Amrit Bharat: ಇಲ್ಲಿಂದ ಬೆಂಗಳೂರಿಗೆ ಜನಸಾಮನ್ಯರ ಅಮೃತ್ ಭಾರತ್.. ತುಂಬಾ ಕಡಿಮೆ ಖರ್ಚು!

ದೇಶಾದ್ಯಂತ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಪ್ರೀಮಿಯಂ ಸೆಮಿ ಹೈ-ಸ್ವೀಡ್ ರೈಲಾಗಿ ಯಶಸ್ವಿಯಾಗಿ ಸಂಚಾರವನ್ನು ನಡೆಸುತ್ತಿದ್ದು, ಪ್ರಯಾಣಿಕರಿಂದಲೂ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದಾಗ್ಯೂ ಇವುಗಳ ಟಿಕೆಟ್ ದರ ಸ್ವಲ್ಪ ಹೆಚ್ಚಿದ್ದು, ರಾತ್ರಿ ಪ್ರಯಾಣ ಅಸಾಧ್ಯವಾಗಿದ್ದು, ಸಾಮಾನ್ಯ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುವ ನಿಟ್ಟಿನಲ್ಲಿ ಭಾರತೀಯ ರೈಲ್ವೆಯು ಕರ್ನಾಟಕ ಸೇರಿದಂತೆ ವಿವಿಧ ಮಾರ್ಗದಲ್ಲಿ ಅಮೃತ್ ಭಾರತ್ ಎಕ್ಸ್‌ಪ್ರೆಸ್ (Amrit Bharat Express) ರೈಲುಗಳನ್ನು ಓಡಿಸುತ್ತಿದೆ. ಲೋಕಸಭಾ ಚುನಾವಣೆ ಬಳಿಕ, ಹೊಸ ಕೇಂದ್ರ ಸರ್ಕಾರದ ಅಸ್ತಿತ್ವಕ್ಕೆ ಬಂದ ಮೇಲೆ ಮತ್ತಷ್ಟು ಕಡೆಗಳಲ್ಲಿಯೂ ಈ ರೈಲು ಕಾರ್ಯಾಚರಿಸಲಿದೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.

ಜುಲೈನಿಂದ ಭೋಪಾಲ್ (Bhopal) - ಬೆಂಗಳೂರು (Bengaluru) ಮಧ್ಯೆ ನೂತನ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ ಸಂಚಾರ ಆರಂಭವಾಗುವ ನಿರೀಕ್ಷೆಯಿದೆ. ಈ ರೈಲು ಪುಣೆ ಮಾರ್ಗವಾಗಿ ಓಡಾಟವನ್ನು ನಡೆಸಬಹುದು ಎಂದು ವರದಿಯಾಗಿದೆ. ಆದರೆ, ನೂತನ ರೈಲಿನ ವೇಳಾಪಟ್ಟಿ ಹಾಗೂ ನಿಲುಗಡೆ ನಿಲ್ದಾಣದ ಕುರಿತಂತೆ ಯಾವುದೇ ಅಧಿಕೃತ ವಿವರಗಳು ಲಭ್ಯವಾಗಿಲ್ಲ.

Bhopal Bengaluru Amrit Bharat Express Starts Maybe July Details

ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ವರ್ಷದ ಡಿಸೆಂಬರ್ 30ರಂದು ಅಯೋಧ್ಯೆಯ ರೈಲು ನಿಲ್ದಾಣದಲ್ಲಿ ಮಾಲ್ಡಾ - ಬೆಂಗಳೂರು (malda - bengaluru) ಮತ್ತು ದೆಹಲಿ - ಅಯೋಧ್ಯೆ - ದರ್ಬಂಗಾ (Delhi - Ayodhya - Darbhanga) ನಡುವೆ ಎರಡು ಹೊಸ ಅಮೃತ್ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಿದ್ದರು.

ಜನಸಾಮಾನ್ಯರ ರೈಲು ಎಂದು ಹೆಸರುವಾಸಿಯಾಗಿರುವ ಅಮೃತ್ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಸುಮಾರು 1,834 ಜನರು ಪ್ರಯಾಣಿಸಬಹುದು. ಇದು ಗಂಟೆಗೆ 130 ಕಿಮೀ ಗರಿಷ್ಠ ವೇಗದಲ್ಲಿ ಸಂಚರಿಸಲಿದ್ದು, ಮುಂಭಾಗ - ಹಿಂಭಾಗ ಎಂಜಿನ್‌ನ್ನು ಒಳಗೊಂಡಿದೆ. ದ್ವಿತೀಯ ದರ್ಜೆಯ ಸ್ಲೀಪರ್ ಕೋಚ್‌ ಹಾಗೂ ಕಾಯ್ದಿರಿಸದ ಕೋಚ್‌ಗಳನ್ನು ಹೊಂದಿದ್ದು, ಇದರಲ್ಲಿ ಹವಾನಿಯಂತ್ರಿತ (ಎಸಿ) ವ್ಯವಸ್ಥೆ ಮತ್ತು ಸ್ವಯಂ ಚಾಲಿತ ಬಾಗಿಲುಗಳಿಲ್ಲ.

