾಗಿ ಪ್ರಯಾಣಿಸಬಹುದು!
ನೀವು ಬಜೆಟ್ ಬೆಲೆಗೆ ಉತ್ತಮ ಕುಟುಂಬದ ಕಾರುಗಳನ್ನು ಹುಡುಕುತ್ತಿದ್ದರೆ ಟಾಟಾ ಸಫಾರಿ ಹಾಗೂ ಮಾರುತಿ ಸುಜುಕಿ ಇನ್ವಿಕ್ಟೊಗಳು ಉತ್ತಮ ಆಯ್ಕೆಯಾಗಬಲ್ಲವು. ಇವುಗಳಲ್ಲಿ 6 ರಿಂದ 7 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.
ಮೊದಲಿಗೆ ಟಾಟಾ ಸಫಾರಿ ಫೇಸ್‌ಲಿಫ್ಟ್ (Tata Safari facelift) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು ರೂ.16.19 ಲಕ್ಷದಿಂದ ರೂ.27.34 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಸ್ಮಾರ್ಟ್ (ಒ), ಪ್ಯೂರ್ (ಒ), ಅಡ್ವೆಂಚರ್ ಸೇರಿದಂತೆ 10 ರೂಪಾಂತರ ಹಾಗೂ ಅತ್ಯಾಧುನಿಕ ಬಣ್ಣಗಳೊಂದಿಗೆ ಲಭ್ಯವಿದೆ. ಈ ಕಾರಿನಲ್ಲಿ 6 ಹಾಗೂ 7 ಮಂದಿ ಪ್ರಯಾಣಿಸಬಹುದು.

ಟಾಟಾ ಸಫಾರಿ ಕಾರು ಕೇವಲ 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದ್ದು, 170 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 350 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲೂ ದೊರೆಯುತ್ತದೆ. 16.3 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.
ಟಾಟಾ ಸಫಾರಿ ಫೇಸ್‌ಲಿಫ್ಟ್ ಎಸ್‌ಯುವಿ 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್, ಆಪಲ್ ಕಾರ್ ಪ್ಲೇ, ಆಂಬಿಯೆಂಟ್ ಲೈಟಿಂಗ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಎಂಪಿವಿ ರೂ.25.21 ಲಕ್ಷದಿಂದ ರೂ.28.92 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಮಿಸ್ಟಿಕ್ ವೈಟ್, ನೆಕ್ಸಾ ಬ್ಲೂ ಮತ್ತು ಸ್ಟೆಲ್ಲರ್ ಬ್ರೊನ್ ಬಣ್ಣಗಳೊಂದಿಗೂ ಲಭ್ಯವಿದೆ. ವಿನ್ಯಾಸದ ವಿಚಾರದಲ್ಲೂ ಅತ್ಯಾಧುನಿಕವಾಗಿದ್ದು, 7 ಅಥವಾ 8 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುತ್ತದೆ.
ಈ ಕಾರು 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 186 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 206 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ ಇ-ಸಿವಿಟಿ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. 23.24 ಕೆಎಂಪಿಎಲ್ ವರೆಗೆ ಇಂಧನ ದಕ್ಷತೆಯನ್ನು ಹೊಂದಿದೆ. ಕೇವಲ 9.5 ಸೆಕೆಂಡುಗಳಲ್ಲಿ 0-100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಮಾರುತಿ ಸುಜುಕಿ ಇನ್ವಿಕ್ಟೋ ಕಾರು, 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್ VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








