ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಮಧ್ಯಪ್ರದೇಶದ ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಕಳೆದ ಶನಿವಾರ ಪ್ರೀಮಿಯಂ ಪೆಟ್ರೋಲ್ ಬೆಲೆ ಇತಿಹಾಸದಲ್ಲಿ ಮೊದಲ ಬಾರಿಗೆ ರೂ.100ರ ಗಡಿ ದಾಟಿದೆ. ಪ್ರೀಮಿಯಂ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.100.04ಗೆ ಏರಿಕೆಯಾಗಿದ್ದರಿಂದ ಅಲ್ಲಿನ ವಾಹನ ಸವಾರರು ಆಘಾತಕ್ಕೊಳಗಾಗಿದ್ದಾರೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಈ ಬೆಲೆ ಏರಿಕೆಯನ್ನು ಖಂಡಿಸಿ, ಯುವಕನೊಬ್ಬ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾನೆ. ಪೆಟ್ರೋಲ್ ಬಂಕ್ ಮುಂದೆ ನಿಂತು ಕೈಯಲ್ಲಿ ಕ್ರಿಕೆಟ್ ಬ್ಯಾಟ್ ಹಾಗೂ ಕ್ರಿಕೆಟ್ ಹೆಲ್ಮೆಟ್ ಹಿಡಿದು ಬ್ಯಾಟ್ಸ್'ಮನ್'ಗಳು ಸೆಂಚುರಿ ಹೊಡೆದಾಗ ಸಂಭ್ರಮಿಸುವ ರೀತಿಯಲ್ಲಿ ಪೋಸ್ ನೀಡಿದ್ದಾನೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಆತ ನೀಡಿರುವ ಪೋಸ್ ಪೆಟ್ರೋಲ್ ಬೆಲೆ ನೂರು ರೂಪಾಯಿ ಗಡಿ ದಾಟಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಈ ಫೋಟೋ ಫೇಸ್‌ಬುಕ್, ಟ್ವಿಟರ್ ಸೇರಿದಂತೆ ಹಲವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ವಿಭಿನ್ನವಾಗಿ ಪ್ರತಿಭಟಿಸಿದ ಯುವಕನನ್ನು ಯುವ ಕಾಂಗ್ರೆಸ್ ಸದಸ್ಯನೆಂದು ಹೇಳಲಾಗಿದೆ. ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಳೆದ ಕೆಲವು ದಿನಗಳಿಂದ ಗಗನಕ್ಕೇರುತ್ತಿದೆ. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಇನ್ನೂ ಜಿಎಸ್'ಟಿ ವ್ಯಾಪ್ತಿಗೆ ಸೇರಿಸಿಲ್ಲ. ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ತೆರಿಗೆ ವಿಧಿಸುತ್ತವೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಇದರಿಂದಾಗಿ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯೂ ವಿಪರೀತ ಹೆಚ್ಚಾಗಿದೆ. ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ತೆರಿಗೆ ಪ್ರಮಾಣವನ್ನು ಕಡಿಮೆಗೊಳಿಸಬೇಕೆಂದು ವಾಹನ ಚಾಲಕರು ಒತ್ತಾಯಿಸುತ್ತಿದ್ದಾರೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಆದರೆ ಕೆಲ ದಿನಗಳ ಹಿಂದಷ್ಟೇ ಕೇಂದ್ರ ಪೆಟ್ರೋಲಿಯಂ ಸಚಿವರಾದ ಧರ್ಮೇಂದ್ರ ಪ್ರಧಾನ್ ರವರು ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಯಾವುದೇ ಉದ್ದೇಶವನ್ನು ಹೊಂದಿಲ್ಲವೆಂದು ಹೇಳಿದರು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಇದು ವಾಹನ ಚಾಲಕರಿಗೆ ಇನ್ನಷ್ಟು ಆತಂಕವನ್ನುಂಟು ಮಾಡಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಜನರ ಈಗ ಎಲೆಕ್ಟ್ರಿಕ್ ವಾಹನಗಳತ್ತಮುಖ ಮಾಡುತ್ತಿದ್ದಾರೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಪೆಟ್ರೋಲ್, ಡೀಸೆಲ್ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿದ್ದರೂ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡುತ್ತಿವೆ. ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಇದರಿಂದ ಎಲೆಕ್ಟ್ರಿಕ್ ವಾಹನಗಳ ಖರೀದಿಯು ಹೆಚ್ಚಾಗಿದೆ. ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಎಸ್‌ಯುವಿ, ಎಂಜಿ ಝಡ್ಎಸ್ ಎಲೆಕ್ಟ್ರಿಕ್ ಎಸ್‌ಯುವಿ ಹಾಗೂ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರುಗಳು ಮಾರಾಟವಾಗುತ್ತಿವೆ.

ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ...ಯಾರದೋ ಸೆಂಚುರಿಗೆ ಇನ್ಯಾರದೋ ಸಂಭ್ರಮ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಸಂಖ್ಯೆ ಕಡಿಮೆ ಇದ್ದರೂ, ಹಲವಾರು ಕಂಪನಿಗಳು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟ ಮಾಡುತ್ತಿವೆ.

Most Read Articles

Kannada
English summary
Bhopal youth poses with cricket bat and helmet at petrol bunk. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X