ಬಂಡೆ ಮಹಾಕಾಳಿ ದೇಗುಲದಲ್ಲಿ ಪೂಜೆ: ಹೊಸ SUV ಖರೀದಿಸಿದ ಭವ್ಯಾ ಗೌಡ!
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ 'ಬಿಗ್ ಬಾಸ್ ಸೀಸನ್ 11ರಲ್ಲಿ ನಟಿ ಭವ್ಯಾ ಗೌಡ (Bhavya Gowda) ಸ್ಪರ್ಧಿಯಾಗಿ ಭಾವಹಿಸಿದ್ದರು. ಈ ಶೋ ಅವರಿಗೆ ದೊಡ್ಡ ಮಟ್ಟದಲ್ಲಿ ಖ್ಯಾತಿ ತಂದುಕೊಟ್ಟಿತ್ತು. ಸದ್ಯ, ಜೀ ಕನ್ನಡʼದಲ್ಲಿ ಮೂಡಿಬರುತ್ತಿರುವ 'ಕರ್ಣ' ಧಾರಾವಾಹಿಯಲ್ಲಿ 'ನಿಧಿ' ಪಾತ್ರದಲ್ಲಿ ಅಭಿಮಾನಿಸುತ್ತಿದ್ದಾರೆ. ಟಿಕ್‌ಟಾಕ್ ಮೂಲಕವೇ ಖ್ಯಾತಿ ಗಳಿಸಿದ್ದ ಅವರು, 'ಗೀತಾ' ಧಾರಾವಾಹಿಗೆ ಆಡಿಷನ್ ಕೊಟ್ಟು ಸೆಲೆಕ್ಟ್ ಆಗಿದ್ದರು. ಬೆಳ್ಳಿ ತೆರೆಯಲ್ಲಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಭವ್ಯಾ, ವಿಸ್ಮಯಾ ಗೌಡ ಆಕ್ಷನ್ ಕಟ್ ಹೇಳಿದ್ದ 'ಡಿಯರ್ ಕಣ್ಮಣಿ' ಸಿನಿಮಾದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದರು.
ಇತ್ತೀಚೆಗೆ ನಟಿ ಭವ್ಯಾ ಗೌಡ ಹೊಚ್ಚ ಹೊಸ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿಯನ್ನು ಖರೀದಿ ಮಾಡಿದ್ದಾರೆ. ನೂತನ ಕಾರನ್ನು ತಮ್ಮ ಕುಟುಂಬ ಸದಸ್ಯರೊಂದಿಗೆ ವಿತರಣೆ ಪಡೆದಿದ್ದಾರೆ. ಆ ಬಳಿಕ, ಬಂಡೆ ಮಹಾಕಾಳಿ ದೇಗುಲಕ್ಕೆ ತೆಗೆದುಕೊಂಡು ಹೋಗಿ ಪೂಜೆ ಮಾಡಿಸಿದ್ದಾರೆ.

ಸ್ಕೋಡಾ ಕೈಲಾಕ್ ವಿಶೇಷತೆಗಳೇನು:
ಈ ಎಸ್‌ಯುವಿಯು ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ಕನಿಷ್ಠ ರೂ.7.55 ಹಾಗೂ ಗರಿಷ್ಠ ರೂ.12.80 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಕ್ಲಾಸಿಕ್, ಸಿಗ್ನೇಚರ್, ಸಿಗ್ನೇಚರ್ ಪ್ಲಸ್ ಹಾಗೂ ಪ್ರೆಸ್ಟೀಜ್ ಸೇರಿದಂತೆ ಹಲವು ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ದೊರೆಯುತ್ತದೆ.
ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ಪ್ರತಿಯೊಬ್ಬರನ್ನು ಸೆಳೆಯುವಂತಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್-ಡೌನ್ ಗ್ರಿಲ್, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳು ಹಾಗೂ 17 ಇಂಚಿನ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಹಾಗೂ ಟೊರ್ನಾಡೊ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ನೂತನ 'ಕೈಲಾಕ್' ಹೆಚ್ಚು ವಿಶಾಲ ಗಾತ್ರದಲ್ಲಿದೆ. 3,995 ಮಿ.ಮೀ ಉದ್ದ, 1,783 ಮಿ.ಮೀ ಅಗಲ ಮತ್ತು 1619 ಮಿ.ಮೀ ಎತ್ತರವಿದೆ. ಜೊತೆಗಿದು 189 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2566 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಸರಿ ಸುಮಾರು 1255 ಕೆಜಿ ತೂಕವಿದೆ.
ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.0-ಲೀ. ಟಿಎಸ್‌ಟಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 188 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 10.5 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ಇದು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ದೂರದ ಊರುಗಳಿಗೆ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 446 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹೊಸ 'ಸ್ಕೋಡಾ ಕೈಲಾಕ್' ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications








