ಬಿಗ್‌ಬಾಸ್ ಸ್ಪರ್ಧಿ ನಟಿ ಮೋಕ್ಷಿತಾ ಪೈ ಈ ಪ್ರಖ್ಯಾತ ಕಾರಿನ ಒಡತಿ: ಇದು ಶ್ರೀಸಾಮಾನ್ಯರ ಅಂಬಾರಿ..!
ಬಿಗ್‌ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಪ್ರಾರಂಭವಾಗಿದ್ದು, ದಿನದಿಂದ ದಿನಕ್ಕೆ ರಂಗೇರುತ್ತಿದೆ. ಸ್ಪರ್ಧಿಗಳಿಗೆ ಟಾಸ್ಕ್‌ನ್ನು ನೀಡಲಾಗುತ್ತಿದೆ. ಈ ಶೋನಲ್ಲಿ ಕಿರುತೆರೆ ಜನಪ್ರಿಯ ನಟಿ ಮೋಕ್ಷಿತಾ ಪೈ (Mokshitha Pai) ಕೂಡ ಭಾಗವಹಿಸಿದ್ದಾರೆ. ಮೂಲತಃ ಮಂಗಳೂರಿನರಾದ ಮೋಕ್ಷಿತಾ, ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ 'ಪಾರು' ಧಾರವಾಹಿ ಮೂಲಕ ಮನೆಮಾತಾಗಿದ್ದರು. ಸದ್ಯ ಅವರಿಗೆ ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವಿದ್ದು, ಇನ್‌ಸ್ಟಾಗ್ರಾಮ್‌ನಲ್ಲಿ 30 ಸಾವಿರಕ್ಕೂ ಅಧಿಕ ಫಾಲೋವರ್‌ಗಳಿದ್ದಾರೆ.
ನಟಿ ಮೋಕ್ಷಿತಾ ಪೈ ಬಗ್ಗೆ ನೆಟ್ಟಗರು ಸಹ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಮೂಲಕ ಅವರ ಬಗ್ಗೆ ಹಲವು ವಿಚಾರಗಳನ್ನು ತಿಳಿದುಕೊಳ್ಳುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ.. ನಟಿ ಮೋಕ್ಷಿತಾಗೆ ಕಾರುಗಳು ಮೇಲೆ ವಿಶೇಷ ಪ್ರೀತಿಯಿದ್ದು, ಜನಪ್ರಿಯ ಹ್ಯುಂಡೈ ವೆನ್ಯೂ ಎಸ್‌ಯುವಿ ಒಡತಿಯೂ ಆಗಿದ್ದಾರೆ. ಈ ಕಾರನ್ನು ಅವರು 2020ರಲ್ಲಿ ಖರೀದಿಸಿದ್ದರು. ಇದೇ ಎಸ್‌ಯುವಿ ಮುಂದೆ ಮೋಕ್ಷಿತಾ ಹಲವು ಫೋಟೋಗಳಿಗೂ ಪೋಸ್ ನೀಡಿದ್ದಾರೆ.

ಪ್ರಸ್ತುತ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ವೆನ್ಯೂ (Hyundai Venue) ಕಾರಿನ ಕುರಿತಂತೆ ಹೇಳುವುದಾದರೆ, ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.7.94 ಲಕ್ಷದಿಂದ ರೂ.13.53 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಇ ಪ್ಲಸ್, ಎಕ್ಸಿಕ್ಯೂಟಿವ್, ಎಸ್, ಎಸ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ.
ಈ ಕಾರು 1.2 ಲೀಟರ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಪಡೆದಿದೆ. 17 ರಿಂದ 22.7 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹ್ಯುಂಡೈ ವೆನ್ಯೂ ಕಾರು ಟೈಟಾನ್ ಗ್ರೇ, ಡೆನಿಮ್ ಬ್ಲೂ, ಟೈಫೂನ್ ಸಿಲ್ವರ್, ಫಿಯರಿ ರೆಡ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುರಿತುಕೊಂಡು ಪ್ರಯಾಣಿಸಬಹುದು. ಪ್ರವಾಸ ವೇಳೆಯಲ್ಲಿ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 350 ಲೀಟರ್‌ನ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಯುವ ಗ್ರಾಹಕರು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ವೆಂಟಿಲೇಟೆಡ್ ಫ್ರಂಟ್ ಸೀಟ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಏರ್ ಪ್ಯೂರಿಫೈಯರ್, ಪುಶ್ ಬಟನ್ ಸ್ಟಾರ್ಟ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹೊಸ ಹ್ಯುಂಡೈ ವೆನ್ಯೂ ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6-ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications