ಸದ್ದಿಲ್ಲದೆ ದುಬಾರಿ ಎಂಜಿ ಎಲೆಕ್ಟ್ರಿಕ್ ಕಾರು ಖರೀದಿಸಿದ ಬಿಗ್‌ಬಾಸ್ ಸ್ಪರ್ಧಿ.. ಯಾರಿವರು?

ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 5ರಲ್ಲಿ ಭಾಗವಹಿಸಿದ್ದ ಸಮೀರ್ ಆಚಾರ್ಯ (Sameer Acharya) ದೊಡ್ಡ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸುದೀರ್ಘ 101 ದಿನಗಳ ಕಾಲ ಬಿಗ್‌ಬಾಸ್ ಮನೆಯಲ್ಲಿರುವ ಮೂಲಕ ಸಮೀರ್ ಆಚಾರ್ಯ ಪ್ರೇಕ್ಷಕರನ್ನು ಕೂಡ ರಂಜಿಸಿದ್ದರು. ಆ ಬಳಿಕ, ಪತ್ನಿ ಶ್ರಾವಣಿ ಅವರೊಂದಿಗೆ 'ರಾಜಾ ರಾಣಿ' ಶೋನಲ್ಲಿ ಪಾಲ್ಗೊಂಡು ಸೆಲೆಬ್ರಿಟಿ ಕಪಲ್ ಆಗಿ ಹೆಸರು ಮಾಡಿದ್ದರು. ಸದ್ಯ ಸಮೀರ್ ಆಚಾರ್ಯ ಅವರು ಸೋಷಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಇದ್ದು, ಹಲವು ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಇತ್ತೀಚೆಗೆ ಸಮೀರ್ ಆಚಾರ್ಯ ಹೊಚ್ಚ ಹೊಸ 'ಎಂಜಿ ಜಡ್ಎಸ್ ಇವಿ'ಯನ್ನು ಖರೀದಿ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನೂತನ ಕಾರಿನ ಕುರಿತಂತೆ ಒಂದಷ್ಟು ವಿಡಿಯೋಗಳನ್ನು ಕೂಡ ಸಮೀರ್ ಆಚಾರ್ಯ, ತಮ್ಮ ಇನ್‌ಸ್ಟಾಗ್ರಾಮ್ ಹಂಚಿಕೊಂಡಿದ್ದಾರೆ. ಆದರೆ, ಅವರು ಈ ಕಾರಿನ ಯಾವ ರೂಪಾಂತರವನ್ನು (ವೇರಿಯೆಂಟ್) ಕೊಂಡುಕೊಂಡಿದ್ದಾರೆ ಎಂಬುದು ತಿಳಿದುಬಂದಿಲ್ಲ.

Bigg Boss Kannada 5 Contestant Sameer Acharya Buys New MG ZS EV Details

ಪ್ರಸ್ತುತ ಗ್ರಾಹಕರ ಖರೀದಿಗೆ ಸಿಗುವ ಹೊಸ ಎಂಜಿ ಜಡ್ಎಸ್ ಇವಿ (MG ZS EV) ವಿಶೇಷತೆ ಬಗ್ಗೆ ಹೇಳುವುದಾದರೆ, ಇದು ರೂ.18.98 ಲಕ್ಷದಿಂದ ರೂ.25.75 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಕ್ಸಿಕ್ಯೂಟಿವ್, ಎಕ್ಸೈಟ್ ಪ್ರೊ ಮತ್ತು ಎಕ್ಸ್‌ಕ್ಲೂಸಿವ್ ಪ್ಲಸ್ ಸೇರಿದಂತೆ ವಿವಿಧ ರೂಪಾಂತರಗಳ (ವೇರಿಯೆಂಟ್) ಆಯ್ಕೆಯನ್ನು ಪಡೆದಿದೆ.

ಈ ಕಾರು ಹೊರಭಾಗದಲ್ಲಿಯೂ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಅರೋರಾ ಸಿಲ್ವರ್, ಸ್ಟಾರ್ರಿ ಬ್ಲ್ಯಾಕ್ ಮತ್ತು ಕ್ಯಾಂಡಿ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 448 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.

Bigg Boss Kannada 5 Contestant Sameer Acharya Buys New MG ZS EV Details

ನೂತನ ಎಂಜಿ ಜಡ್ಎಸ್ ಇವಿಯಲ್ಲಿ 50.3 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 461 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿರುವ ಎಲೆಕ್ಟ್ರಿಕ್ ಮೋಟಾರ್ 177 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಹೊಸ ಎಂಜಿ ಜಡ್ಎಸ್ ಇವಿಯಲ್ಲಿರುವ ಬ್ಯಾಟರಿಯು 7.4 ಕೆಡಬ್ಲ್ಯೂ ಎಸಿ ಚಾರ್ಜರ್ ಬಳಕೆಯಲ್ಲಿ 0 ರಿಂದ 100% ಚಾರ್ಜ್ ಆಗಲು 8.5 ರಿಂದ 9 ಗಂಟೆ ತೆಗೆದುಕೊಳ್ಳುತ್ತದೆ. ಮತ್ತೊಂದು 50 ಕೆಡಬ್ಲ್ಯೂ ಡಿಸಿ ಫಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಈ ಕಾರಿನ ಬ್ಯಾಟರಿ ಪ್ಯಾಕ್, 0 ರಿಂದ 80% ಚಾರ್ಜ್ ಆಗುವುದಕ್ಕೆ ಕೇವಲ 60 ನಿಮಿಷ ತೆಗೆದುಕೊಳ್ಳುತ್ತದೆ.

ಈ ಎಂಜಿ ಜಡ್ಎಸ್ ಇವಿ 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, ಆಟೋ ಎಸಿ, 6-ಸ್ಪೀಕರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೂ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, December 28, 2024, 15:32 [IST]
English summary
Bigg boss kannada 5 contestant sameer acharya buys new mg zs ev details
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+