ಬಿಗ್‌ಬಾಸ್ ಸ್ಪರ್ಧಿ ಗೋಲ್ಡ್ ಸುರೇಶ್ ಈ ಜನಪ್ರಿಯ ಕಾರುಗಳ ಮಾಲೀಕ: ಬೆಲೆ ಕೇಳಿದ್ರೆ ಅಷ್ಟೇ.. ಶಾಕ್ ಆಗ್ತೀರಾ!!
ಬಿಗ್‌ಬಾಸ್ ಕನ್ನಡ ಸೀಸನ್ 11 (Bigg Boss Kannada 11) ಅದ್ದೂರಿಯಾಗಿ ಶುರುವಾಗಿದೆ. ಸ್ಪರ್ಧಿಗಳಾಗಿ ಉಗ್ರಂ ಮಂಜು, ಮೋಕ್ಷಿತಾ ಪೈ, ಚೈತ್ರಾ ಕುಂದಾಪುರ, ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಗೋಲ್ಡ್ ಸುರೇಶ್, ಧನರಾಜ್ ಆಚಾರ್ಯ, ಅನುಷಾ ರೈ, ಹಂಸಾ ನಾರಾಯಣಸ್ವಾಮಿ, ಗೌತಮಿ ಜಾಧವ್, ಧರ್ಮ ಕೀರ್ತಿರಾಜ್, ಐಶ್ವರ್ಯ ಶಿಂದೋಗಿ ಹಾಗೂ ತ್ರಿವಿಕ್ರಂ ಭಾಗವಹಿಸಿದ್ದಾರೆ. ಆದರೆ, ರೂ.2 ಕೋಟಿ ಮೌಲ್ಯದ ಚಿನ್ನಾಭರಣ ಧರಿಸಿ ಓಡಾಡುವ ಗೋಲ್ಡ್ ಸುರೇಶ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ತೀವ್ರ ಹುಡುಕಾಟ ನಡೆಸಿದ್ದಾರೆ.
ಮೂಲತಃ ಬೆಳಗಾವಿ ಜಿಲ್ಲೆಯ ಅಥಣಿಗೆ ಸೇರಿದ ಗೋಲ್ಡ್ ಸುರೇಶ್ (Gold Suresh), ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಸಣ್ಣ-ಪುಟ್ಟ ಕೆಲಸ ಮಾಡುತ್ತಿದ್ದರು. ಆ ಬಳಿಕ, ಈವೆಂಟ್ ಕಂಪನಿಯೊಂದನ್ನು ಸ್ಥಾಪಿಸಿ, ಯಶಸ್ವಿ ಉದ್ಯಮಿಯಾಗಿದ್ದಾರೆ. ಅವರು ಹಲವು ಐಷಾರಾಮಿ ಕಾರುಗಳ ಮಾಲೀಕರೂ ಆಗಿದ್ದು, ಈ ಕುರಿತಂತೆ ಇನ್‌ಸ್ಟಾಗ್ರಾಮ್‌ನಲ್ಲಿ ಹಲವು ಪೋಸ್ಟ್‌ಗಳಿವೆ.

ಗೋಲ್ಡ್ ಸುರೇಶ್ ದುಬಾರಿ ಬೆಲೆಯ ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta) ಟೊಯೊಟಾ ಫಾರ್ಚೂನರ್ (Toyota Fortuner), ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹಾಗೂ ವೋಲ್ವೋ ಎಕ್ಸ್‌ಸಿ90 (Volvo XC90) ಕಾರುಗಳ ಒಡೆಯರಾಗಿದ್ದಾರೆ. ಸದ್ಯಕ್ಕೆ ಈ ಕಾರುಗಳೆಲ್ಲ ಅವರದ್ದೇ ಎಂಬುದರ ಬಗ್ಗೆ ಯಾವುದೇ ಖಚಿತವಾದ ವಿವರಗಳು ಲಭ್ಯವಾಗಿಲ್ಲ.
ಟೊಯೊಟಾ ಇನ್ನೋವಾ ಕ್ರಿಸ್ಟಾ ಎಂವಿಪಿ ಬಗ್ಗೆ ಹೇಳುವುದಾದರೆ, ಈ ಕಾರು ರೂ.19.99 ಲಕ್ಷದಿಂದ ರೂ.26.55 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.4-ಲೀಟರ್ ಡೀಸೆಲ್ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 7, 8 ಆಸನ ವ್ಯವಸ್ಥೆಯಲ್ಲಿ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟೊಯೊಟಾ ಫಾರ್ಚೂನರ್ ಫುಲ್-ಸೈಜ್ (ಪೂರ್ಣ ಗಾತ್ರ) ಎಸ್‌ಯುವಿಯಾಗಿದ್ದು, ರೂ.33.43 ಲಕ್ಷದಿಂದ ರೂ.51.44 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. 2.7-ಲೀಟರ್ ಪೆಟ್ರೋಲ್ ಹಾಗೂ 2.8-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, 8-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.6.49 ಲಕ್ಷದಿಂದ ರೂ.9.59 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ 3-ಸಿಲಿಂಡರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ವೋಲ್ವೋ ಎಕ್ಸ್‌ಸಿ90 ದುಬಾರಿ ಬೆಲೆಯ ಕಾರಾಗಿದ್ದು, ರೂ.1.01 ಕೋಟಿ ಎಕ್ಸ್ ಶೋರೂಂ ದರವನ್ನು ಹೊಂದಿದೆ. 2-ಲೀಟರ್ ಟರ್ಬೊ-ಪೆಟ್ರೋಲ್ ಮೈಲ್ಡ್ ಹೈಬ್ರಿಡ್ ಎಂಜಿನ್ ಹಾಗೂ 8-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದೆ. 9-ಇಂಚಿನ ಸೆಂಟರ್ ಡಿಸ್ಪ್ಲೇ, 12.3-ಇಂಚಿನ ಡ್ರೈವರ್ ಡಿಸ್‌ಪ್ಲೇ, 4-ಜೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications