Bhat N Bhat ಖ್ಯಾತಿಯ ಸುದರ್ಶನ್ ಭಟ್ರು ಮನೆಗೆ ಹೊಸ ಎಥರ್ ಫ್ಯಾಮಿಲಿ ಇ-ಸ್ಕೂಟರ್ ಆಗಮನ: ಇದರ ವಿಶೇಷತೆಗಳೇನು?

ಭಟ್ ಎನ್ ಭಟ್ (Bhat N Bhat) ಯೂಟ್ಯೂಬ್ ಚಾನೆಲ್ ಮೂಲಕ ಸುದರ್ಶನ್ ಭಟ್ ಬೆದ್ರಾಡಿ (Sudarshan Bhat Bedradi) ಫುಲ್ ಫೇಮಸ್ ಆಗಿದ್ದು, ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಹಲವು ಬಗೆಯ ಆಹಾರ ಖಾದ್ಯಗಳನ್ನು ತಯಾರಿಸುವುದರೊಂದಿಗೆ ರಾಜ್ಯಾದ್ಯಂತ ಮನೆ ಮಾತಾಗಿದ್ದಾರೆ. ಸುದರ್ಶನ್ ಭಟ್ ಅವರ 'ಭಟ್ ಎನ್ ಭಟ್' ಚಾನೆಲ್‌ಗೆ ಬರೋಬ್ಬರಿ 12 ಲಕ್ಷ ಫಾಲೋವರ್‌ಗಳು ಇದ್ದಾರೆ.

ಕಳೆದ ತಿಂಗಳು ಸುದರ್ಶನ್ ಭಟ್ ಅವರು, ಶಿಕ್ಷಕಿ ಕೃತಿ ಎಂಬುವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ಜೋಡಿ ಆಗಸ್ಟ್‌ನಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿತ್ತು. ಆ ಬಳಿಕ, ಭಟ್ರು ಹಾಗೂ ಕೃತಿ ಅವರ ಪ್ರೀ ವೆಡ್ಡಿಂಗ್ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಹಲ್‌ಚಲ್ ಸೃಷ್ಟಿಸಿತ್ತು. ಸುದರ್ಶನ್ ಭಟ್ ಅವರು ಕೋವಿಡ್ ಸಾಂಕ್ರಾಮಿಕದ ವೇಳೆಯಲ್ಲಿ ಸಹೋದರನೊಟ್ಟಿಗೆ ಈ 'ಭಟ್ ಎನ್ ಭಟ್' ಯೂಟ್ಯೂಬ್ ಚಾನೆಲ್ ಹುಟ್ಟುಹಾಕಿದ್ದರು.

Bhat N Bhat Fame Sudarshan Bhat Buy New Ather Rizta Electric Scooter

ಸದ್ಯ ಸುದರ್ಶನ್ ಭಟ್ ಅವರು ಹೊಚ್ಚ ಹೊಸ ಎಥರ್ ರಿಜ್ಟಾ (Ather Rizta) ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್‌ ಖರೀದಿ ಮಾಡಿದ್ದಾರೆ. ನೂತನ ಸ್ಕೂಟರ್‌ನ್ನು ಪತ್ನಿ ಕೃತಿ ಅವರೊಂದಿಗೆ ಡೆಲಿವರಿ ತೆಗೆದುಕೊಂಡಿದ್ದಾರೆ. ಈ ಸಂಬಂಧ ಟೊರೆಂಟ್‌ಸ್ಪ್ರೀ (TorrentSpree) ಎಂಬ ಫೇಸ್‌ಬುಕ್‌ ಪುಟದಲ್ಲಿ ಫೋಟೋವೊಂದನ್ನು ಹಂಚಿಕೊಳ್ಳಲಾಗಿದೆ.

ಹೊಸ 'ಎಥರ್ ರಿಜ್ಟಾ' ಎಲೆಕ್ಟ್ರಿಕ್ ಸ್ಕೂಟರ್ ವಿಶೇಷತೆ ಬಗ್ಗೆ ಹೇಳುವುದಾದರೆ, ಇದು ರೂ.1.10 ರಿಂದ ರೂ.1.46 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಸಿಯಾಚಿನ್ ವೈಟ್ & ಡೆಕ್ಕನ್ ಗ್ರೇ ಸೇರಿದಂತೆ 3-ಮೊನೊಟೋನ್ ಹಾಗೂ 4-ಡುಯಲ್-ಟೋನ್ ಬಣ್ಣಗಳ ಆಯ್ಕೆಯನ್ನು ಹೊಂದಿದೆ.

ಈ ಎಲೆಕ್ಟ್ರಿಕ್ ಸ್ಕೂಟರ್ 2.9 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯ ಬ್ಯಾಟರಿ ಪ್ಯಾಕ್‌ಗಳನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ.

ಹೊಸ ಎಥರ್ ರಿಜ್ಟಾ ಇ-ಸ್ಕೂಟರ್ ಸ್ಮಾರ್ಟ್, ಇಕೋ ಹಾಗೂ ಜಿಪ್ ಎಂಬ 3 ರೈಡಿಂಗ್ ಮೋಡ್‌ಗಳನ್ನು ಒಳಗೊಂಡಿದೆ. 7-ಇಂಚಿನ ಎಲ್‌ಸಿಡಿ ಸ್ಕ್ರೀನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 34 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇನ್ ಅನ್ನು ಪಡೆದಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ 119 ಕೆಜಿ ತೂಕವಿದ್ದು, 165 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಅನ್ನು ಪಡೆದಿದೆ.

ನೂತನ ಎಥರ್ ರಿಜ್ಟಾ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಸವಾರರ ಸುರಕ್ಷತೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್ ಆಯ್ಕೆಯನ್ನು ಹೊಂದಿದೆ. ಈ ಸ್ಕೂಟರ್‌ಗೆ ಟಿವಿಎಸ್ ಐಕ್ಯೂಬ್, ಓಲಾ ಎಸ್1 ಏರ್ ಹಾಗೂ ಹೀರೋ ವಿಡಾ ವಿ1 ಪ್ರೋ ಎಲೆಕ್ಟ್ರಿಕ್ ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Image Courtesy:
Source: https://www.facebook.com/photo/?fbid=996934779137253&set=a.630565019107566

Article Published On: Wednesday, November 27, 2024, 17:15 [IST]
English summary
Bhat n bhat fame sudarshan bhat buy new ather rizta electric scooter
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+