Bhopal Bengaluru Amrit Bharat Express Starts Maybe July Details

ಈ ಅಮೃತ್ ಭಾರತ್ ಕೋಚ್‌ನಲ್ಲಿ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌, ಎಲ್‌ಇಡಿ ಲೈಟ್, ಫುಡ್ ಟೇಬಲ್‌, ಮೊಬೈಲ್ & ಬಾಟಲ್ ಹೋಲ್ಡರ್ ಸೇರಿದಂತೆ ಹಲವು ಅತ್ಯಾಧುನಿಕ ಸೌಕರ್ಯಗಳಿವೆ. ಸುರಕ್ಷತೆಗಾಗಿ ಸಿಸಿಟಿವಿಯನ್ನು ಪಡೆದಿದೆ. ಅಮೃತ್ ಭಾರತ್‌ ರೈಲುಗಳನ್ನು ಹಗಲು-ರಾತ್ರಿ ವೇಳೆಯ ಸಂಚಾರಕ್ಕೆ ಬಳಕೆ ಮಾಡಲು ಸಾಧ್ಯವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಒಟ್ಟು 22 ಕೋಚ್‌ಗಳನ್ನು ಹೊಂದಿರುವ ಈ ರೈಲು, 800 ಕಿ.ಮೀ ಗಿಂತ ಹೆಚ್ಚು ದೂರದ ಮಾರ್ಗದಲ್ಲಿ ಓಡಾಟವನ್ನು ನಡೆಸುತ್ತಿದೆ.

ದೂರದ ಉರುಗಳಿಗೆ ತೆರಳುವ ಪ್ರಯಾಣಿಕರಿಗೆ ನೆರವಾಗುವ ಸಲುವಾಗಿ ರೈಲ್ವೆ ಇಲಾಖೆಯು ವಂದೇ ಭಾರತ್ ಸ್ಲೀಪರ್‌ಗಳನ್ನು (Vande Bharat Sleeper) ಅಭಿವೃದ್ಧಿಪಡಿಸುತ್ತಿದೆ. ಮುಂಬರುವ ಕೆಲವೇ ದಿನಗಳಲ್ಲಿ ಈ ರೈಲುಗಳು ಹಳಿಗೆ ಬರಲಿದ್ದು, ರಾಜಧಾನಿ ಎಕ್ಸ್‌ಪ್ರೆಸ್‌ಗಳಿಗೆ ಪರ್ಯಾಯವಾಗಲಿವೆ ಎನ್ನಲಾಗಿದೆ. ಇವು ಒಟ್ಟು 16 ಎಸಿ ಕೋಚ್‌ಗಳನ್ನು ಒಳಗೊಂಡಿರಲಿದ್ದು, ಸ್ವಯಂ ಚಾಲಿತ ಬಾಗಿಲು ಹಾಗೂ ವಾಸನೆ ಮುಕ್ತ ಶೌಚಾಲಯಗಳನ್ನು ಹೊಂದಿರಬಹುದು ಎಂದು ಹೇಳಲಾಗಿದೆ.

ರೈಲ್ವೆ ಇಲಾಖೆಯು ಹತ್ತಿರದ ನಗರಗಳನ್ನು ಸಂಪರ್ಕಿಸಲು ವಂದೇ ಭಾರತ್ ಮೆಟ್ರೋ (Vande Bharat Metro) ರೈಲುಗಳನ್ನು ಸಹ ಸಿದ್ಧಪಡಿಸುತ್ತಿದೆ. ಇವು ಶೀಘ್ರದಲ್ಲಿಯೇ ಓಡಾಟವನ್ನು ಆರಂಭಿಸುವ ಸಾಧ್ಯತೆಯಿದೆ. ಜುಲೈನಲ್ಲಿ ಈ ರೈಲು ಪ್ರಾಯೋಗಿಕ ಸಂಚಾರವನ್ನು ನಡೆಸಬಹುದು. ಪ್ರಸ್ತುತ 50 ವಂದೇ ಮೆಟ್ರೋ ರೈಲುಗಳನ್ನು ಉತ್ಪಾದಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, June 4, 2024, 11:30 [IST]
English summary
Bhopal bengaluru amrit bharat express starts maybe july details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+